Commission orders to issue purchase order to Golden Homes Builders for breach of contract

ಮಾತು ತಪ್ಪಿದ ಗೋಲ್ಡನ್ ಹೋಮ್ಸ್ ಬಿಲ್ಡರ್ಸ್‍ಗೆ ಕ್ರಯ ಪತ್ರ ಬರೆದು ಕೊಡಲು ಆಯೋಗದ ಆದೇಶ

ಧಾರವಾಡ: ಪ್ಲಾಟ್ ನೀಡದೆ ಮಾತು ತಪ್ಪಿದ ಗೋಲ್ಡನ್ ಹೋಮ್ಸ್ ಬಿಲ್ಡರ್ಸ್‍ಗೆ (Golden Homes Builders) ಕ್ರಯ ಪತ್ರ ಬರೆದು ಕೊಡುವಂತೆ ಧಾರವಾಡ ಜಿಲ್ಲಾ ಗ್ರಾಹಕರ ಆಯೋಗ ಆದೇಶಿಸಿದೆ.

ವಿವರ: ಹುಬ್ಬಳ್ಳಿಯ ಗೋಕುಲ ರಸ್ತೆಯ ನಿವಾಸಿ ಮಲ್ಲಿಕಾರ್ಜುನ ಕ್ಯಾದಿ ಎನ್ನುವವರು ಗೋಲ್ಡನ್ ಹೋಮ್ಸ ಕಾರ್ಪೋರೆಷನ್‍ರವರು ಹುಬ್ಬಳ್ಳಿ ತಾಲೂಕಿನ ಮಾವನೂರ ಗ್ರಾಮದಲ್ಲಿ ನಿರ್ಮಿಸುತ್ತಿದ್ದ ಬಡಾವಣೆಯ ಪ್ಲಾಟ್ ನಂ.495 ನ್ನು ರೂ.2,40,000 ಗೆ ಖರೀದಿಸಿದ್ದರು.

ಈ ಬಗ್ಗೆ ಗೋಲ್ಡನ್ ಹೋಮ್ಸನ ಮಾಲಿಕ ಮಿಲನ್ ಪಾರಿಕ ದೂರುದಾರರಿಗೆ ದಿ:20/03/2007 ರಂದು ಖರೀದಿ ಕರಾರು ಪತ್ರ ಬರೆದುಕೊಟ್ಟಿದ್ದರು. ದೂರುದಾರರು ಕಂತಿನ ರೂಪದಲ್ಲಿ ಪೂರ್ತಿ ಹಣ ಸಂದಾಯ ಮಾಡಿದ್ದರು. ನಂತರ ಹಲವು ಬಾರಿ ಮೌಖಿಕವಾಗಿ ಮತ್ತು ಪತ್ರದ ಮೂಲಕ ವಿನಂತಿಸಿದರು ಎದುರುದಾರ ಗೋಲ್ಡನ್ ಹೋಮ್ಸರವರು ದೂರುದಾರರಿಗೆ ಖರೀದಿ ಪತ್ರ ನೊಂದಣಿ ಮಾಡಿಕೊಟ್ಟಿರಲಿಲ್ಲ.

ತಮ್ಮ ಹಣವನ್ನು ಎದುರುದಾರರು ವಾಪಸ್ಸುಕೊಟ್ಟಿರಲಿಲ್ಲ. ಅಂತಹ ಎದುರುದಾರರ ನಡಾವಳಿಕೆ ಗ್ರಾಹಕರ ರಕ್ಷಣಾ ಕಾಯಿದೆಯಡಿ ಸೇವಾ ನ್ಯೂನ್ಯತೆ ಆಗುತ್ತದೆ ಅಂತಾ ಹೇಳಿ ಎದುರುದಾರ ಗೋಲ್ಡನ್ ಹೋಮ್ಸರವರ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರುದಾರ ಧಾರವಾಡ ಜಿಲ್ಲಾ ಗ್ರಾಹಕರ ಆಯೋಗಕ್ಕೆ ದೂರು ಸಲ್ಲಿಸಿದ್ದರು.

ಈ ದೂರಿನ ಬಗ್ಗೆ ಕೂಲಂಕುಷವಾಗಿ ವಿಚಾರಣೆ ನಡೆಸಿದ ಆಯೋಗದ ಅಧ್ಯಕ್ಷರಾದ ಈಶಪ್ಪ. ಭೂತೆ ಹಾಗೂ ವಿಶಾಲಾಕ್ಷಿ. ಅ. ಬೋಳಶೆಟ್ಟಿ ಸದಸ್ಯರು, ದೂರುದಾರ ಮತ್ತು ಎದುರುದಾರ ಗೋಲ್ಡನ್ ಹೋಮ್ಸರವರ ಮದ್ಯ 2007 ರಲ್ಲಿ ಪ್ಲಾಟ್ ಖರೀದಿಯ ಬಗ್ಗೆ ಖರೀದಿ ಕರಾರು ಪತ್ರ ಆಗಿದೆ. ಆ ಪತ್ರದಂತೆ ದೂರುದಾರರು ಎದುರುದಾರರಿಗೆ ಖರೀದಿಯ ಪೂರ್ತಿ ಹಣ ರೂ.2,40,000 ಸಂದಾಯ ಮಾಡಿದ್ದಾರೆ. ಖರೀದಿ ಕರಾರು ಪತ್ರದ ಷರತ್ತಿನಂತೆ ದೂರುದಾರರಿಗೆ ಖರೀದಿ ಪತ್ರ ನೋಂದಣಿ ಮಾಡಿಕೊಡುವುದು ಎದುರುದಾರರ ಹೊಣೆ ಮತ್ತು ಕರ್ತವ್ಯವಾಗಿದೆ.

ಈವರೆಗೆ ದೂರುದಾರರು ಹಲವಾರು ಬಾರಿ ವಿನಂತಿಸಿದರೂ ಎದುರುದಾರರು ದೂರುದಾರರಿಗೆ ಖರೀದಿ ಪತ್ರ ನೋಂದಣಿ ಮಾಡಿಕೊಟ್ಟಿಲ್ಲ. ಅಥವಾ ದೂರುದಾರರಿಗೆ ಖರೀದಿ ಮುಂಗಡ ಹಣ ವಾಪಸ್ಸುಕೊಟ್ಟಿಲ್ಲ. ಅಂತಹ ಎದುರುದಾರ ಗೋಲ್ಡನ್ ಹೋಮ್ಸರವರ ನಡಾವಳಿಕೆ ಗ್ರಾಹಕರ ರಕ್ಷಣಾ ಕಾಯಿದೆಯಡಿ ಸೇವಾ ನ್ಯೂನ್ಯತೆ ಆಗುತ್ತದೆ ಅಂತ ಆಯೋಗ ಅಭಿಪ್ರಾಯಪಟ್ಟು ತೀರ್ಪು ನೀಡಿದೆ.

ತೀರ್ಪು ನೀಡಿದ ಒಂದು ತಿಂಗಳೊಳಗಾಗಿ ದೂರುದಾರರಿಗೆ ಅವರು ಖರೀದಿಸಿದ ಪ್ಲಾಟ್ ನಂ.495 ನ್ನು ಹುಬ್ಬಳ್ಳಿಯ ಸಬ್‍ರಿಜಿಸ್ಟ್ರಾರ ಕಛೇರಿಯಲ್ಲಿ ನೊಂದಣಿ ಮಾಡಿಕೊಡುವಂತೆ ಆಯೋಗ ಎದುರುದಾರ ಗೋಲ್ಡನ್ ಹೋಮ್ಸ ಮಾಲೀಕರಿಗೆ ನಿರ್ಧೇಶಿಸಿದೆ.

ಒಂದು ತಿಂಗಳೊಳಗಾಗಿ ಎದುರುದಾರರು ಖರೀದಿ ಪತ್ರ ನೋಂದಣಿ ಮಾಡಿಕೊಡದ್ದಿದ್ದರೆ ದೂರುದಾರರು ಆಯೋಗದ ಮೂಲಕ ಕೋರ್ಟ ಕಮಿಶ್ನರ ನೇಮಿಸಿಕೊಂಡು ಆ ಖರೀದಿ ಪತ್ರ ಮಾಡಿಕೊಳ್ಳಲು ಅರ್ಹರಿದ್ದಾರೆಂದು ಆದೇಶಿಸಿದೆ.

ಅಲ್ಲದೆ ನೋಂದಣಿ ಖರ್ಚು ವೆಚ್ಚವನ್ನು ದೂರುದಾರರೆ ನಿಬಾಯಿಸುವಂತೆ ಸೂಚಿಸಿದೆ.

ರಾಜಕೀಯ

ನೇಮಕಾತಿಯಲ್ಲಿ ಸಮುದಾಯ ವಿಜ್ಞಾನ ಪದವೀಧರರಿಗೆ ಆದ್ಯತೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ನೇಮಕಾತಿಯಲ್ಲಿ ಸಮುದಾಯ ವಿಜ್ಞಾನ ಪದವೀಧರರಿಗೆ ಆದ್ಯತೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಸಮುದಾಯ ವಿಜ್ಞಾನ ಪದವೀಧರರಿಗೆ ಕನಿಷ್ಠ ಶೇಕಡಾ 20 ರಿಂದ 25 ರಷ್ಟು ಮೀಸಲಾತಿ ನೀಡಲು ಕ್ರಮ ಕೈಗೊಳ್ಳುವುದು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ (Lakshmi Hebbalkar)

[ccc_my_favorite_select_button post_id="110777"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ ಮಹಿಳೆ

ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ

ಗ್ರಾಮಪಂಚಾಯಿತಿ ಅದ್ಯಕ್ಷೆಗೆ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಐ ಲವ್ ಯು (I Love You) ಎಂದು ಕಿರುಕುಳ ಆರೋಪ ಹಿನ್ನೆಲೆ, ಮಹಿಳೆಯೋರ್ವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿರುವ

[ccc_my_favorite_select_button post_id="110702"]
ದೊಡ್ಡಬಳ್ಳಾಪುರ: ಅಪಘಾತದಲ್ಲಿ ಗಾಯಗೊಂಡವರನ್ನು ಕರೆದೊಯ್ಯುತ್ತಿದ್ದ  ಅಂಬುಲೆನ್ಸ್ಗೆ ಆಕ್ಸಿಡೆಂಟ್..!| Video ನೋಡಿ

ದೊಡ್ಡಬಳ್ಳಾಪುರ: ಅಪಘಾತದಲ್ಲಿ ಗಾಯಗೊಂಡವರನ್ನು ಕರೆದೊಯ್ಯುತ್ತಿದ್ದ ಅಂಬುಲೆನ್ಸ್ಗೆ ಆಕ್ಸಿಡೆಂಟ್..!| Video ನೋಡಿ

ಮಹಿಳೆಯೋರ್ವರನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ 108 ಅಂಬುಲೆನ್ಸ್ಗೆ (108 Ambulance) ಕಾರೊಂದು ಡಿಕ್ಕಿ ಹೊಡೆದಿರುವ ಘಟನೆ (Accident) ತಾಲೂಕಿನ

[ccc_my_favorite_select_button post_id="110756"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!