ದೊಡ್ಡಬಳ್ಳಾಪುರ: ಬುಲೆಟ್ ಬೈಕ್ಗೆ ಫಾಕ್ಸಕಾನ್ ಕಾರ್ಖಾನೆಗೆ ಸಿಬ್ಬಂದಿಗಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ (Accident) ಸವಾರ ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ತಾಲೂಕಿನ ರಘುನಾಥಪುರದ ಬಳಿ ಸಂಭವಿಸಿದೆ.
ಮೃತ ದುರ್ದೈವಿಯನ್ನು ದೇವನಹಳ್ಳಿಯ ಸಾಗರ್ (35 ವರ್ಷ) ಎಂದು ಪೊಲೀಸರು ತಿಳಿಸಿದ್ದಾರೆ.
ಸೋಮವಾರ ರಾತ್ರಿ ದೊಡ್ಡಬಳ್ಳಾಪುರ ಕಡೆಯಿಂದ ಫಾಕ್ಸಕಾನ್ ಕಾರ್ಖಾನೆಗೆ ಸಿಬ್ಬಂದಿಗಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ ರಘುನಾಥಪುರದ ಬಳಿ ದೊಡ್ಡಬಳ್ಳಾಪುರ ಮಾರ್ಗವಾಗಿ ಬರುತಿದ್ದ ಬುಲೆಟ್ ಬೈಕ್‌ಗೆ ಡಿಕ್ಕಿ ಹೊಡೆದಿದೆ.
ಪರಿಣಾಮ ಬೈಕ್ ಸವಾರ ಸಾಗರ್ ಸ್ಥಳದಲ್ಲಿಯೇ ಸಾವನಪ್ಪಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.
ಘಟನೆ ಕುರಿತಂತೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ.