ನೇಮಕಾತಿಯಲ್ಲಿ ಸಮುದಾಯ ವಿಜ್ಞಾನ ಪದವೀಧರರಿಗೆ ಆದ್ಯತೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Community science graduates will be given priority in recruitment: Minister Lakshmi Hebbalkar

ಧಾರವಾಡ; ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮುಂದಿನ ನೇಮಕಾತಿ ಸಂದರ್ಭದಲ್ಲಿ ಸಮುದಾಯ ವಿಜ್ಞಾನ ಪದವೀಧರರಿಗೆ ಕನಿಷ್ಠ ಶೇಕಡಾ 20 ರಿಂದ 25 ರಷ್ಟು ಮೀಸಲಾತಿ ನೀಡಲು ಕ್ರಮ ಕೈಗೊಳ್ಳುವುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ (Lakshmi Hebbalkar) ಭರವಸೆ ನೀಡಿದರು.

ಗ್ರಾಮೀಣ ಗೃಹ ವಿಜ್ಞಾನ ಮಹಾವಿದ್ಯಾಲಯ, ಸಮುದಾಯ ವಿಜ್ಞಾನ ಮಹಾವಿದ್ಯಾಲಯ ಪದವೀಧರರ ಸಂಘವನ್ನು ಉದ್ಘಾಟಿಸಿ ಮಾತನಾಡಿದ ಸಚಿವರು, ನನ್ನ ಇಲಾಖೆಗೆ ಅಗತ್ಯವಾದ ಕೌಶಲ್ಯಗಳನ್ನು ಇಲ್ಲಿ ಕಲಿಸಲಾಗುತ್ತದೆ. ಇಲ್ಲಿ ಪದವಿ ಪಡೆದವರು ನಮ್ಮ ಇಲಾಖೆಗೆ ಹೆಚ್ಚು ಸೂಕ್ತವಾಗುತ್ತಾರೆ. ಈಗಾಗಲೇ ಸಾಕಷ್ಟು ಜನ ಕೆಲಸ ಮಾಡುತ್ತಿದ್ದಾರೆ.

ಮುಂದಿನ ನೇಮಕಾತಿ ಸಂದರ್ಭದಲ್ಲಿ ಹೆಚ್ಚು ಆದ್ಯತೆ ನೀಡುವ ಸಂಬಂಧ ಮುಖ್ಯಮಂತ್ರಿಗಳ ಜೊತೆ ಚರ್ಚೆ ನಡೆಸುವೆ, ಜೊತೆಗೆ ಗ್ರಾಮೀಣಾಭಿವೃದ್ಧಿ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರ ಜೊತೆಗೂ ಚರ್ಚೆ ನಡೆಸಿ ಕೂಸಿನ ಮನೆ ಸೇರಿದಂತೆ ವಿವಿಧ ಯೋಜನೆಗಳಲ್ಲಿ ಸಮುದಾಯ ವಿಜ್ಞಾನ ಪದವೀಧರರಿಗೆ ಹೆಚ್ಚು ಅವಕಾಶ ಸಿಗುವಂತೆ ನೋಡಿಕೊಳ್ಳುತ್ತೇನೆ ಎಂದು ಹೇಳಿದರು.

ಈ ಹಿಂದೆ ಮಹಿಳೆಯರು ಅಡುಗೆ ಮನೆಗೆ ಸೀಮಿತರಾಗಿದ್ದರು. ಅಂತಹ ಸಂದರ್ಭದಲ್ಲಿ ಈ ಕಾಲೇಜು ಆರಂಭವಾಗಿದೆ. ಆ ಸಂದರ್ಭದಲ್ಲೂ ಸಾಕಷ್ಟು ಮಹಿಳೆಯರು ಈ ಕಾಲೇಜಿನಲ್ಲಿ ಪದವಿ ಪಡೆದಿದ್ದಾರೆ. ಕಲಿಯುವ ಉತ್ಸಾಹ ಇದ್ದರೆ, ಎಲ್ಲವೂ ಸಾಧ್ಯ ಎನ್ನುವುದನ್ನು ತೋರಿಸಿದ್ದಾರೆ. ಕೆಲವರಿಗೆ ಅವಕಾಶ ಕಡಿಮೆ ಸಿಗಬಹುದು, ಕೆಲವರಿಗೆ ಜಾಸ್ತಿ ಸಿಗಬಹುದು. ಆದರೆ ಅದನ್ನು ಸದುಪಯೋಗ ಪಡಿಸಿಕೊಳ್ಳುವ ಮನೋಭಾವ ಬೇಕು ಎಂದು ಸಚಿವರು ಹೇಳಿದರು.

ಈಗ ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಸಮಾಜ ತುಂಬಾ ಬದಲಾಗಿದೆ. ಗಂಡಸರ ಯೋಚನಾ ರೀತಿ ಸಹ ಬದಲಾಗಿದೆ. ಗಂಡು ಹೆಣ್ಣು ಎಂಬ ಬೇಧ ಭಾವ ಉಳಿದಿಲ್ಲ. ಎಲ್ಲರನ್ನೂ ಸಮಾನ ದೃಷ್ಟಿಯಿಂದ ನೋಡಲಾಗುತ್ತಿದೆ. ನಮ್ಮ ದೇಶದ ಸಕಾರಾತ್ಮಕ ಬೆಳವಣಿಗೆಗೆ ಇದು ಕೂಡ ಕಾರಣವಾಗಿದೆ ಎಂದು ಹೇಳಿದರು.

ಧಾರವಾಡವನ್ನು ವಿದ್ಯಾಕಾಶಿ ಎಂದು ಕರೆಯುತ್ತೇವೆ. ಇಲ್ಲಿಯ ಕರ್ನಾಟಕ ವಿಶ್ವವಿದ್ಯಾಲಯ ಹಾಗೂ ಕೃಷಿ ವಿಶ್ವವಿದ್ಯಾಲಯಗಳು ನಮ್ಮ ಹೆಮ್ಮೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬಣ್ಣಿಸಿದರು.

ಈ ವೇಳೆ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಕುಲಪತಿ ಡಾ.ಪಿ.ಎಲ್.ಪಾಟೀಲ, ವಿದ್ಯಾಧಿಕಾರಿ ಡಾ.ಲತಾ ಪೂಜಾರ್, ನಿವೃತ್ತ ಡೀನ್ ಪುಷ್ಪ ಖಾದಿ, ಪದವೀಧರರ ಸಂಘದ ಅಧ್ಯಕ್ಷರಾದ ಡಾ.ಸರೋಜಿನಿ ಕರಕಣ್ಣವರ್, ಕಾರ್ಯದರ್ಶಿ ಡಾ. ವೀಣಾ ಜಾಧವ, ಜಂಟಿ ಕಾರ್ಯದರ್ಶಿ ಡಾ.ಸಾಧನಾ ಕುಳ್ಳೊಳ್ಳಿ, ಖಜಾಂಚಿ ಡಾ.ಮಂಜುಳಾ ಪಾಟೀಲ, ಸಹ ಖಜಾಂಚಿ ಡಾ.ಉಮಾ ಕುಲಕರ್ಣಿ, ಸದಸ್ಯರಾದ ಡಾ.ಹೇಮಲತಾ, ಡಾ.ರೇಣುಕಾ ಸಾಳುಂಕೆ, ಡಾ.ಗೀತಾ ಚಿಟಗುಬ್ಬಿ, ಡಾ.ಪ್ರೇಮಾ ಪಾಟೀಲ, ಡಾ.ರಾಜೇಶ್ವರಿ, ಮಾಳವಿಕಾ ಮೊಕಾಶಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ರಾಜಕೀಯ

ಬಿಜೆಪಿಯಿಂದ ನಾರಿ ಶಕ್ತಿಗೆ ಗೌರವ: ಬಿ.ವೈ. ವಿಜಯೇಂದ್ರ

ಬಿಜೆಪಿಯಿಂದ ನಾರಿ ಶಕ್ತಿಗೆ ಗೌರವ: ಬಿ.ವೈ. ವಿಜಯೇಂದ್ರ

ಕಾಂಗ್ರೆಸ್ (Congress) ಪಕ್ಷ ಮತ್ತು ಇಂಡಿ ಒಕ್ಕೂಟವು ಮಹಿಳೆಯರಿಗೆ ಮಾಡಿರುವ ಅನ್ಯಾಯವನ್ನು ಸಾರಿಸಾರಿ ಹೇಳಬೇಕೆಂದು ಶಾಸಕ ಹಾಗೂ ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B.Y. Vijayendra) ಅವರು ಮನವಿ ಮಾಡಿದ್ದಾರೆ.

[ccc_my_favorite_select_button post_id="121644"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ನಿರ್ಜನ ಪ್ರದೇಶದಲ್ಲಿ ಹೊತ್ತಿ ಉರಿದ ಕಾರು.. ಗೃಹಿಣಿ ಭಸ್ಮ.!

ದೊಡ್ಡಬಳ್ಳಾಪುರ: ನಿರ್ಜನ ಪ್ರದೇಶದಲ್ಲಿ ಹೊತ್ತಿ ಉರಿದ ಕಾರು.. ಗೃಹಿಣಿ ಭಸ್ಮ.!

ಪರಿಚಯದವರ, ಸಂಬಂಧಿಕರ ಮಾತನ್ನು ನಂಬಿ, ವಾಹನಗಳನ್ನು ನೀಡುವುದು ಎಷ್ಟು ಸಮಸ್ಯೆ ತಂದೊಡ್ಡುತ್ತದೆ ಎಂಬುದಕ್ಕೆ ಇಂದು ದೊಡ್ಡಬಳ್ಳಾಪುರದ ಹೊರವಲಯದಲ್ಲಿರುವ ಜಿಂಕೆಬಚ್ಚಹಳ್ಳಿ ನಿರ್ಜನ ಪ್ರದೇಶದಲ್ಲಿ (Desolate area) ನಡೆದಿರುವ ಘಟನೆ ಸಾಕ್ಷಿಯಾಗಿ ನಿಂತಿದೆ.

[ccc_my_favorite_select_button post_id="121633"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]