Let's put Ravikumar's statement issue aside: B.Y.Vijayendra

ರವಿಕುಮಾರ್ ಹೇಳಿಕೆ ವಿಚಾರ ಒಂದೆಡೆ ಇರಲಿ: ಬಿ.ವೈ.ವಿಜಯೇಂದ್ರ

ಬೆಂಗಳೂರು: ಮುಖ್ಯಮಂತ್ರಿಗಳು ಐಎಎಸ್ ಅಧಿಕಾರಿಗಳ ವಿರುದ್ಧ ಅವಮಾನ ಆಗುವಂತೆ ನಡೆದುಕೊಂಡಾಗ ಐಎಎಸ್ ಅಧಿಕಾರಿಗಳ ಅಸೋಸಿಯೇಷನ್ ಎಲ್ಲಿ ಹೋಗಿತ್ತು? ಆಗ ಅವರು ಯಾಕೆ ಮುಖ್ಯಮಂತ್ರಿಗಳ ವಿರುದ್ಧ ದೂರು ನೀಡಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ (B.Y.Vijayendra) ಪ್ರಶ್ನಿಸಿದ್ದಾರೆ.

ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ವಿಧಾನಪರಿಷತ್ ಸದಸ್ಯ ರವಿಕುಮಾರ್ ಅವರ ಹೇಳಿಕೆ ಕುರಿತು ಮಾಧ್ಯಮಗಳನ್ನು ಗಮನಿಸಿದ್ದೇನೆ. ರವಿಕುಮಾರ್ ಅವರು ಈ ಸಂಬಂಧ ಸ್ಪಷ್ಟನೆಯನ್ನೂ ನೀಡಿದ್ದಾರೆ. ತದನಂತರ ಐಎಎಸ್ ಅಧಿಕಾರಿಗಳ ಅಸೋಸಿಯೇಷನ್‍ನವರು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ದೂರು ನೀಡಿದ್ದಾಗಿ ಮಾಹಿತಿ ಬಂದಿದೆ. ಕಾಂಗ್ರೆಸ್ ಪಕ್ಷದ ಕೆಲವು ಮುಖಂಡರು ನಿನ್ನೆ ಹೊರಟ್ಟಿಯವರನ್ನು ಭೇಟಿ ಮಾಡಿ ದೂರು ನೀಡಿದ್ದಾರೆ; ಎಫ್‍ಐಆರ್ ದಾಖಲಾಗಿದೆ ಎಂದು ಈ ಕುರಿತ ಪ್ರಶ್ನೆಗೆ ಉತ್ತರಿಸಿದರು.

ರವಿಕುಮಾರ್ ಅವರ ವಿಚಾರ ಒಂದೆಡೆ ಇರಲಿ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸ್ವತಃ ಬೆಳಗಾವಿಯಲ್ಲಿ ಬಹಿರಂಗ ಸಭೆಯಲ್ಲಿ ಒಬ್ಬ ಹಿರಿಯ ಪೊಲೀಸ್ ಅಧಿಕಾರಿಗೆ ಕಪಾಳಕ್ಕೆ ಹೊಡೆಯಲು ಹೋದರಲ್ಲವೇ? ಆಗ ಈ ಅಸೋಸಿಯೇಷನ್ ಎಲ್ಲಿ ಹೋಗಿತ್ತು ಎಂದು ಪ್ರಶ್ನಿಸಿದರು.

ಇದೇ ಮುಖ್ಯಮಂತ್ರಿಗಳು ಇನ್ನೊಂದು ಕಡೆ ಸರಕಾರಿ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳನ್ನು ‘ಏಯ್ ಎದ್ದೇಳು’ ಎಂದು ಅಪಮಾನ ಮಾಡಿದ್ದರು. ಆಗ ಐಎಎಸ್ ಅಸೋಸಿಯೇಷನ್ ಎಲ್ಲಿ ಹೋಗಿತ್ತು ಎಂದು ಕೇಳಿದರು. ಇದು ಕೂಡ ಚರ್ಚೆ ಆಗಲಿ. ಜನರು ಕೂಡ ಎಲ್ಲವನ್ನೂ ಗಮನಿಸುತ್ತಿದ್ದಾರೆ ಎಂದು ತಿಳಿಸಿದರು.

ಎಲ್ಲ ಇಲಾಖೆಗಳಲ್ಲಿ ಸಂಬಳ ನೀಡಲಾಗದ ಪರಿಸ್ಥಿತಿ..

ಮುಖ್ಯಮಂತ್ರಿ ಸ್ಥಾನಕ್ಕಾಗಿ ಬಹಳ ಜನ ಪ್ರಾರ್ಥನೆ ಮಾಡುತ್ತಿದ್ದಾರೆ; ಪ್ರಯತ್ನ ಮಾಡುತ್ತಿದ್ದಾರೆ. ಸುರ್ಜೇವಾಲಾರನ್ನು ಕರೆಸಿ ಭೂಮಿ ಪೂಜೆ, ಗುದ್ದಲಿ ಪೂಜೆ ಮಾಡಿಸಲಿದ್ದಾರೆ. ಬರುವ ದಿನಗಳಲ್ಲಿ ಏನೇನಾಗುತ್ತೋ ಕಾದು ನೋಡೋಣ ಎಂದು ಇನ್ನೊಂದು ಪ್ರಶ್ನೆಗೆ ಉತ್ತರ ನೀಡಿದರು. ಸಿದ್ದರಾಮಯ್ಯನವರು ರಾಜೀನಾಮೆ ನೀಡಿದರೆ ಯಾರು ಮುಖ್ಯಮಂತ್ರಿ ಎಂಬುದು ನಮಗೆ ಮುಖ್ಯವಲ್ಲ; ಕಾಂಗ್ರೆಸ್ ಸರಕಾರದ ಬಗ್ಗೆ ರಾಜ್ಯದ ಜನರು ಛೀಮಾರಿ ಹಾಕುತ್ತಿದ್ದಾರೆ. ಸಂಕಷ್ಟದಲ್ಲಿರುವ ರೈತರ ಬಗ್ಗೆ ಈ ಸರಕಾರಕ್ಕೆ ಕಾಳಜಿ ಇಲ್ಲ ಎಂದು ಬಿ.ವೈ. ವಿಜಯೇಂದ್ರ ಅವರು ಟೀಕಿಸಿದರು.

ಬಡವರಿಗೆ ಮನೆ, ಗಂಗಾ ಕಲ್ಯಾಣ ಯೋಜನೆ ನೀಡಲು ಈ ಕಾಂಗ್ರೆಸ್ ಸರಕಾರಕ್ಕೆ ಸಾಧ್ಯ ಆಗುತ್ತಿಲ್ಲ. ಮುಖ್ಯಮಂತ್ರಿ ಯಾರು ಇದ್ದರೆಷ್ಟು? ಬಿಟ್ಟರೆಷ್ಟು. ಅಭಿವೃದ್ಧಿ ಆಗುತ್ತಿಲ್ಲ. ರಾಜ್ಯದ ಇತಿಹಾಸದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಮೇಲೆ ಮೊದಲ ಬಾರಿಗೆ ಸರಕಾರಿ ನೌಕರರಿಗೆ ಸಂಬಳ ಕೊಡಲು ಸಾಧ್ಯ ಆಗುತ್ತಿಲ್ಲ ಎಂದು ಆಕ್ಷೇಪಿಸಿದರು.

ಪೊಲೀಸ್ ಇಲಾಖೆಯಲ್ಲಿ ನಿಗದಿತ ದಿನದಂದು ವೇತನ ಕೊಡಲು ಸಾಧ್ಯ ಆಗುತ್ತಿಲ್ಲ ಎಂದು ವಿವರಿಸಿದರು. ನೀರಾವರಿ ಇಲಾಖೆಯಲ್ಲಿ 2-3 ತಿಂಗಳಿನಿಂದ ಸಂಬಳ ಸರಿಯಾಗಿ ಆಗುತ್ತಿಲ್ಲ. ಎಲ್ಲ ಇಲಾಖೆಗಳಲ್ಲೂ ಇದೇ ಪರಿಸ್ಥಿತಿ ಇದೆ ಎಂದು ತಿಳಿಸಿದರು. ಇಂಥ ದರಿದ್ರ ಸರಕಾರ ಬದುಕಿದೆಯೇ ಎಂದು ಜನಸಾಮಾನ್ಯರು ಮಾತನಾಡುತ್ತಿದ್ದಾರೆ. ಯಾರೇ ಮುಖ್ಯಮಂತ್ರಿ ಇದ್ದರೂ ಪರಿಸ್ಥಿತಿ ಬದಲಾಗದು ಎಂದು ನುಡಿದರು.

ಪ್ರಿಯಾಂಕ್ ಖರ್ಗೆ ತಿರುಕನ ಕನಸು

ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಆರೆಸ್ಸೆಸ್ ನಿಷೇಧಿಸುವುದಾಗಿ ಪ್ರಿಯಾಂಕ್ ಖರ್ಗೆ ಅವರು ಹೇಳಿದ್ದರ ಕುರಿತು ಪತ್ರಕರ್ತರು ಪ್ರಶ್ನಿಸಿದರು. ಮೂರ್ಖತನದ ಹೇಳಿಕೆಗೆ ನಾವು ಪ್ರತಿಕ್ರಿಯೆ ಕೊಡಲಾಗುವುದಿಲ್ಲ; ಕೇಂದ್ರದಲ್ಲಿ ನರೇಂದ್ರ ಮೋದಿ ಜೀ ಅವರ ಸರಕಾರವು ಮೂರನೇ ಬಾರಿ ಅಧಿಕಾರಕ್ಕೆ ಬಂದಿದೆ. ನರೇಂದ್ರ ಮೋದಿ ಜೀ ಅವರ ಜನಪ್ರಿಯತೆಯೂ ಜಾಸ್ತಿ ಆಗುತ್ತಿದೆ.

ದೇಶವೂ ಅಭಿವೃದ್ಧಿ ಪಥದಲ್ಲಿ ಮುಂದೆ ಸಾಗುತ್ತಿದೆ. ಪುಕ್ಸಟ್ಟೆ ಭಾಷಣ ಮಾಡಿದರೆ ಭಾರತ 4ನೇ ದೊಡ್ಡ ಆರ್ಥಿಕ ಶಕ್ತಿ ಆಗಲು ಸಾಧ್ಯ ಇರಲಿಲ್ಲ; ಯಾವ ರೀತಿ ನರೇಂದ್ರ ಮೋದಿ ಜೀ ಅವರು ಕಳೆದ 11 ವರ್ಷಗಳಲ್ಲಿ ಅಭಿವೃದ್ಧಿ ಕೆಲಸ ಮಾಡಿದ್ದಾರೆ, ದೇಶವನ್ನು ಮುನ್ನಡೆಸಿದ್ದಾರೋ ಅದರಿಂದ ಈ ಸ್ಥಾನ ಲಭಿಸಿದೆ. ಪ್ರಿಯಾಂಕ್ ಖರ್ಗೆ ರಾತ್ರಿ ಕೇಂದ್ರದಲ್ಲಿ ಅಧಿಕಾರಕ್ಕೆ ಬರುವ ತಿರುಕನ ಕನಸು ಕಾಣುತ್ತಿದ್ದರೆ ಅದಕ್ಕೆ ನಮ್ಮ ಅಭ್ಯಂತರ ಇಲ್ಲ ಎಂದು ತಿಳಿಸಿದರು.

ರಾಜ್ಯದಲ್ಲಿ ಸರಕಾರ ಬದಲಾಗುವ ಕುರಿತು ನಮ್ಮ ಪಕ್ಷದವರು ಮಾತ್ರವಲ್ಲ; ಜನಸಾಮಾನ್ಯರೂ ಮಾತನಾಡುತ್ತಿದ್ದಾರೆ. ಆಡಳಿತ ಪಕ್ಷದ ಶಾಸಕರೂ ಮಾತನಾಡುತ್ತಿದ್ದಾರೆ. ರಾಮನಗರದ ಶಾಸಕ ಇಕ್ಬಾಲ್ ಅವರ ಹೇಳಿಕೆಗೆ ಮುಖ್ಯಮಂತ್ರಿ ಪ್ರತಿಕ್ರಿಯೆ ಏನು ಎಂದು ಈ ಸಂಬಂಧ ಪ್ರಶ್ನೆಗೆ ಮರುಪ್ರಶ್ನೆ ಹಾಕಿದರು.

ಕೇಂದ್ರದ ಸಚಿವರು, ನಮ್ಮೆಲ್ಲರ ಹಿರಿಯರಾದ ಪ್ರಲ್ಹಾದ್ ಜೋಶಿ ಅವರು ನಮ್ಮ ಪಕ್ಷದೊಳಗೆ ಕೆಲವು ಜಿಲ್ಲೆಗಳಲ್ಲಿ ಇದ್ದ ಆಂತರಿಕ ಸಮಸ್ಯೆ ಪರಿಹರಿಸುತ್ತಿದ್ದಾರೆ. ಸಣ್ಣಪುಟ್ಟ ಸಮಸ್ಯೆ ಪರಿಹರಿಸುವಂತೆ ನಾನೇ ಮನವಿ ಮಾಡಿದ್ದೆ. ಅದರಂತೆ ಸಮಯ ಕೊಟ್ಟು ಸಮಸ್ಯೆ ತಿಳಿಗೊಳಿಸುವ ಕೆಲಸ ಮಾಡುತ್ತಿದ್ದಾರೆ ಎಂದರು.

ರಾಜಕೀಯ

ಚನ್ನರಾಯಪಟ್ಟಣ ರೈತ ಹೋರಾಟಗಾರರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ

ಚನ್ನರಾಯಪಟ್ಟಣ ರೈತ ಹೋರಾಟಗಾರರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ

ದೇವನಹಳ್ಳಿ ಚನ್ನರಾಯಪಟ್ಟಣದ ರೈತ ಹೋರಾಟಗಾರರು, ಸ್ಥಳೀಯ ಮುಖಂಡರು ಹಾಗೂ ಹೋರಾಟ ಒಕ್ಕೂಟದ ಮುಖಂಡರೊಂದಿಗೆ ಸಭೆ ನಡೆಸಿದ Cmsiddaramaiah

[ccc_my_favorite_select_button post_id="110536"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಬಾಲ್ಯ ವಿವಾಹ ತಡೆಯುವಲ್ಲಿ ನಿರ್ಲಕ್ಷ್ಯ ತೋರಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ; ಜಿಲ್ಲಾಧಿಕಾರಿ ಎ.ಬಿ.ಬಸವರಾಜು

ಬಾಲ್ಯ ವಿವಾಹ ತಡೆಯುವಲ್ಲಿ ನಿರ್ಲಕ್ಷ್ಯ ತೋರಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ; ಜಿಲ್ಲಾಧಿಕಾರಿ

ಬಾಲ್ಯ ವಿವಾಹಗಳನ್ನು ತಡೆಯುವ ನಿಟ್ಟಿನಲ್ಲಿ ಅಧಿಕಾರಿಗಳು ಸದಾ ಜಾಗೃತರಾಗಿದ್ದು, ಬಾಲ್ಯ ವಿವಾಹ (Child marriage) ಪ್ರಕರಣಗಳನ್ನು ಶೂನ್ಯಕ್ಕೆ ತರುವಲ್ಲಿ ಸೂಕ್ತ ಕ್ರಮ ವಹಿಸಿ ಎಂದು ಜಿಲ್ಲಾಧಿಕಾರಿ ಎ.ಬಿ.ಬಸವರಾಜು

[ccc_my_favorite_select_button post_id="110547"]
ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ವಿದ್ಯುತ್ ತಂತಿಬಿದ್ದು ಇಬ್ಬರು ಕಾರ್ಮಿಕರು (laborer) ಗಂಭೀರವಾಗಿ ಗಾಯಗೊಂಡರುವ ಘಟನೆ ಕರೇನಹಳ್ಳಿಯಲ್ಲಿ ಮಂಗಳವಾರ ಮದ್ಯಾಹ್ನ ನಡೆದಿದೆ.

[ccc_my_favorite_select_button post_id="110354"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!