ದೊಡ್ಡಬಳ್ಳಾಪುರ: ನಗರದ ಸರಸ್ವತಿ ಶಾಲೆಯಲ್ಲಿ (Saraswati School) “ಕನ್ನಡ ಬಳಗ”ಎಂಬ ಸಂಘವನ್ನು ಸ್ಥಾಪಿಸಲಾಗಿದೆ.
ವಿದ್ಯಾರ್ಥಿಗಳಲ್ಲಿ ಸಾಹಿತ್ಯದ ಚಟುವಟಿಕೆಗಳನ್ನು ಬೆಳೆಸಿ, ಪ್ರೋತ್ಸಾಹಿಸುವ ಸಲುವಾಗಿ ಹಾಗೂ ವಿದ್ಯಾರ್ಥಿಗಳ ಅಭಿವ್ಯಕ್ತಿ ಜ್ಞಾನ ಬೆಳೆಸುವ ನಿಟ್ಟಿನಲ್ಲಿ “ಕನ್ನಡ ಬಳಗ” ಸಂಘಕ್ಕೆ ಚಾಲನೆ ನೀಡಲಾಯಿತು.
ಈ ಬಳಗದ ಉದ್ಘಾಟನೆಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಬಿ.ಎನ್. ಕೃಷ್ಣಪ್ಪನವರು ನೆರವೇರಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸರಸ್ವತಿ ವಿದ್ಯಾಸಂಸ್ಥೆ ಹಾಗೂ ಎಂಎಸ್ ವಿ ಶಾಲೆಯ ಅಧ್ಯಕ್ಷರಾದ ಎ.ಸುಬ್ರಹ್ಮಣ್ಯ ವಹಿಸಿದ್ದರು.
ಇದೇ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ ನ ವತಿಯಿಂದ ಕಳೆದ ಸಾಲಿನ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಕನ್ನಡದಲ್ಲಿ 125ಕ್ಕೆ 125 ಅಂಕಗಳಿಸಿದ ಸರಸ್ವತಿ ಶಾಲೆಯ ಕುಮಾರಿ ಚಿನ್ಮಯಿ ಹಾಗೂ ಕುಮಾರಿ ಶ್ರಾವಣಿ ಇವರನ್ನು ಸನ್ಮಾನಿಸಲಾಯಿತು.
ಅಲ್ಲದೆ ಭಾನು ಮುಷ್ತಾಕ್ ಅವರ ಬೂಕರ್ ಪ್ರಶಸ್ತಿ ವಿಜೇತ ಕೃತಿ “ಎದೆಯ ಹಣತೆ” ಕೃತಿಯ ಸಂವಾದ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.
ಈ ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪಿ.ಗೋವಿಂದರಾಜು, ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಪ್ರಧಾನ ಕಾರ್ಯದರ್ಶಿ ಕೆ.ಆರ್.ರವಿಕಿರಣ್, ಕೋಶಾಧ್ಯಕ್ಷ ಡಾ.ಎಂ. ಮುನಿರಾಜು, ಸಾಹಿತಿಗಳಾದ ಶರಣಯ್ಯ ಹಿರೇಮಠ್, ಸಿ.ಪಿ.ನರಸಿಂಹ ರೆಡ್ಡಿ, ಭಾಗವಹಿಸಿದ್ದರು.