ಬೆಂಗಳೂರು ಗ್ರಾಮಾಂತರ ಜಿಲ್ಲೆ; ಹೊಸಕೋಟೆ ತಾಲೂಕಿನ ಸೊಣ್ಣಹಳ್ಳಿಪುರ ಗ್ರಾಮದ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನಿರುದ್ಯೋಗಿ ಪುರುಷ-ಮಹಿಳೆಯರಿಗಾಗಿ 12 ದಿನಗಳ ಕಾಲಾವಧಿಯ ಉಚಿತ ಫಾಸ್ಟ್ ಫುಡ್ ಸ್ಟಾಲ್ ಉದ್ಯಮಿ ತರಬೇತಿಯನ್ನು (Fast Food Stall Entrepreneur Training) ಹಮ್ಮಿಕೊಳ್ಳಲಾಗಿದೆ.
ಆಸಕ್ತಕರು 18 ವರ್ಷ ಮೇಲ್ಪಟ್ಟ 45 ವರ್ಷದೊಳಗಿನವರು ಜುಲೈ.07ರ ಸೋಮವಾರ ಸಂಸ್ಥೆಯಲ್ಲಿ ನಡೆಯುವ ತರಬೇತಿಯಲ್ಲಿ ಪಡಿತರ ಚೀಟಿ, ಆಧಾರ್ ಕಾರ್ಡ್, 3 ಪಾಸ್ ಪೋರ್ಟ್ ಅಳತೆಯ ಭಾವಚಿತ್ರದೊಂದಿಗೆ ಭಾಗವಹಿಸಬಹುದಾಗಿದೆ.
ಶಿಬಿರಾರ್ಥಿಗಳಿಗೆ ತರಬೇತಿ ಅವಧಿಯಲ್ಲಿ ಉಚಿತವಾಗಿ ತರಬೇತಿ, ಊಟ, ವಸತಿ ವ್ಯವಸ್ಥೆ ಕಲ್ಪಿಸಲಾಗುತ್ತದೆ. ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ ನೀಡಲಾಗುತ್ತದೆ. ತರಬೇತಿ ಪೂರ್ಣಗೊಂಡ ನಂತರ ಸಂಸ್ಥೆಯಿಂದ ಪ್ರಮಾಣ ಪತ್ರ ವಿತರಿಸಲಾಗುತ್ತದೆ.
ಗ್ರಾಮೀಣ ಭಾಗದ ಬಿ.ಪಿ.ಎಲ್ ರೇಷನ್ ಕಾರ್ಡ್ ಹೊಂದಿರುವವರಿಗೆ ಆದ್ಯತೆ ನೀಡಲಾಗುತ್ತದೆ.
ಈ ಉಚಿತ ತರಬೇತಿಗೆ ಕೇವಲ 35 ಜನರಿಗೆ ಮಾತ್ರ ಅವಕಾಶವಿದ್ದು, ಮೊದಲು ಬಂದವರಿಗೆ ಮೊದಲ ಆದ್ಯತೆ ಕೊಡಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ಮೊ. 9591514154, 8970476050, 8970446644. ಸಂಪರ್ಕಿಸಬಹುದಾಗಿದೆ.
ಆಸಕ್ತರು ಗೂಗಲ್ ಫಾರ್ಮ್ ಮೂಲಕ ಆನ್ ಲೈನ್ ನಲ್ಲೇ ಅರ್ಜಿ ಸಲ್ಲಿಸಬಹುದು.
https://docs.google.com/forms/d/e/1FAIpQLScttLp4qkdzhidYKn71_YjlyizVQP3nUUx-388akDMpZFzrOA/viewform?usp=header