ದೊಡ್ಡಬಳ್ಳಾಪುರ: ನಗರಸಭೆ ಮಾಜಿ ಅಧ್ಯಕ್ಷೆ ಸುಧಾರಾಣಿ ಲಕ್ಷ್ಮೀ ನಾರಾಯಣ್ (Sudharani Lakshmi Narayan) ಅವರ ತಾಯಿ ಆರ್.ರಾಜೇಶ್ವರಿ ಅವರು ನಿಧನರಾಗಿದ್ದಾರೆ. ಅವರಿಗೆ 65 ವರ್ಷ ವಯಸ್ಸಾಗಿತ್ತು.
ಅನಾರೋಗ್ಯದಿಂದ ಬಳಲುತ್ತಿದ್ದ ರಾಜೇಶ್ವರಿ ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾರೆ.
ಮೃತರು ಮಗ ಮತ್ತು ಮಗಳನ್ನು ಅಗಲಿದ್ದಾರೆ.
ಮೃತರ ಅಂತ್ಯಕ್ರಿಯೆ ನಾಳೆ (ಜುಲೈ.06) ಬೆಳಗ್ಗೆ 11 ಗಂಟೆಗೆ ಮುಕ್ತಿಧಾಮದಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.