MLC Ravi Kumar's impromptu speech has put the state BJP in a dilemma.

ರಾಜ್ಯ ಬಿಜೆಪಿಯನ್ನು ಇಕ್ಕಟ್ಟಿಗೆ ಸಿಲುಕಿಸಿದ ಎಂಎಲ್ಸಿ ರವಿ ಕುಮಾರ್ ಬೇಕಾಬಿಟ್ಟಿ ಮಾತು.. ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಾಗ್ದಾಳಿ

ಬೆಂಗಳೂರು: ಇತ್ತೀಚಿಗಷ್ಟೇ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ (Lakshmi Hebbalkar) ವಿರುದ್ಧ ಸಿಟಿ ರವಿ (C.T.Ravi)ಅವರ ಅವಹೇಳನಾಕಾರಿ ಹೇಳಿಕೆ ಆರೋಪದಿಂದ ತೀವ್ರ ಮುಜುಗರಕ್ಕೆ ಒಳಗಾಗಿರುವ ರಾಜ್ಯ ಬಿಜೆಪಿ (BJP), ಬಳಿಕ ಎಂಎಲ್ಸಿ ರವಿ ಕುಮಾರ್ (Ravi Kumar) ಅವರು ಪದೇ ಪದೇ ಮಹಿಳಾ ಅಧಿಕಾರಿಗಳ ಕುರಿತು ಆಡುತ್ತಿರುವ ಬೇಜವಬ್ದಾರಿ ಮಾತು ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸುತ್ತಿದೆ.

ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ರವಿ ಕುಮಾರ್ ವಿರುದ್ಧ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಕಿಡಿ ಕಾರಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ಅವರು, ಕರ್ನಾಟಕದ ಬಿಜೆಪಿ ನಾಯಕರಿಂದ ಮಹಿಳೆಯರ ನಿಂದನೆ ನಿರಂತರವಾಗಿ ನಡೆಯುತ್ತಿದೆ. ಓರ್ವ ಹಿರಿಯ ಮಹಿಳಾ ಐಎಎಸ್ ಅಧಿಕಾರಿ ಬಗ್ಗೆ ಕೆಟ್ಟದಾಗಿ ಮಾತನಾಡಿರುವ ರೀತಿ ಬಿಜೆಪಿ ಎಂಎಲ್ಸಿ ಅವರ ಮನಸ್ಥಿತಿ ಎಂಥಹದ್ದು ಎಂದು ತೋರಿಸುತ್ತದೆ.

ರವಿ ಕುಮಾರ್ ಅವರು ಸಮಸ್ತ ಮಹಿಳಾ ಕುಲಕ್ಕೆ ಮಾಡಿರುವ ಅವಮಾನ ಇದಾಗಿದೆ. ರವಿಕುಮಾರ್ ಅವರ ಹೇಳಿಕೆಯನ್ನು ಕೇಂದ್ರ ಬಿಜೆಪಿ ನಾಯಕರು ಸಮರ್ಥಿಸಿಕೊಳ್ಳುವರೇ ಎಂದು ಸಚಿವರು ಪ್ರಶ್ನಿಸಿದ್ದಾರೆ.

ಕಳೆದ ಬೆಳಗಾವಿ ಅಧಿವೇಶನದ ವೇಳೆಯಲ್ಲಿ ಸಿಟಿ ರವಿ ಅವರು ನನ್ನ ಬಗ್ಗೆ ಕೆಟ್ಟಾಗಿ ಮಾತನಾಡಿದಾಗ ಆ ಪಕ್ಷದ ನಾಯಕರು ಒಂದೂ ಮಾತನಾಡಲಿಲ್ಲ. ಇಂಥ ನಾಯಕರ ಹೇಳಿಕೆಗಳಿಗೆ ಕೇಂದ್ರದ ನಾಯಕರು ಪರೋಕ್ಷ ಬೆಂಬಲ ನೀಡಿದಂತಿದೆ. ಇದು ಮಹಿಳೆಯರಿಗೆ ಬಿಜೆಪಿ ನಾಯಕರು ಕೊಡುವ ಗೌರವ ಎಂತದ್ದು ಎಂಬುದನ್ನು ತೋರಿಸುತ್ತದೆ.

ಜವಾಬ್ದಾರಿಯುತ ಸ್ಥಾನದಲ್ಲಿದ್ದುಕೊಂಡು ಇಂಥ ಅವಹೇಳನಕಾರಿ ಪದಗಳನ್ನು ಬಳಸುವ ಬಿಜೆಪಿ ನಾಯಕರಿಗೆ ಬುದ್ದಿ ಭ್ರಮಣೆಯಾಗಿದೆ ಅನಿಸುತ್ತದೆ. ಇನ್ನು ಮುಂದಾದರೂ ಇಂಥ ಹೇಳಿಕೆಗಳನ್ನು ನೀಡದೆ, ಜವಾಬ್ದಾರಿಯಿಂದ ವರ್ತಿಸಲಿ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಕ್ಷಮೆಯಾಚನೆಗೆ ಪಟ್ಟು

ಸಾರ್ವಜನಿಕವಾಗಿ ಮಹಿಳಾ ಅಧಿಕಾರಿ ಬಗ್ಗೆ ಕೆಟ್ಟದಾಗಿ ಮಾತನಾಡಿರುವ ರವಿ ಕುಮಾರ್ ಅವರು ಕೂಡಲೇ ಕ್ಷಮೆಯಾಚಿಸಬೇಕು ಎಂದು ಸಚಿವರು ಆಗ್ರಹಿಸಿದ್ದಾರೆ.

ತಮ್ಮ ತಪ್ಪನ್ನು ಅರಿವು ಮಾಡಿಕೊಂಡು ಕ್ಷಮೆ ಕೇಳಲಿ, ಇಲ್ಲವಾದರೆ ರವಿ ಕುಮಾರ್ ಅವರು ಸಾರ್ವಜನಿಕರ ಪ್ರತಿಭಟನೆ ಎದುರಿಸಬೇಕಾದೀತು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಎಚ್ಚರಿಕೆ ನೀಡಿದ್ದಾರೆ.

ರಾಜಕೀಯ

ನೇಮಕಾತಿಯಲ್ಲಿ ಸಮುದಾಯ ವಿಜ್ಞಾನ ಪದವೀಧರರಿಗೆ ಆದ್ಯತೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ನೇಮಕಾತಿಯಲ್ಲಿ ಸಮುದಾಯ ವಿಜ್ಞಾನ ಪದವೀಧರರಿಗೆ ಆದ್ಯತೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಸಮುದಾಯ ವಿಜ್ಞಾನ ಪದವೀಧರರಿಗೆ ಕನಿಷ್ಠ ಶೇಕಡಾ 20 ರಿಂದ 25 ರಷ್ಟು ಮೀಸಲಾತಿ ನೀಡಲು ಕ್ರಮ ಕೈಗೊಳ್ಳುವುದು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ (Lakshmi Hebbalkar)

[ccc_my_favorite_select_button post_id="110777"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ ಮಹಿಳೆ

ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ

ಗ್ರಾಮಪಂಚಾಯಿತಿ ಅದ್ಯಕ್ಷೆಗೆ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಐ ಲವ್ ಯು (I Love You) ಎಂದು ಕಿರುಕುಳ ಆರೋಪ ಹಿನ್ನೆಲೆ, ಮಹಿಳೆಯೋರ್ವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿರುವ

[ccc_my_favorite_select_button post_id="110702"]
ದೊಡ್ಡಬಳ್ಳಾಪುರ: ಅಪಘಾತದಲ್ಲಿ ಗಾಯಗೊಂಡವರನ್ನು ಕರೆದೊಯ್ಯುತ್ತಿದ್ದ  ಅಂಬುಲೆನ್ಸ್ಗೆ ಆಕ್ಸಿಡೆಂಟ್..!| Video ನೋಡಿ

ದೊಡ್ಡಬಳ್ಳಾಪುರ: ಅಪಘಾತದಲ್ಲಿ ಗಾಯಗೊಂಡವರನ್ನು ಕರೆದೊಯ್ಯುತ್ತಿದ್ದ ಅಂಬುಲೆನ್ಸ್ಗೆ ಆಕ್ಸಿಡೆಂಟ್..!| Video ನೋಡಿ

ಮಹಿಳೆಯೋರ್ವರನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ 108 ಅಂಬುಲೆನ್ಸ್ಗೆ (108 Ambulance) ಕಾರೊಂದು ಡಿಕ್ಕಿ ಹೊಡೆದಿರುವ ಘಟನೆ (Accident) ತಾಲೂಕಿನ

[ccc_my_favorite_select_button post_id="110756"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!