ದೊಡ್ಡಬಳ್ಳಾಪುರ: ಮೆಳೇಕೋಟೆ ಕ್ರಾಸ್‌ಗೆ KSRTC ಸಾರಿಗೆ ಬಸ್ಸಿನಲ್ಲಿ ಬರುವ ವೇಳೆ ಮಹಿಳೆಯೋರ್ವರು ಚಲಿಸುತ್ತಿದ್ದ ಬಸ್ಸಿಂದ ಆಯತಪ್ಪಿ ಬಿದ್ದು ಸಾವನಪ್ಪಿರುವ ಘಟನೆ ತಾಲೂಕಿನ ದೊಡ್ಡರಾಯಪ್ಪನಹಳ್ಳಿ ಬಳಿ ಸಂಭವಿಸಿದೆ.
ಮೃತ ದುರ್ದೈವಿಯನ್ನು ದೊಡ್ಡರಾಯಪ್ಪನಹಳ್ಳಿ ನಿವಾಸಿ ಶಶಿಕಲಾ ( 45 ವರ್ಷ) ಎಂದು ಪೊಲೀಸರು ಗುರುತಿಸಿದ್ದಾರೆ.
ಇಂದು ಮಧ್ಯಾಹ್ನ ದೊಡ್ಡರಾಯಪ್ಪನಹಳ್ಳಿಯಿಂದ ಮೆಳೇಕೋಟೆ ಕ್ರಾಸ್ಗೆ ಬರುವ ವೇಳೆ KSRTC ಬಸ್ಸಿನ ಹಿಂದಿನ ಬಾಗಿಲಿಂದ ಬಿದ್ದು ಸ್ಥಳದಲ್ಲಿಯೇ ಸಾವನಪ್ಪಿದ್ದಾರೆ.
ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಸಾಧಿಕ್ ಪಾಷಾ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೃತ ದೇಹವನ್ನು ಶವಾಗಾರಕ್ಕೆ ಸ್ಥಳಾಂತರ ಮಾಡಿದ್ದು, ತನಿಖೆ ಕೈಗೊಂಡಿದ್ದಾರೆ.