Congress MLAs have lost confidence in the Chief Minister: B.Y. Vijayendra

ಕಾಂಗ್ರೆಸ್ ಶಾಸಕರು ಮುಖ್ಯಮಂತ್ರಿ ಬಗ್ಗೆ ವಿಶ್ವಾಸ ಕಳೆದುಕೊಂಡಿದ್ದಾರೆ: ಬಿ.ವೈ. ವಿಜಯೇಂದ್ರ

ಶಿವಮೊಗ್ಗ: ಮುಖ್ಯಮಂತ್ರಿಗಳ ಬಗ್ಗೆ ಆಡಳಿತ ಪಕ್ಷವಾದ ಕಾಂಗ್ರೆಸ್ಸಿನ ಶಾಸಕರಿಗೇ ವಿಶ್ವಾಸ ಇಲ್ಲವಾಗಿದೆ; ರಾಜ್ಯದ ಜನರಿಗೂ ವಿಶ್ವಾಸ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ (B.Y. Vijayendra) ಅವರು ತಿಳಿಸಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ರಾಜಕೀಯ ವಿದ್ಯಮಾನಗಳು ಯಾವ ರೀತಿ ಆಗಲಿದೆ. ಸ್ಥಾನಪಲ್ಲಟ ಯಾವ ರೀತಿ ಆಗಲಿದೆ ಎಂಬುದನ್ನು ನಾವು ಕಾದು ನೋಡುತ್ತೇವೆ ಎಂದು ಪ್ರಶ್ನೆಗೆ ಉತ್ತರ ಕೊಟ್ಟರು.

ಸ್ಥಾನಪಲ್ಲಟ ಆದರೆ ನಮಗೇನೂ ವ್ಯತ್ಯಾಸ ಆಗುವುದಿಲ್ಲ; ರಾಜ್ಯದ ಜನರಿಗೂ ವ್ಯತ್ಯಾಸ ಆಗುವುದಿಲ್ಲ; 15 ಬಜೆಟ್ ಮಂಡಿಸಿದ ಅನುಭವಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಡಳಿತದಲ್ಲಿ ಹಣಕಾಸು ವ್ಯವಸ್ಥೆ ಸಂಪೂರ್ಣ ಹಾಳಾಗಿದೆ. ಯಾರೇ ಮುಖ್ಯಮಂತ್ರಿ ಆದರೂ ರಾಜ್ಯವು ಅಭಿವೃದ್ಧಿ ಕಾಣಲು ಸಾಧ್ಯವಾಗದು ಎಂದು ಇನ್ನೊಂದು ಪ್ರಶ್ನೆಗೆ ಉತ್ತರಿಸಿದರು.

ರಾಜ್ಯದಲ್ಲಿ ರಾಜಕೀಯ ಅನಿಶ್ಚಿತತೆ ಕಾಡುತ್ತಿದೆ. ಸುರ್ಜೇವಾಲಾ ಅವರು ಪದೇಪದೇ ಬೆಂಗಳೂರಿಗೆ ಬರುತ್ತಿದ್ದಾರೆ. ಶಾಸಕರ ಅಭಿಪ್ರಾಯ ಪಡೆದುಕೊಳ್ಳುತ್ತಿದ್ದಾರೆ. ಇವತ್ತು ಮತ್ತೆ ಬಂದಿದ್ದಾರೆ. 3 ದಿನಗಳ ಕಾಲ ಇರುತ್ತಾರೆ.

ಡಿ.ಕೆ.ಶಿವಕುಮಾರ್ ಜೊತೆ 100 ಶಾಸಕರಿದ್ದಾರೆ. ಅವರಿಗೂ ಅವಕಾಶ ಕೊಡಬೇಕೆಂಬ ನಾನಾ ಹೇಳಿಕೆ ಬರುತ್ತಿದೆ. ಬಿ.ಆರ್.ಪಾಟೀಲರ ಹೇಳಿಕೆ, ರಾಜು ಕಾಗೆಯವರ ಹೇಳಿಕೆಗಳನ್ನು ಗಮನಿಸಿದರೆ ಆಡಳಿತ ಪಕ್ಷದಲ್ಲಿ ಶಾಸಕರು ಮುಖ್ಯಮಂತ್ರಿಗಳ ಮೇಲಿನ ವಿಶ್ವಾಸವನ್ನು ಸಂಪೂರ್ಣವಾಗಿ ಕಳೆದುಕೊಂಡಿದ್ದಾರೆ ಎಂಬುದು ಸ್ಪಷ್ಟ ಎಂದು ವಿಶ್ಲೇಷಿಸಿದರು.

ಸುರ್ಜೇವಾಲಾ ಭೇಟಿ ಹಿಂದೆ ನಿಗದಿತ ಕಾರ್ಯಸೂಚಿ

ಸಿದ್ದರಾಮಯ್ಯನವರು ಮುಂದುವರೆಯುತ್ತಾರಾ? ಅವರ ಸ್ಥಾನಕ್ಕೆ ಬರುವವರು ಯಾರು? ಎಂಬುದು ಮುಖ್ಯವಲ್ಲ; ಆದರೆ, ಒಂದಂತೂ ಸತ್ಯ. ಸುರ್ಜೇವಾಲಾ ಅವರು ಸುಮ್ಮನೆ ಬರುತ್ತಿಲ್ಲ; ಒಂದು ನಿಗದಿತ ಕಾರ್ಯಸೂಚಿ ಇಟ್ಟುಕೊಂಡೇ ಕರ್ನಾಟಕಕ್ಕೆ ಪದೇಪದೇ ಬರುತ್ತಿದ್ದಾರೆ. ಅದು ಮುಖ್ಯಮಂತ್ರಿಗಳು ಮಾತ್ರವಲ್ಲದೇ ಆಡಳಿತ ಪಕ್ಷದ ಎಲ್ಲರಿಗೂ ಗೊತ್ತಿದೆ ಎಂದು ವಿಜಯೇಂದ್ರ ಅವರು ನುಡಿದರು.

ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಸರಿಯಾಗಿ ಇರಬಾರದು; ಎರಡು ಧರ್ಮಗಳ ನಡುವೆ ಸಂಘರ್ಷ ನಡೆಯುತ್ತಿರಬೇಕೆಂಬ ದುರುದ್ದೇಶದಿಂದ ಅಹಿತಕರ ಘಟನೆಗಳು ನಡೆಯುತ್ತಿವೆ. ರಾಜ್ಯ ಸರಕಾರವು ಇದನ್ನು ಗಂಭೀರವಾಗಿ ತೆಗೆದುಕೊಳ್ಳದೆ ಇರುವುದು ದುರಂತ ಎಂದು ಅವರು ಶಿವಮೊಗ್ಗದಲ್ಲಿ ವಿಗ್ರಹಗಳಿಗೆ ಅವಮಾನ ಕುರಿತ ಪ್ರಶ್ನೆಗೆ ಉತ್ತರಿಸಿದರು.

ಮಂಗಳೂರಿನಲ್ಲಿ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ನಡೆದಿದೆ. ಮೈಸೂರಿನಲ್ಲಿ ಪೊಲೀಸ್ ಠಾಣೆಗೆ ನುಗ್ಗಿ ಪೊಲೀಸರನ್ನೇ ಬೆದರಿಸಿದ ಷಡ್ಯಂತ್ರ ನಡೆಯುತ್ತಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಪದೇಪದೇ ಇಂಥ ಅಹಿತಕರ ಘಟನೆ ನಡೆಯುತ್ತಿದೆ. ಟಿಪ್ಪು ಜಯಂತಿ ಸಂದರ್ಭದಲ್ಲಿ ಸಮಸ್ಯೆ ಆಗಿದೆ. ಗಣೇಶ ಹಬ್ಬದ ಸಂದರ್ಭದಲ್ಲೂ ಸಮಸ್ಯೆಗಳು ಆಗುತ್ತಿವೆ. ಇದು ವ್ಯವಸ್ಥಿತ ಷಡ್ಯಂತ್ರ ಎಂದು ಆರೋಪಿಸಿದರು. ಈ ಷಡ್ಯಂತ್ರದ ವಿರುದ್ಧ ರಾಜ್ಯ ಸರಕಾರವು ಯಾವುದೇ ಕ್ರಮ ಕೈಗೊಳ್ಳದ ಕಾರಣ ಇಂಥ ದೇಶದ್ರೋಹಿಗಳಿಗೂ ಧೈರ್ಯ ಬರುತ್ತಿದೆ ಎಂದು ತಿಳಿಸಿದರು.

ಯಾರೇನೇ ಮಾಡಿದರೂ ರಾಜ್ಯ ಸರಕಾರ ನಮ್ಮನ್ನು ಬೆಂಬಲಿಸುತ್ತದೆ, ನಮ್ಮನ್ಯಾರೂ ಅಲ್ಲಾಡಿಸಲು ಆಗುವುದಿಲ್ಲ, ಯಾವುದೇ ಶಿಕ್ಷೆ ಕೊಡಲಾಗದು ಎಂಬಂತಿದೆ. ರಾಜ್ಯದಲ್ಲಿ ಬೇಲಿಯೇ ಎದ್ದು ಹೊಲ ಮೇಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದ ದುಷ್ಕøತ್ಯಗಳು ನಡೆಯುತ್ತಿವೆ. ಬಿಜೆಪಿ ಇದನ್ನು ಬಲವಾಗಿ ಖಂಡಿಸುತ್ತದೆ. ರಾಜ್ಯದ ಮುಖ್ಯಮಂತ್ರಿಗಳು ಮತ್ತು ಗೃಹ ಸಚಿವರು ಗಮನಿಸಬೇಕು ಎಂದು ಒತ್ತಾಯಿಸಿದರು.

ಹಾಸನ- ಸರಕಾರದ ಬೇಜವಾಬ್ದಾರಿ
ಹಾಸನ ಜಿಲ್ಲೆಯಲ್ಲಿ ಸರಣಿ ಸಾವುಗಳು ಸಂಭವಿಸುತ್ತಿವೆ. ಯುವಜನರು ಪ್ರಾಣ ಕಳಕೊಳ್ಳುತ್ತಿದ್ದಾರೆ. ಅಲ್ಲಿನ ಉಸ್ತುವಾರಿ ಸಚಿವರು ಕಳೆದ 3 ತಿಂಗಳುಗಳಿಂದ ಭೇಟಿ ಕೊಟ್ಟಿಲ್ಲ; ಇದು ಅವರ ಬೇಜವಾಬ್ದಾರಿಯನ್ನು ತೋರಿಸುತ್ತದೆ ಎಂದು ವಿಜಯೇಂದ್ರ ಅವರು ಆಕ್ಷೇಪಿಸಿದರು.

ರಾಜ್ಯ ಸರಕಾರ ಎಷ್ಟು ಬೇಜವಾಬ್ದಾರಿಯಿಂದ ವರ್ತಿಸುತ್ತದೆ ಎಂಬುದಕ್ಕೆ ಇದಕ್ಕಿಂತ ಬೇರೆ ಪುರಾವೆ ಬೇಡ ಎಂದು ಗಮನ ಸೆಳೆದರು.

ರಾಜ್ಯದ ಆಡಳಿತ ಸಂಪೂರ್ಣ ಕುಸಿದು ಬಿದ್ದಿದೆ. ಆರ್ಥಿಕ ಪರಿಸ್ಥಿತಿ ಸಂಪೂರ್ಣ ಹದಗೆಟ್ಟಿದೆ ಎಂಬುದಕ್ಕೆ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಅವರು ರಸ್ತೆಗಳು, ಅಭಿವೃದ್ಧಿ ಕೆಲಸ ಆಗಬೇಕೆಂದಿದ್ದರೆ ಗ್ಯಾರಂಟಿಗಳನ್ನು ನಾವು ನಿಲ್ಲಿಸುತ್ತೇವೆ ಎಂದಿರುವುದೇ ಸ್ಪಷ್ಟ ಪುರಾವೆ ಎಂದು ತಿಳಿಸಿದರು.

ಬಿಜೆಪಿಯವರು ಆರ್ಥಿಕ ಪರಿಸ್ಥಿತಿ ಕುರಿತು ಹೇಳಿದರೆ, ಸರಕಾರಿ ನೌಕರರಿಗೆ ಸಂಬಳ ಕೊಡಲಾಗದ ಸ್ಥಿತಿ ಇದೆ ಎಂದು ಹೇಳಿದರೆ ಎಲ್ಲವೂ ಸರಿ ಇದೆ ಎಂದು ಸಿದ್ದರಾಮಯ್ಯನವರು ಹೇಳುತ್ತಾರೆ. ಅವರದೇ ಆರ್ಥಿಕ ಸಲಹೆಗಾರರು ಈ ರೀತಿ ಹೇಳಿಕೆ ನೀಡುತ್ತಿದ್ದಾರೆ ಎಂದರೆ ಇದು ರಾಯರೆಡ್ಡಿ ಅವರ ಹೇಳಿಕೆ ಅಲ್ಲ, ಸ್ವತಃ ಮುಖ್ಯಮಂತ್ರಿಗಳೇ ಗ್ಯಾರಂಟಿ ಅನುಷ್ಠಾನಕ್ಕೆ ಹಣ ಕ್ರೋಡೀಕರಿಸಲು ಸಾಧ್ಯವಾಗದೇ ರಾಜ್ಯದ ಆರ್ಥಿಕ ಪರಿಸ್ಥಿತಿ ಸಂಪೂರ್ಣ ಹದಗೆಟ್ಟಿದೆ ಎಂಬುದನ್ನು ಹಾಗೂ ಅಭಿವೃದ್ಧಿಗೆ ಹಣ ಕೊಡಲು ಸಾಧ್ಯವಿಲ್ಲ ಎಂಬುದನ್ನು ಅವರ ಮೂಲಕ ಹೇಳಿಸಿದ್ದಾರೆ ಎಂದು ತಿಳಿಸಿದರು.

ರಾಜ್ಯ ಸರಕಾರದ ಬಗ್ಗೆ ಜನರು ಬೇಸತ್ತಿದ್ದಾರೆ. ನಾಡಿನ ಜನರು ಭ್ರಷ್ಟ, ಜನವಿರೋಧಿ, ರೈತವಿರೋಧಿ ಸರಕಾರಕ್ಕೆ ಮತ ಕೊಟ್ಟು ಅಧಿಕಾರಕ್ಕೆ ತಂದಿರುವುದಕ್ಕೆ ಪಶ್ಚಾತ್ತಾಪ ಪಡುತ್ತಿದ್ದಾರೆ ಎಂದು ಹೇಳಿದರು.

ರಾಜಕೀಯ

58 ದಿನಗಳ ನಿಖಿಲ್ ಕುಮಾರಸ್ವಾಮಿ ಪ್ರವಾಸ ನಾಳೆ ಚಿಕ್ಕಬಳ್ಳಾಪುರ ಜಿಲ್ಲೆಗೆ

58 ದಿನಗಳ ನಿಖಿಲ್ ಕುಮಾರಸ್ವಾಮಿ ಪ್ರವಾಸ ನಾಳೆ ಚಿಕ್ಕಬಳ್ಳಾಪುರ ಜಿಲ್ಲೆಗೆ

ಜೆಡಿಎಸ್ ಪಕ್ಷವನ್ನು ರಾಜ್ಯಾದ್ಯಂತ ಸಂಘಟಿಸುತ್ತಿರುವ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರಿಗೆ ಹೋದಲೆಲ್ಲಾ ಭರ್ಜರಿ ರೆಸ್ಪಾನ್ಸ್ ಸಿಕ್ತಿದೆ.

[ccc_my_favorite_select_button post_id="110752"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ ಮಹಿಳೆ

ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ

ಗ್ರಾಮಪಂಚಾಯಿತಿ ಅದ್ಯಕ್ಷೆಗೆ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಐ ಲವ್ ಯು (I Love You) ಎಂದು ಕಿರುಕುಳ ಆರೋಪ ಹಿನ್ನೆಲೆ, ಮಹಿಳೆಯೋರ್ವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿರುವ

[ccc_my_favorite_select_button post_id="110702"]
ದೊಡ್ಡಬಳ್ಳಾಪುರ: ಬುಲೆಟ್ಗೆ ಬಸ್ ಡಿಕ್ಕಿ.. ಬೈಕ್ ಸವಾರ ದುರ್ಮರಣ..!

ದೊಡ್ಡಬಳ್ಳಾಪುರ: ಬುಲೆಟ್ಗೆ ಬಸ್ ಡಿಕ್ಕಿ.. ಬೈಕ್ ಸವಾರ ದುರ್ಮರಣ..!

ಬುಲೆಟ್ ಬೈಕ್ಗೆ ಕಾರ್ಖಾನೆಗೆ ಸಿಬ್ಬಂದಿಗಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ (Accident) ಸವಾರ ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ.

[ccc_my_favorite_select_button post_id="110745"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!