Plastic ban in Sri Ghati Subrahmanya

ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಪ್ಲಾಸ್ಟಿಕ್ ನಿಷೇಧ.. ಉಲ್ಲಂಘಿಸಿದರೆ ಕಾನೂನು ಕ್ರಮದ ವಾರ್ನಿಂಗ್

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಮಣ್ಯ ದೇವಸ್ಥಾನ (Sri Ghati Subramanya Temple) ಬಳಿ ಪ್ಲಾಸ್ಟಿಕ್ ಬಳಕೆ ಮತ್ತು ಮಾರಾಟವನ್ನು ನಿಷೇಧಿಸಲಾಗಿದೆ.

ಈ ಕುರಿತಂತೆ ಜಿಲ್ಲಾಧಿಕಾರಿ ಎ.ಬಿ.ಬಸವರಾಜು (A.B.Badavaraju) ಅವರು ಆದೇಶಿಸಿದ್ದು, ಪ್ಲಾಸ್ಟಿಕ್ ಕ್ಯಾರಿಬ್ಯಾಗ್, ಪ್ಲಾಸ್ಟಿಕ್ ಛತ್ರಿಪತ್ರ, ಪ್ಲಾಸ್ಟಿಕ್ ತೋರಣ, ಪ್ಲೆಕ್ಸ್, ಬಾವುಟ, ಪ್ಲಾಸ್ಟಿಕ್ ಲೋಟಿ, ಪ್ಲಾಸ್ಟಿಕ್ ಚಮಚ, ಕ್ಲಿಂಗ್ ಫಲ್ಸ್ ಮತ್ತು ಊಟದ ಮೇಜಿನ ಮೇಲೆ ಹರಡುವ ಪ್ಲಾಸ್ಟಿಕ್ ಹಾಳೆ ಹಾಗೂ ಥರ್ಮೋಕೋಲ್ ಮತ್ತು ಪ್ಲಾಸ್ಟಿಕ್ ಮೈಕ್ರೋ ಬೀಡ್ಸ್‌ನಿಂದ ತಯಾರಾದಂತಹ ಮೇಲ್ಕಂಡ ವಸ್ತುಗಳ ತಯಾರಿಕೆ, ಸರಬರಾಜು ಮತ್ತು ಬಳಕೆಯನ್ನು ರಾಜ್ಯದ್ಯಂತ ನಿಷೇಧಿಸಿ ಸರ್ಕಾರವು ಈಗಾಗಲೇ ಅಧಿಸೂಚನೆ ಹೊರಡಿಸಿದೆ.

ಸಹಾಯಕ ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ ರವರ ವರದಿಯಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕಿನ ಶ್ರೀ ಘಾಟಿ ಸುಬ್ರಮಣ್ಯ ದೇವಾಸ್ಥಾನಕ್ಕೆ ಪ್ರತಿನಿತ್ಯ ಸಾವಿರಾರು ಪ್ರವಾಸಿಗರು ಭೇಟಿ ನೀಡುತ್ತಿದ್ದಾರೆ.

ಈ ಪ್ರವಾಸಿ ತಾಣಕ್ಕೆ ಭೇಟಿ ನೀಡುವ ಪ್ರವಾಸಿಗರು ಒಂದು ಬಾರಿ ಉಪಯೋಗಿಸಿದಂತಹ ಪ್ಲಾಸ್ಟಿಕ್ ನೀರಿನ ಬಾಟಲ್‌ಗಳು, ಸ್ಪೂನ್, ಪ್ಲೇಟ್ಸ್ ಮತ್ತು ಪ್ಲಾಸ್ಟಿಕ್ ಗ್ಲಾಸ್ ಇತ್ಯಾದಿಗಳನ್ನು ಎಲ್ಲೆಂದರಲ್ಲಿ ಬಿಸಾಡುತ್ತಿರುವುದು ಕಂಡುಬಂದಿರುತ್ತದೆ.

ದೇವಸ್ಥಾನದಲ್ಲಿ ಇರುವ ಅಂಗಡಿಗಳು ಹಾಗೂ ದೇವಾಲಯದ ಆವರಣದಲ್ಲಿರುವ ಅಂಗಡಿಗಳು ಪ್ಲಾಸ್ಟಿಕ್ ಬಾಟಲ್, ತಿಂಡಿ ತಿನುಸುಗಳಿರುವ ಪ್ಲಾಸ್ಟಿಕ್ ಗ್ಲಾಸ್ ಪ್ಲಾಸ್ಟಿಕ್ ಕವರ್‌ಗಳನ್ನು ಅಂಗಡಿಗಳಿಂದ ಖರೀದಿ ಮಾಡಿ ಕೊಂಡೊಯ್ಯುತ್ತಾರೆ. ಸದರಿ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ದೇವಸ್ಥಾನದ ಆವರಣದಲ್ಲಿ ಎಲ್ಲೆಂದರಲ್ಲಿ ಹಾಗೂ ಅಂಗಡಿ ಮುಂಭಾಗದಲ್ಲಿ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಎಲ್ಲೆಂದರಲ್ಲಿ ಬಿಸಾಡಿ ಪ್ರವಾಸಿ ತಾಣವನ್ನು ಮಲೀನಗೊಳಿಸಿರುತ್ತಾರೆ.

ಮುಂದುವರೆದು ಪ್ಲಾಸ್ಟಿಕ್ ವಸ್ತುಗಳು ಅಲ್ಪಾವಧಿ ಹಾಗೂ ದೀರ್ಘಾವಧಿಯಲ್ಲಿ ಅಪಾಯವನ್ನು ಉಂಡು ಮಾಡುತ್ತದೆ. ಈ ರೀತಿ ಪ್ರವಾಸಿಗರು ಶ್ರೀ ಘಾಟಿ ಸುಬ್ರಮಣ್ಯ ದೇವಸ್ಥಾನ ಪ್ರವಾಸಿ ತಾಣದ ವ್ಯಾಪ್ತಿಯಲ್ಲಿ ಎಲ್ಲೆಂದರಲ್ಲಿ ಬಿಸಾಡುವ ಪ್ಲಾಸ್ಟಿಕ್ ಪದಾರ್ಥಗಳಿಂದ ಆ ಪ್ರದೇಶದಲ್ಲಿ ವನ್ಯಜೀವಿಗಳು ಇದ್ದು ಈ ಪ್ರವಾಸಿ ತಾಣದಲ್ಲಿ ಒಂದು ಬಾರಿ ಉಪಯೋಗಿಸಿದಂತಹ ಪ್ಲಾಸ್ಟಿಕ್ಯುಕ್ತ ಪದಾರ್ಥಗಳನ್ನು ನಿಷೇಧಿಸಿ ಪರಿಸರಕ್ಕೆ ಹಾನಿಯಾಗದಂತೆ ಮರುಬಳಕೆಯಾಗುವಂತಹ ಸಾಮಗ್ರಿ/ಪದಾರ್ಥಗಳನ್ನು ಪರಿಚಯಿಸಿದಲ್ಲಿ ಅಲ್ಲಿನ ಪರಿಸರವನ್ನು ಸಂರಕ್ಷಿಸುವುದರ ಜೊತೆಗೆ ಪ್ರವಾಸಿ ತಾಣಗಳಲ್ಲಿ ಆಹ್ಲಾದಕರ ವಾತಾವರಣವನ್ನು ಸೃಷ್ಟಿಸಬಹುದಾಗಿರುವುದರಿಂದ ಒಂದು ಬಾರಿ ಉಪಯೋಗಿಸುವಂತಹ ಪ್ಲಾಸ್ಟಿಕ್ ಯುಕ್ತ ಪದಾರ್ಥಗಳನ್ನು ನಿಷೇಧಿಸಲು ಕೋರಿರುತ್ತಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಶ್ರೀ ಘಾಟಿ ಸುಬ್ರಮಣ್ಯ ದೇವಸ್ಥಾನ ಪ್ರಸಿದ್ಧವಾಗಿರುವ ಪ್ರವಾಸಿ ತಾಣವಾಗಿದ್ದು, ಪುರಾತನ ಪ್ರವಾಸಿ ತಾಣವಾಗಿದೆ. ಈ ಪ್ರವಾಸಿ ತಾಣವನ್ನು ಮತ್ತು ಪರಿಸರವನ್ನು ವೀಕ್ಷಿಸಲು ವಾರಾಂತ್ಯಕ್ಕೆ ದಿನಗಳಲ್ಲಿ ಮತ್ತು ಸಾರ್ವತ್ರಿಕ ರಜೆ ದಿನಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಮತ್ತು ಹೊರ ರಾಜ್ಯಗಳಿಂದ ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡುತ್ತಿರುತ್ತಾರೆ.

ಆದರೆ ಈ ಪ್ರವಾಸಿ ತಾಣಕ್ಕೆ ಭೇಟಿ ನೀಡುವ ಪ್ರವಾಸಿಗರು ಉಪಯೋಗಿಸಿ ಬಿಸಾಡುವಂತಹ ಪ್ಲಾಸ್ಟಿಕ್ ವಸ್ತುಗಳಾದ ಪ್ಲಾಸ್ಟಿಕ್ ಕೈ ಚೀಲ, ತಟ್ಟೆ ಲೋಟ, ಪ್ಲಾಸ್ಟಿಕ್ ಬಾಟಲಿಗಳು ಇತ್ಯಾದಿತ್ಯಾಜ್ಯಗಳನ್ನು ಅಲ್ಲಲ್ಲಿ ಬಿಸಾಡಿ ಪರಿಸರ ಮಾಲಿನ್ಯ ಉಂಟುಮಾಡುತ್ತಿರುವುದನ್ನು ಗಮನಿಸಲಾಗಿದೆ.

ಈ ರೀತಿ ಅಜಾಗರೂಕತೆಯಿಂದ ಎಸೆದ ಪ್ಲಾಸ್ಟಿಕ್ ತ್ಯಾಜ್ಯಗಳು ಮಣ್ಣಿನಲ್ಲಿನ ಸೂಕ್ಷ್ಮ ಜೀವಿಗಳ ಮೇಲೆ ದುಷ್ಟರಿಣಾಮವನ್ನು ಉಂಟುಮಾಡಿ ಮಣ್ಣಿನ ಹಾಗೂ ಪರಿಸರ ಮಾಲಿನ್ಯಕ್ಕೆ ಕಾರಣವಾಗುತ್ತದೆ.

ಈ ಹಿನ್ನಲೆಯಲ್ಲಿ ಶ್ರೀ ಘಾಟಿ ಸುಬ್ರಮಣ್ಯ ದೇವಸ್ಥಾನದ ಪ್ರದೇಶದಲ್ಲಿರುವ ಸಸ್ಯ ಸಂಕಲುಗಳನ್ನು ಸಂರಕ್ಷಿರುವ, ಪ್ರಾಣಿ ಪಕ್ಷಿಗಳನ್ನು, ಸೂಕ್ಷ್ಮ ಜೀವಿಗಳನ್ನು ಮತ್ತು ಮಾನವ ಸಂಕುಲವನ್ನು ಸಂರಕ್ಷಿಸುವ ಹಾಗೂ ಇಲ್ಲಿನ ಪ್ರಾಕೃತಿಕ ಸೊಬಗಿನ ನೈರ್ಮಲ್ಯತೆಯನ್ನು ಯಥಾರೀತಿಯಲ್ಲಿ ಕಾಪಾಡುವ ಹಿತ ದೃಷ್ಟಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಶ್ರೀ ಘಾಟಿ ಸುಬ್ರಮಣ್ಯ ದೇವಸ್ಥಾನ ಪ್ರದೇಶದ ವ್ಯಾಪ್ತಿಯಲ್ಲಿ ಥರ್ಮಕೋಲ್ ಮತ್ತು ಪ್ಲಾಸ್ಟಿಕ್ ಮೈಕ್ರೋ ಬೀಡ್ಸ್ ನಿಂದ ತಯಾರಾದಂತಹ ಪ್ಲಾಸ್ಟಿಕ್ ವಸ್ತುಗಳ ಕೊಂಡೊಯ್ಯುವಿಕೆ, ಬಳಕೆ ಮತ್ತು ಮಾರಾಟ ಮಾಡುವುದನ್ನು ನಿಷೇಧಿಸಿ ಆದೇಶಿಸಿದ್ದಾರೆ.

ಅಲ್ಲದೆ ಈ ಆದೇಶವು ಉಲಂಘನೆಯಾದಲ್ಲಿ ಸಂಬಂಧಪಟ್ಟವರ ವಿರುದ್ಧ IPC 188 ಮತ್ತು ಅನ್ವಯಿಸಬಹುದಾದ ಇತರೆ ಕಾನೂನಿನ್ವಯ ಕ್ರಮ ಕೈಗೊಳ್ಳಲಾಗುವುದು ಎಚ್ಚರಿಕೆ ನೀಡಿದ್ದಾರೆ.

ರಾಜಕೀಯ

ದೇಶಕ್ಕೆ ಮೋದಿ, ರಾಜ್ಯಕ್ಕೆ ಕುಮಾರಣ್ಣ: ನಿಖಿಲ್ ಕುಮಾರಸ್ವಾಮಿ

ದೇಶಕ್ಕೆ ಮೋದಿ, ರಾಜ್ಯಕ್ಕೆ ಕುಮಾರಣ್ಣ: ನಿಖಿಲ್ ಕುಮಾರಸ್ವಾಮಿ

ಜೆಡಿಎಸ್ ಹಳೆ ಮೈಸೂರು ಭಾಗಕ್ಕೆ ಸೀಮಿತವಾದ ಪಕ್ಷವಲ್ಲ. ನಮ್ಮ ಪಕ್ಷದ ಶಾಸಕರಲ್ಲಿ 50ರಷ್ಟು ಮಂದಿ*** ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110847"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: KSRTC ಬಸ್ಸಿಂದ ಆಯತಪ್ಪಿ ಬಿದ್ದು ಮಹಿಳೆ ದುರ್ಮರಣ..!

ದೊಡ್ಡಬಳ್ಳಾಪುರ: KSRTC ಬಸ್ಸಿಂದ ಆಯತಪ್ಪಿ ಬಿದ್ದು ಮಹಿಳೆ ದುರ್ಮರಣ..!

ಮೆಳೇಕೋಟೆ ಕ್ರಾಸ್‌ಗೆ KSRTC ಸಾರಿಗೆ ಬಸ್ಸಿನಲ್ಲಿ ಬರುವ ವೇಳೆ ಮಹಿಳೆಯೋರ್ವ ಆಯತಪ್ಪಿ ಬಸ್ಸಿಂದ ಬಿದ್ದು ಸಾವನಪ್ಪಿರುವ ಘಟನೆ

[ccc_my_favorite_select_button post_id="110837"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!