ದೊಡ್ಡಬಳ್ಳಾಪುರ: ನಗರದ ದರ್ಜಿಪೇಟೆ ಪಾಂಡುರಂಗಸ್ವಾಮಿ ದೇವಾಲಯದಲ್ಲಿ ಭಾವಸಾರ ಕ್ಷತ್ರಿಯ ಸಮಾಜದವತಿಯಿಂದ ಆಷಾಢ ಶುದ್ಧ ಏಕಾದಶಿ (Ekadashi) ಅಂಗವಾಗಿ ವಿಶೇಷ ಪೂಜಾ ಕಾರ್ಯಕ್ರಮ ಆಯೋಜಿಸಲಾಗಿದೆ.
ಜುಲೈ6 ರಂದು ಬೆಳಗ್ಗೆ ಪಂಚಾಮೃತ ಅಭಿಷೇಕ ಏಕಾದಶಿ ಅಂಗವಾಗಿ ವಿಶೇಷ ಅಲಂಕಾರ ಹಾಗೂ ಪೂಜಾ ಕಾಠ್ಯಕ್ರಮ ಹಾಗೂ ಸಂಜೆ 7 ಗಂಟೆಗೆ ಪಂಡರಿ ಭಜನೆ, ವಿಷ್ಣು ಮತ್ತು ಲಲಿತಾ ಸಹಸ್ರನಾಮ ಪಾರಾಯಣ ನಡೆಯಲಿವೆ.
ಜುಲೈ 7ರಂದು ನಗರದ ಪ್ರಮುಖ ಬೀದಿಗಳಲ್ಲಿ ಪಾಂಡುರಂಗಸ್ವಾಮಿ ಮೆರವಣಿಗೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.