ದೊಡ್ಡಬಳ್ಳಾಪುರ: ಮಹಿಳೆಯೋರ್ವರನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ 108 ಅಂಬುಲೆನ್ಸ್ಗೆ (108 Ambulance) ಕಾರೊಂದು ಡಿಕ್ಕಿ ಹೊಡೆದಿರುವ ಘಟನೆ (Accident) ತಾಲೂಕಿನ ಸಾಸಲು ಬಳಿ ಸಂಭವಿಸಿದೆ.
ದ್ವಿಚಕ್ರ ವಾಹನ ಅಪಘಾತದಲ್ಲಿ ಗಾಯಗೊಂಡಿದ್ದ ಮಹಿಳೆಯನ್ನು ಸಾಸಲು ಆರೋಗ್ಯ ಕೇಂದ್ರದಲ್ಲಿ ದಾಖಲಿಸಲಾಗಿತ್ತು. ಇಂದು ಮಧ್ಯಾಹ್ನ ಹೆಚ್ಚಿನ ಚಿಕಿತ್ಸೆಗೆ ಅವರನ್ನು ದೊಡ್ಡಬಳ್ಳಾಪುರ ಕರೆದೊಯ್ಯುತ್ತಿದ್ದ 108 ಅಂಬುಲೆನ್ಸ್ಗೆ ತೋಡಲಬಂಡೆ ಸಮೀಪದ ತಿರುವಿನಲ್ಲಿ ಎದುರಾದ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದೆ.
ಈ ವೇಳೆ ಅಂಬುಲೆನ್ಸ್ ಚಾಲಕನ ಸಮಯ ಪ್ರಜ್ಞೆಯಿಂದ ಅಂಬುಲೆನ್ಸ್ ಪಲ್ಟಿಹೊಡೆಯುವುದು ತಪ್ಪಿ, ರಸ್ತೆಯ ಬದಿಯ ಹಳ್ಳದಲ್ಲಿ ನಿಂತಿದೆ.
ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಣಾಪಾಯ ಉಂಟಾಗಿಲ್ಲವಾಗಿದ್ದು, ಬೇರೊಂದು ಅಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಘಟನೆಯಲ್ಲಿ ಕಾರು ಮತ್ತು ಅಂಬುಲೆನ್ಸ್ ಮುಂಭಾಗ ಜಖಂಗೊಂಡಿವೆ.
ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ