ಮೈಸೂರು: ಪ್ರೀತಿ ನಿರಾಕರಿಸಿದ್ದಕ್ಕೆ ಪಾಗಲ್ ಪ್ರೇಮಿಯೋರ್ವ ಚಾಕುವಿನಿಂದ ಇರಿದು ಹತ್ಯೆಗೈದಿರುವ (Murder) ಘಟನೆ ಮೈಸೂರಿನಲ್ಲಿ ನಡೆದಿದ್ದು, ಚಿಕಿತ್ಸೆ ಫಲಕಾರಿಯಾಗದೆ ಯುವತಿ ಸಾವನ್ನಪ್ಪಿದ್ದಾರೆ.
ಮೃತ ಯುವತಿಯನ್ನು ಪೂರ್ಣಿಮಾ ಎಂದು ಗುರುತಿಸಲಾಗಿದೆ.
ಚಾಕು ಇರಿತದಿಂದ ಗಂಭೀರವಾಗಿ ಹಲ್ಲೆಗೊಳಗಾಗಿದ್ದ ಪೂರ್ಣಿಮಾ ಅವರನ್ನು ಮೈಸೂರಿನ JSS ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.
ಅಭಿಷೇಕ್ ಎಂಬ ಯುವಕ, ಪಾಂಡವಪುರದ ಎಲೆಗೆರೆ ಗ್ರಾಮದ ಯುವತಿ ಪೂರ್ಣಿಮಾಳನ್ನು ಪ್ರೀತಿಸಿದ್ದ. ಪ್ರೀತಿ ನಿರಾಕರಿಸಿದ್ದಕ್ಕೆ ಪ್ರೇಮ ವೈಫಲ್ಯದಿಂದ ಶುಕ್ರವಾರ ಸಂಜೆ ಯುವತಿಗೆ ಚಾಕು ಇರಿದಿದ್ದನು.
ಗಾಯಾಳು ಯುವತಿ ಸಾವು-ಬದುಕಿನ ನಡುವೆ ಹೋರಾಡಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.
ಮೈಸೂರಿನ ಲಕ್ಷ್ಮೀಪುರ ಠಾಣೆ ಪೊಲೀಸರು ಆರೋಪಿ ಅಭಿಷೇಕ್ ನನ್ನು ಬಂಧಿಸಿದ್ದಾರೆ.