CM-led delegation meets Defense Minister.. Appeal for 2 defense corridors

ಸಿಎಂ ನೇತೃತ್ವದ ನಿಯೋಗದಿಂದ ರಕ್ಷಣಾ ಸಚಿವರ ಭೇಟಿ.. 2 ಡಿಫೆನ್ಸ್‌ ಕಾರಿಡಾರ್‌ಗೆ ಮನವಿ

ನವದೆಹಲಿ: ಬೆಂಗಳೂರು ಗ್ರಾಮಾಂತರ-ಕೋಲಾರ-ಚಿಕ್ಕಬಳ್ಳಾಪುರ ಮತ್ತು ಹುಬ್ಬಳ್ಳಿ ಧಾರವಾಡ-ಬೆಳಗಾವಿ-ವಿಜಯಪುರ ಜಿಲ್ಲೆಗಳಿಗೆ ಕೇಂದ್ರ ಸರಕಾರವು ಎರಡು ಪ್ರತ್ಯೇಕ ಡಿಫೆನ್ಸ್‌ ಕಾರಿಡಾರ್‌ (Defense Corridor) ಮಂಜೂರು ಮಾಡಬೇಕೆಂದು ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ನೇತೃತ್ವದ ರಾಜ್ಯ ಸರಕಾರದ ನಿಯೋಗವು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ (Rajnath Singh) ಅವರಿಗೆ ಬುಧವಾರ ಮನವಿ ಸಲ್ಲಿಸಿದೆ.

ನಿಯೋಗದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ (D.K. Shivakumar) ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ (M.B.Patila), ಇಂಧನ ಸಚಿವ ಕೆ ಜೆ ಜಾರ್ಜ್‌ (K.J.George), ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್‌ (Bairati Suresh) ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ (T.B. Jayachandra) ಇದ್ದರು.

ಕೇಂದ್ರ ಸರಕಾರವು 2018ರಲ್ಲಿ ಉತ್ತರಪ್ರದೇಶ ಮತ್ತು ತಮಿಳುನಾಡಿಗೆ ಡಿಫೆನ್ಸ್‌ ಕಾರಿಡಾರ್‌ ಮಂಜೂರು ಮಾಡಿದೆ. ಆದರೆ, ದೇಶದ ರಕ್ಷಣಾ ಮತ್ತು ವೈಮಾಂತರಿಕ್ಷ ವಲಯದಲ್ಲಿ ಕರ್ನಾಟಕವು ಶೇ.75ರಷ್ಟು ಪಾಲು ಹೊಂದಿದ್ದು, ಜಾಗತಿಕವಾಗಿ ಮೂರನೇ ಅತ್ಯುತ್ತಮ ಕಾರ್ಯಪರಿಸರ ಹೊಂದಿರುವ ಹೆಗ್ಗಳಿಕೆ ಸಂಪಾದಿಸಿದೆ. ಹೀಗಾಗಿ, ಉತ್ತರ ಕರ್ನಾಟಕ ಮತ್ತು ದಕ್ಷಿಣ ಕರ್ನಾಟಕಗಳಿಗೆ ಒಂದೊಂದು ಡಿಫೆನ್ಸ್‌ ಕಾರಿಡಾರ್‌ ಮಂಜೂರು ಮಾಡಿದರೆ, ಇದು ಮೇಕ್‌ ಇನ್‌ ಇಂಡಿಯಾ ಉಪಕ್ರಮಕ್ಕೂ ಬಲ ತುಂಬುತ್ತದೆ ಎಂದು ಸಿದ್ದರಾಮಯ್ಯ ಮನದಟ್ಟು ಮಾಡಿಕೊಟ್ಟಿದ್ದಾರೆ. ಈ ಸಂದರ್ಭದಲ್ಲಿ ಸಚಿವ ಪಾಟೀಲ ಅವರು ಕೂಡ ಪೂರಕ ಮಾಹಿತಿ ಒದಗಿಸಿದರು.

ಉತ್ತರ ಕರ್ನಾಟಕದ ಮೇಲ್ಕಂಡ ಮೂರು ಜಿಲ್ಲೆಗಳಲ್ಲಿ ರಕ್ಷಣಾ ವಲಯದ ಉತ್ಪಾದನಾ ಕಂಪನಿಗಳಾದ ಬಾಲೂ ಫೋರ್ಜ್‌, ಏಕಸ್‌, ಬಿಕಾರ್‌ ಏರೋಸ್ಪೇಸ್‌, ವಾಲ್‌ಚಂದ್‌ ನಗರ್‌ ಇಂಡಸ್ಟ್ರೀಸ್‌ ಮುಂತಾದವು ನೆಲೆಯೂರಿವೆ. ಜತೆಗೆ ಬೆಳಗಾವಿಯಲ್ಲಿ 250 ಎಕರೆಯಲ್ಲಿ ದೇಶದ ಪ್ರಪ್ರಥಮ ಪ್ರಿಸಿಶನ್‌ ಉತ್ಪಾದನೆಯ ವಿಶೇಷ ಆರ್ಥಿಕ ವಲಯವು ಸಕ್ರಿಯವಾಗಿದೆ. ಇಲ್ಲಿ 31 ಘಟಕಗಳಿದ್ದು, 5 ಸಾವಿರಕ್ಕೂ ಹೆಚ್ಚು ಜನರಿಗೆ ಉದ್ಯೋಗ ನೀಡಿವೆ ಎಂದು ಈ ಸಂದರ್ಭದಲ್ಲಿ ಗಮನಕ್ಕೆ ತರಲಾಗಿದೆ.

ದಕ್ಷಿಣ ಕರ್ನಾಟಕದ ಮೂರು ಜಿಲ್ಲೆಗಳಲ್ಲಿ ರಕ್ಷಣಾ ಸಾಮಗ್ರಿ ಮತ್ತು ವೈಮಾಂತರಿಕ್ಷ ಕಂಪನಿಗಳಾದ ಸಾರ್ವಜನಿಕ ವಲಯದ ಎಚ್‌ಎಎಲ್‌, ಕಾಲಿನ್ಸ್‌ ಏರೋಸ್ಪೇಸ್‌, ಡೈನಮ್ಯಾಟಿಕ್‌ ಟೆಕ್ನಾಲಜೀಸ್‌, ಸೆಂಟಮ್, ಸಾಸ್ಮೋಸ್‌, ಬೆಲ್ಲಾಟ್ರಿಕ್ಸ್‌ ಮುಂತಾದವು ಇವೆ. ಇವುಗಳೊಂದಿಗೆ ಟಿಎಎಸ್‌ಎಲ್‌ ತನ್ನ ಅಂತಿಮ ಜೋಡಣಾ ಘಟಕವನ್ನು ಆರಂಭಿಸುತ್ತಿದೆ. ಏರ್‌ ಇಂಡಿಯಾ ಮತ್ತು ಇಂಡಿಗೋ ಸಾವಿರಾರು ಕೋಟಿ ರೂ. ಬಂಡವಾಳ ಹೂಡಿಕೆಯೊಂದಿಗೆ ತಮ್ಮ ಎಂಆರ್‌ಒ ಘಟಕಗಳನ್ನು ಬೆಂಗಳೂರಿನ ಸಮೀಪದಲ್ಲಿ ಸ್ಥಾಪಿಸುತ್ತಿವೆ.

ದೇವನಹಳ್ಳಿಯಲ್ಲಿ 2 ಸಾವಿರ ಎಕರೆ ವಿಸ್ತಾರದ ಹೈಟೆಕ್‌ ರಕ್ಷಣಾ ಮತ್ತು ವೈಮಾಂತರಿಕ್ಷ ಪಾರ್ಕ್‌ ಇದೆ. ಈ ಭಾಗದಲ್ಲಿ ದೇಶದ ಏರ್‌ಕ್ರಾಫ್ಟ್‌ ಮತ್ತು ಸ್ಪೇಸ್‌ಕ್ರಾಫ್ಟ್‌ ವಲಯದ ಶೇಕಡ 25ರಷ್ಟು ತಯಾರಿಕೆ ನಡೆಯುತ್ತಿದೆ.

ವಿಮಾನ ಮತ್ತು ಹೆಲಿಕಾಪ್ಟರ್‌ ತಯಾರಿಕೆಯಲ್ಲಿ ರಾಜ್ಯದ ಕೊಡುಗೆ ಶೇ.67ರಷ್ಟಿದೆ. ಇವೆಲ್ಲವನ್ನೂ ಪರಿಗಣಿಸಿ, ಎರಡು ಡಿಫೆನ್ಸ್‌ ಕಾರಿಡಾರ್‌ಗಳನ್ನು ಮಂಜೂರು ಮಾಡಬೇಕೆಂದು ನಿಯೋಗವು ಒತ್ತಾಯಿಸಿದೆ.

ಮನವಿ ಸ್ವೀಕರಿಸಿದ ರಾಜನಾಥ್‌ ಸಿಂಗ್‌, ಇವುಗಳನ್ನು ಸೂಕ್ತವಾಗಿ ಪರಿಶೀಲಿಸುವ ಭರವಸೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ರಾಜಕೀಯ

2028ಕ್ಕೆ ಜೆಡಿಎಸ್ ಬಿಜೆಪಿ ಸಮ್ಮಿಶ್ರ ಸರ್ಕಾರ ರಚನೆ; ಗೌರಿಬಿದನೂರಿನಲ್ಲಿ ನಿಖಿಲ್ ಕುಮಾರಸ್ವಾಮಿ ಹೇಳಿಕೆ

2028ಕ್ಕೆ ಜೆಡಿಎಸ್ ಬಿಜೆಪಿ ಸಮ್ಮಿಶ್ರ ಸರ್ಕಾರ ರಚನೆ; ಗೌರಿಬಿದನೂರಿನಲ್ಲಿ ನಿಖಿಲ್ ಕುಮಾರಸ್ವಾಮಿ ಹೇಳಿಕೆ

ಗೌರಿಬಿದನೂರು ವಿಧಾನಸಭಾ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ಜನರೊಂದಿಗೆ ಜನತಾದಳ- ಜೆಡಿಎಸ್ ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನ: Nikhil Kumaraswamy

[ccc_my_favorite_select_button post_id="110827"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: KSRTC ಬಸ್ಸಿಂದ ಆಯತಪ್ಪಿ ಬಿದ್ದು ಮಹಿಳೆ ದುರ್ಮರಣ..!

ದೊಡ್ಡಬಳ್ಳಾಪುರ: KSRTC ಬಸ್ಸಿಂದ ಆಯತಪ್ಪಿ ಬಿದ್ದು ಮಹಿಳೆ ದುರ್ಮರಣ..!

ಮೆಳೇಕೋಟೆ ಕ್ರಾಸ್‌ಗೆ KSRTC ಸಾರಿಗೆ ಬಸ್ಸಿನಲ್ಲಿ ಬರುವ ವೇಳೆ ಮಹಿಳೆಯೋರ್ವ ಆಯತಪ್ಪಿ ಬಸ್ಸಿಂದ ಬಿದ್ದು ಸಾವನಪ್ಪಿರುವ ಘಟನೆ

[ccc_my_favorite_select_button post_id="110837"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!