Don't talk nonsense, give money first: DCM D.K. Shivakumar slams Kumaraswamy

ಖಾಲಿ ಮಾತು ಬೇಡ, ಮೊದಲು ದುಡ್ಡು ಕೊಡಿಸಲಿ: ಕುಮಾರಸ್ವಾಮಿಯನ್ನು ಛೇಡಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್

ನವದೆಹಲಿ: “ಮೊದಲು ದುಡ್ಡು ಕೊಡಿಸಲಿ, ಕೇವಲ ಖಾಲಿ ಮಾತನಾಡುವುದು ಬೇಡ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar) ಅವರು ಕೇಂದ್ರ ಸಚಿವ ಕುಮಾರಸ್ವಾಮಿ ಅವರನ್ನು ಛೇಡಿಸಿದ್ದಾರೆ.

ದೆಹಲಿಯ ಕರ್ನಾಟಕ ಭವನದಲ್ಲಿ ಶಿವಕುಮಾರ್ ಅವರು ಬುಧವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.

ಟನಲ್ ರಸ್ತೆ ವಿಚಾರವಾಗಿ ನಿತಿನ್ ಗಡ್ಕರಿ ಅವರನ್ನು ಕುಮಾರಸ್ವಾಮಿ ಅವರು ಭೇಟಿಯಾಗಿ ಚರ್ಚೆ ನಡೆಸಿರೋದು ಕ್ರೆಡಿಟ್ ವಾರ್ ಆಗುತ್ತಿದೆಯೇ ಎಂದು ಮಾಧ್ಯಮದವರು ಕೇಳಿದಾಗ ಅವರು ಹೀಗೆ ಪ್ರತಿಕ್ರಿಯಿಸಿದರು.

“ಕುಮಾರಸ್ವಾಮಿ ಅವರ ಸಲಹೆ ಮತ್ತು ನಿಮ್ಮ ಸಲಹೆಯನ್ನೂ ನಾನು ಸ್ವೀಕಾರ ಮಾಡುತ್ತೇನೆ” ಎಂದರು.

ಸಂಪುಟ ಬದಲಾವಣೆಗಾಗಿ ಮುಖ್ಯಮಂತ್ರಿ ದೆಹಲಿ ಭೇಟಿ ನೀಡಿದ್ದಾರೆಯೇ ಎಂದು ಕೇಳಿದಾಗ, “ಸದ್ಯಕ್ಕೆ ಸಂಚಿವ ಸಂಪುಟ ಬದಲಾವಣೆ ಕುರಿತು ಯಾವುದೇ ಚರ್ಚೆಯಿಲ್ಲ. ನಾವು ಬಂದಿರುವುದು ಅಭಿವೃದ್ದಿ ವಿಚಾರಗಳನ್ನು ಚರ್ಚೆ ನಡೆಸಲು. ಬೆಂಗಳೂರಿನಲ್ಲಿ ಒಂದಷ್ಟು ರಸ್ತೆಗಳನ್ನು ಅಗಲೀಕರಣ ಮಾಡಬೇಕಿದೆ. ಇದಕ್ಕೆ ರಕ್ಷಣಾ ಇಲಾಖೆ ಭೂಮಿಗಳ ಅವಶ್ಯಕತೆಯಿದೆ. ಈ ಕಾರಣಕ್ಕೆ ಹಾಗೂ ದಸರಾ ವೇಳೆ ಚುಟುಕು ಏರ್ ಶೋ ನಡೆಸಲು ರಕ್ಷಣಾ ಸಚಿವರನ್ನು ಭೇಟಿ ಮಾಡುವುದಕ್ಕಾಗಿ ಬಂದಿದ್ದೇವೆ” ಎಂದು ಹೇಳಿದರು.

ನಾಲ್ಕು ಎಂಎಲ್ ಸಿ ಸ್ಥಾನಗಳ ನಾಮನಿರ್ದೇಶನ ಯಾವಾಗ ಎಂದು ಕೇಳಿದಾಗ, “ವಿಧಾನಸಭಾ ಅಧಿವೇಶನದ ಮುಂಚಿತವಾಗಿ ಮುಗಿಯುತ್ತದೆ ಎಂದು ಹೇಳಿದರು. ಮಾಧ್ಯಮದವರಿಗೂ ಒಂದು ಸ್ಥಾನ ನೀಡಲಾಗುವುದು” ಎಂದು ಹೇಳಿದರು.

ನೀವು ಸೋನಿಯಾ ಗಾಂಧಿ ಹಾಗೂ ಇತರೆ ಹಿರಿಯ ನಾಯಕರನ್ನು ಭೇಟಿಯಾಗಿದ್ದೀರಾ ಎಂದು ಕೇಳಿದಾಗ, “ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಿಲ್ಲ. ಹಿರಿಯ ನಾಯಕರ ಭೇಟಿಗೆ ಸಮಯ ಕೇಳಿದ್ದೇನೆ. ಸಮಯ ನೀಡದಿದ್ದರೆ ಯಾರನ್ನೂ ಭೇಟಿಯಾಗಲು ಆಗುವುದಿಲ್ಲ. ರಾಹುಲ್ ಗಾಂಧಿ ಅವರು ಪಾಟ್ನಾಗೆ ತೆರಳಿದ್ದಾರೆ” ಎಂದು ತಿಳಿಸಿದರು.

ಬೀದರ್ ನ ಸಣ್ಣ ನೀರಾವರಿ ಇಲಾಖೆಯ ಎಫ್ ಡಿಎ ಅವರು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವಿಡಿಯೋ ಹರಿಬಿಟ್ಟಿರುವ ಬಗ್ಗೆ ಕೇಳಿದಾಗ, “ಈ ವಿಚಾರ ನನಗೆ ತಿಳಿದಿಲ್ಲ. ಮಾಹಿತಿ ತಿಳಿದು ಮಾತನಾಡುತ್ತೇನೆ” ಎಂದರು.

ಪಾಟ್ನಾದಲ್ಲಿ ರಾಹುಲ್ ಗಾಂಧಿ ಅವರ ಪ್ರತಿಭಟನೆಯನ್ನು ತಡೆದಿರುವ ಬಗ್ಗೆ ಕೇಳಿದಾಗ, “ವಿರೋಧ ಪಕ್ಷಗಳ ದನಿಯನ್ನು ಅಡಗಿಸುವುದೇ ಈ ಸರ್ಕಾರದ ಕೆಲಸ. ರಾಹುಲ್ ಗಾಂಧಿ ಅವರು ಮತದಾರರ ಹಕ್ಕುಗಳನ್ನು ರಕ್ಷಿಸಲು ಹೋಗಿದ್ದಾರೆ” ಎಂದು ಹೇಳಿದರು.

ಮಹಾರಾಷ್ಟ್ರದಲ್ಲಿ ಭಾಷಾ ಸಂಘರ್ಷದ ಬಗ್ಗೆ ಕೇಳಿದಾಗ, “ಇದು ಆಯಾ ರಾಜ್ಯಕ್ಕೆ ಸಂಬಂಧಪಟ್ಟ ವಿಚಾರ. ಅದರ ಬಗ್ಗೆ ನಾನು ಮಾತನಾಡುವುದಿಲ್ಲ. ನಾವು ಕನ್ನಡ ಮತ್ತು ಇಂಗ್ಲಿಷ್ ಗೆ ಪ್ರಾಮುಖ್ಯತೆ ನೀಡುತ್ತೇವೆ” ಎಂದು ಹೇಳಿದರು.

ಕನ್ನಡ ಪರೀಕ್ಷೆ ಅಂಕಗಳನ್ನು 125 ರಿಂದ 100 ಕ್ಕೆ ಇಳಿಸಿರುವ ಬಗ್ಗೆ ಬಿಜೆಪಿ ಹಾಗೂ ಕೇಂದ್ರ ಸಚಿವ ಸೋಮಣ್ಣ ಅವರು ವಿರೋಧ ವ್ಯಕ್ತಪಡಿಸಿರುವ ಬಗ್ಗೆ ಕೇಳಿದಾಗ, “ನನ್ನ ಇಲಾಖೆಯ ಬಗ್ಗೆ ನನಗೆ ಪ್ರಶ್ನೆ ಕೇಳಿದರೆ ಉತ್ತರ ಹೇಳಬಹುದು” ಎಂದರು.

ಟನಲ್ ರಸ್ತೆ ವಿಚಾರವಾಗಿ ಕೇಳಿದಾಗ, “ಇದಕ್ಕೆ ಎರಡು- ಮೂರು ದಿನದಲ್ಲಿ ಗ್ಲೋಬಲ್ ಟೆಂಡರ್ ಕರೆಯಲಾಗುವುದು. ಟೋಲ್ ಇಲ್ಲದೇ ರಸ್ತೆ ಮಾಡಲು ಸಾಧ್ಯವಿಲ್ಲ. ಏರ್ ಪೋರ್ಟ್, ಮೈಸೂರು ರಸ್ತೆ, ನೈಸ್ ರಸ್ತೆಗಳಲ್ಲಿ ಟೋಲ್ ಇದೆಯಲ್ಲಾ” ಎಂದರು.

ಸುರ್ಜೇವಾಲ ಅವರ ಕರ್ನಾಟಕ ಭೇಟಿಯ ಬಗ್ಗೆ ಕೇಳಿದಾಗ, “ಮಲ್ಲಿಕಾರ್ಜುನ ಖರ್ಗೆ ಅವರು ಈ ವರ್ಷವನ್ನು ಪಕ್ಷ ಸಂಘಟನಾ ವರ್ಷ ಎಂದು ಘೋಷಣೆ ಮಾಡಿದ್ದಾರೆ. ಜಿಲ್ಲಾ ಅಧ್ಯಕ್ಷರನ್ನು ಕರೆಸಿ ಸಭೆ ನಡೆಸಲಾಗಿದೆ.

ರಾಜ್ಯದಾದ್ಯಂತ 100 ಕಾಂಗ್ರೆಸ್ ಕಚೇರಿಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಮಾಧ್ಯಮಗಳು ಹೇಳಿದಂತೆ ಯಾವುದೇ ರಾಜಕೀಯ ವಿಚಾರ ಇಲ್ಲಿಲ್ಲ. ಕೇವಲ ಸಂಘಟನೆ ವಿಚಾರ” ಎಂದು ಹೇಳಿದರು.

ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ

“ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ಒಟ್ಟು ₹11,122.76 ಕೋಟಿ ಅನುದಾನಕ್ಕಾಗಿ ಮನವಿ ಸಲ್ಲಿಸಿದ್ದೇವೆ. ಕುಡಿಯುವ ನೀರಿನ ಉದ್ದೇಶದ ಎತ್ತಿನಹೊಳೆ ಯೋಜನೆಗೆ ಶೇ.25 ರಷ್ಟು ಆರ್ಥಿಕ ಸಹಾಯ, ಕಳಸಾ ಬಂಡೂರಿ ಯೋಜನೆ, ಕೃಷ್ಣಾ ನದಿ ನೀರಿನ ವಿಚಾರವಾಗಿ ಕೇಂದ್ರ ಜಲಶಕ್ತಿ ಹಾಗೂ ಪರಿಸರ ಸಚಿವರನ್ನು ಭೇಟಿ ಮಾಡಿ ಚರ್ಚೆ ನಡೆಸಲಾಗಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ನವದೆಹಲಿಯ ಕರ್ನಾಟಕ ಭನವದಲ್ಲಿ ಜಲಸಂಪನ್ಮೂಲ ಸಚಿವರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಬುಧವಾರ ಮಾಧ್ಯಮಗೋಷ್ಠಿ ನಡೆಸಿ ದೆಹಲಿ ಪ್ರವಾಸ ಹಾಗೂ ಕೇಂದ್ರ ಸಚಿವರ ಭೇಟಿ ವಿಚಾರವಾಗಿ ಮಾಹಿತಿ ನೀಡಿದರು.

“ಆರು ನೀರಾವರಿ ಯೋಜನೆಗಳಾದ ಸೊನ್ನತಿ ಏತ ನೀರಾವರಿ ಯೋಜನೆಗೆ ₹ 804.66 ಕೋಟಿ, ಯುಕೆಪಿಯ ಇಂಡಿ ಶಾಖಾ ಕಾಲುವೆಗೆ ₹2,666.70 ಕೋಟಿ, ಮಲಪ್ರಭಾ ಕಾಲುವೆ ಮೂರನೇ ಹಂತಕ್ಕೆ ₹3000 ಕೋಟಿ, ಘಟಪ್ರಭಾ ಬಲದಂಡೆ ಕಾಲುವೆ ಮತ್ತು ಚಿಕ್ಕೋಡಿ ಶಾಖಾ ನಾಲೆಗೆ ₹1,444.42 ಕೋಟಿ, ಬೆಣ್ಣೆಹಳ್ಳದ ಪ್ರವಾಹ ನಿಯಂತ್ರಣ ಹಾಗೂ ನಿರ್ವಹಣೆಗಾಗಿ ₹1,610 ಕೋಟಿ ಸೇರಿದಂತೆ ಒಟ್ಟು ₹11,122.76 ಕೋಟಿ ಅನುದಾನಕ್ಕಾಗಿ ಮನವಿ ಸಲ್ಲಿಸಿದ್ದೇವೆ. ಇದರಲ್ಲಿ ಒಂದಕ್ಕೆ ಅನುದಾನ ನೀಡಲಾಗಿದೆ ಎಂಬ ಮಾಹಿತಿ ಬಂದಿದೆ. ಆದರೆ ನಮಗೆ ಇನ್ನು ಅಧಿಕೃತವಾಗಿ ತಿಳಿಸಿಲ್ಲ” ಎಂದು ತಿಳಿಸಿದರು.

“ಎತ್ತಿನಹೊಳೆ ಯೋಜನೆಯನ್ನು ಕುಡಿಯುವ ನೀರಿನ ಉದ್ದೇಶಕ್ಕೆ ಎಂದು ಅನುಮೋದಿಸಿ ಶೇ.25 ರಷ್ಟು ಆರ್ಥಿಕ ಸಹಾಯ ನೀಡಬೇಕಾಗಿ ಮನವಿ ಮಾಡಿದ್ದೇನೆ. ಈ ಯೋಜನೆ ಕಾಮಗಾರಿಯನ್ನು ತುಮಕೂರು ಹಾಗೂ ಹಾಸನ ಭಾಗದಲ್ಲಿ ನಿಲ್ಲಿಸಲಾಗಿತ್ತು. ಯೋಜನೆ ಹಾದು ಹೋಗುವ ಕಡೆ ಕಂದಾಯ ಭೂಮಿ ಹೊಂದಿದ್ದ ರೈತರಿಗೆ ಪೋಡಿ ವಿತರಣೆ ಮಾಡಿ ಪರಿಹಾರವನ್ನೂ ನೀಡಲಾಗಿತ್ತು” ಎಂದರು.

“ಆದರೆ ತದ ನಂತರ ಅರಣ್ಯ ಇಲಾಖೆಯವರು ಇದು ನಮ್ಮ ಭೂಮಿ ಎಂದು ತಕರಾರು ತೆಗೆದರು. ಅವರ ಬಳಿ ಸಂಘರ್ಷ ಬೇಡ ಎಂದು ಬದಲಿ ಭೂಮಿ ನೀಡಿದ್ದೇವೆ. ಇದಕ್ಕೆ ಅರಣ್ಯ ಇಲಾಖೆಯವರು ಕ್ಲಿಯರೆನ್ಸ್ ಪ್ರಮಾಣ ಪತ್ರ ನೀಡಬೇಕಿತ್ತು, ಆದರೆ ಮಾಡಿಲ್ಲ. ಕೆಲವು ತಕರಾರುಗಳನು ಹಾಕಿದ್ದಾರೆ. ಈಗಾಗಲೇ ಕೇಂದ್ರ ಸಚಿವರನ್ನು ಮೂರು ಬಾರಿ ಭೇಟಿ ಮಾಡಲಾಗಿತ್ತು ಆದರೂ ಇದಕ್ಕೆ ಒಪ್ಪಿಗೆ ಸಿಕ್ಕಿಲ್ಲ. ಕಾಲುವೆ ತೆಗೆದಾಗ ಬರುವ ಮಣ್ಣನ್ನು ಇಲ್ಲಿಯೇ ಹಾಕಲಾಗುತ್ತಿದೆ. ಬದಲಾಗಿ 25 ಕಿಲೋ ಮೀಟರ್ ದೂರ ಹಾಕಿ ಎಂಬುದು ಅವರ ಪ್ರಮುಖ ತಕರಾರು. ಕೇಂದ್ರ ಸಚಿವರು ಸದ್ಯದಲ್ಲೇ ಇದನ್ನು ಬಗೆಹರಿಸುವುದಾಗಿ ತಿಳಿಸಿದ್ದಾರೆ” ಎಂದರು.

ಖಾತೆಗೆ ಹಣ ಬರುವವರೆಗೂ ಖಾತರಿ ಇಲ್ಲ

ಭದ್ರಾ ಮೇಲ್ದಂಡೆ ವಿಚಾರವಾಗಿ ಕೇಳಿದಾಗ, “ಈ ಬಗ್ಗೆಯೂ ಅನುದಾನ ಕೇಳಿದ್ದೇವೆ. ಕೇಂದ್ರ ಸರ್ಕಾರದಿಂದ ಪರಿಷ್ಕೃತ ಅಂದಾಜು ಪಟ್ಟಿ ಕೇಳಿದ್ದರು ಅದನ್ನು ಕೂಡ ಸಲ್ಲಿಸಿದ್ದೇವೆ. ಈ ಹಿಂದೆ ಹೇಳಿದ್ದ ₹5,300 ಕೋಟಿಗಿಂತಲೂ ಹೆಚ್ಚು ಅನುದಾನದ ಪರಿಷ್ಕೃತ ಪಟ್ಟಿ ಕಳುಹಿಸಿದ್ದೇವೆ. ಈಗಾಗಲೇ ₹10,604 ಕೋಟಿ ಖರ್ಚು ಮಾಡಿದ್ದೇವೆ ಎಂದು ಹೇಳಿದ್ದೇವೆ. ಹಣ ನೀಡುತ್ತೇವೆ ಎಂದು ಹೇಳಿದ್ದಾರೆ. ಹಣ ಸರ್ಕಾರದ ಖಾತೆಗೆ ಬರುವವರೆಗೂ ನಂಬಿಕೆಯಿಲ್ಲ” ಎಂದರು.

ಕಳೆದ ಎರಡು ವರ್ಷದಿಂದ ಅನುದಾನದ ಬಗ್ಗೆ ಹೇಳಿದ್ದನ್ನೇ ಕೇಂದ್ರ ಸರ್ಕಾರ ಹೇಳುತ್ತಿದೆ ಎಂದು ಕೇಳಿದಾಗ, “ಇದರ ಬಗ್ಗೆ ಕೇಂದ್ರ ಸರ್ಕಾರವನ್ನೇ ಕೇಳಬೇಕು. ಇದು ರಾಜಕೀಯವೇ? ಕೇಂದ್ರ ಸರ್ಕಾರದ ಬಳಿ ದುಡ್ಡಿಲ್ಲವೇ? ಎಂದು ಕೇಳಬೇಕು. ಯೋಜನೆಗೆ ಎಷ್ಟು ಖರ್ಚಾಗಿದೆ ಎಂದು ಮಾಹಿತಿ ಕೇಳಿದ್ದರು. ಅದನ್ನೂ ಸಹ ನೀಡಲಾಗಿದೆ. ಒಮ್ಮೆ ಮಾತ್ರ ಕ್ಯಾಬಿನೆಟ್ ಬಳಿ ಇದೆ ಎಂದು ಹೇಳಿದ್ದರು” ಎಂದು ತಿಳಿಸಿದರು.

ಡಿಪಿಆರ್ ಸಲ್ಲಿಸಿದ ಮೇಲೆ ₹5,300 ಕೋಟಿ ಘೋಷಣೆ ಮಾಡಿದ್ದರು ಈಗ ವಿಳಂಬವಾಗುತ್ತಿರುವುದು ಏಕೆ ಎಂದು ಕೇಳಿದಾಗ, “ಏನು ಮಾಡುವುದು ಅಧಿಕಾರಕ್ಕೆ ಕಾಂಗ್ರೆಸ್ ಸರ್ಕಾರ ಬಂದುಬಿಟ್ಟಿತ್ತಲ್ಲ” ಎಂದು ಮಾರ್ಮಿಕವಾಗಿ ಉತ್ತರಿಸಿದರು.

ನಮಗೆ ಸಹಕಾರ ನೀಡಿದರೆ ಗೋವಾದವರಿಗೂ ಸಹಕಾರ

ಗೋವಾದವರು ನಮ್ಮ ಭಾಗದಲ್ಲಿ ವಿದ್ಯುತ್ ಮಾರ್ಗ ಹಾಕಲು ನಾವು ತಕರಾರು ತೆಗೆದಿದ್ದೇವೆ ಎಂದು ಹೇಳಿದ್ದಾರೆ. ನೀವು ನಮಗೆ ಸಹಕಾರ ನೀಡುವುದಾದರೆ ನಾವು ನಿಮಗೆ ನೀಡುತ್ತೇವೆ ಎಂದು ಹೇಳಿದ್ದೇವೆ. ಒಂದು ವಾರದಲ್ಲಿ ಇದರ ಬಗ್ಗೆ ಕೇಂದ್ರ ಪರಿಸರ ಸಚಿವರು ಅಭಿಪ್ರಾಯ ತಿಳಿಸುವುದಾಗಿ ಹೇಳಿದ್ದಾರೆ. ಮುಂದಿನ ಸಂಸತ್ ಅಧಿವೇಶನ ನಡೆಯುವುದರ ಒಳಗಾಗಿ ಮತ್ತೆ ಭೇಟಿ ಮಾಡುತ್ತೇನೆ ಎಂದು ತಿಳಿಸಿದ್ದೇನೆ” ಎಂದರು.

“ಕಳಸಾ ಬಂಡೂರಿ ಕಾಮಗಾರಿ ಸಂಬಂಧವಾಗಿ ಬಿಜೆಪಿ ಸರ್ಕಾರವಿದ್ದ ವೇಳೆ ಕೆಲಸ ಮಾಡಬಹುದು ಎಂದು ಹೇಳಿದರು. ಈ ಪ್ರಕಾರವಾಗಿ ನಾವು ಟೆಂಡರ್ ಅನ್ನು ಕೂಡ ಕರೆಯಲಾಯಿತು. ಆದರೆ ಗೋವಾ ಸರ್ಕಾರ 09.01.2023 ರಲ್ಲಿ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಇದಕ್ಕೆ ನಮ್ಮ ಅಧಿಕಾರಿಗಳು ತಕ್ಷಣ ಉತ್ತರ ನೀಡಿ ʼನೀವು ಶೋಕಾಸ್ ನೋಟಿಸ್ ನೀಡಲು ಬರುವುದಿಲ್ಲʼ ಎಂದು ಹೇಳಿದ್ದಾರೆ. ಈ ವ್ಯಾಜ್ಯ ನ್ಯಾಯಾಲಯದಲ್ಲಿದೆ” ಎಂದರು.

“ಈ ವಿಚಾರವನ್ನು ಕೇಂದ್ರ ಸಚಿವರ ಗಮನಕ್ಕೆ ತಂದು ʼಗೋವಾ ಸರ್ಕಾರ ನಮಗೆ ಶೋಕಾಸ್ ನೋಟಿಸ್ ನೀಡಲು ಯಾರುʼ ಎಂದು ಕೇಳಿದ್ದೇನೆ. ನಮ್ಮ ಜಾಗದಲ್ಲಿ ನಾವು ಕಾಮಗಾರಿ ನಡೆಸುತ್ತೇವೆ. ನೀವು ಈ ವಿಚಾರವಾಗಿ ಅವರಿಗೆ ತಿಳಿಹೇಳಿ. ಇದರ ಬಗ್ಗೆ ಪ್ರಹ್ಲಾದ್ ಜೋಶಿ ಅವರೂ ಸಹ ಬಂದು ಮಾತನಾಡಿದರು ಎಂದು ಕೇಂದ್ರ ಸಚಿವರು ಹೇಳಿದರು. ಗೋವಾ ತಕರಾರಿನ ಬಗ್ಗೆ ಈಗಾಗಲೇ ನ್ಯಾಯಲಯದಲ್ಲಿ ದಾವೆ ಹೂಡಲಾಗಿದೆ. ನಮ್ಮ ಅರಣ್ಯ ಭೂಮಿ ಬಗ್ಗೆ ಕೇಂದ್ರ ಸರ್ಕಾರ ನಮ್ಮ ಬಳಿ ಕೇಳುತ್ತದೆ. ಗೋವಾ ನಮಗೆ ಸೂಚನೆ ನೀಡಲು ಯಾರು” ಎಂದು ಪುರುಚ್ಚರಿಸಿದರು.

“ಮೇಕೆದಾಟು ವಿಚಾರವಾಗಿ ಅಪ್ರೇಸಲ್ ವರದಿಯನ್ನು ಕೇಂದ್ರ ಸರ್ಕಾರ ನೀಡಬೇಕು. ಸಿಡ್ಬ್ಯೂಸಿಗೆ ಅಪ್ರೇಸಲ್ ವರದಿ ನೀಡಿ ಡಿಪಿಆರ್ ಗೆ ಅನುಮತಿ ನೀಡಬೇಕು ಎಂದು ಹೇಳಿದ್ದೇನೆ. ಸಿಡ್ಬ್ಯೂಎಂಎ ಅವಾರ್ಡ್ ಅನ್ನು ಸುಪ್ರೀಂ ಕೋರ್ಟ್ ಆದೇಶದ ಪ್ರಕಾರವೇ ಮಾಡಿ ನೀಡಿದ್ದೇವೆ. ನೀವು ನ್ಯಾಯಲಯಕ್ಕೆ ಏನು ಬೇಕಾದರೂ ವರದಿ ನೀಡಿ. ನ್ಯಾಯಲಯ ತನ್ನ ತೀರ್ಮಾನ ತಿಳಿಸಲಿ ಎಂದು ಹೇಳಿದ್ದೇವೆ. ನಮಗಿಂತ ಹೆಚ್ಚು ತಮಿಳುನಾಡಿಗೆ ಉಪಯೋಗ ಎಂದು ತಿಳಿಸಿದ್ದೇವೆ. ಇದರ ಬಗ್ಗೆ ಅವರನ್ನು ಕರೆಸಿ ಮಾತನಾಡುತ್ತೇನೆ ಎಂದು ಸಚಿವರು ತಿಳಿಸಿದ್ದಾರೆ” ಎಂದರು.

“ಕೃಷ್ಣಾ ನದಿ ನೀರಿನ ವಿಚಾರವಾಗಿ ಸಭೆಯ ದಿನಾಂಕ ನಿಗಧಿಯಾಗಿತ್ತು. ಆದರೆ ಇದ್ದಕ್ಕಿದ್ದಂತೆ ಸಭೆ ರದ್ದಾಯಿತು. ಜುಲೈ ತಿಂಗಳಿನಲ್ಲಿಯೇ ಮತ್ತೊಮ್ಮೆ ಸಭೆ ಕರೆಯುವುದಾಗಿ ಜಲಶಕ್ತಿ ಸಚಿವರು ತಿಳಿಸಿದ್ದಾರೆ. ಏಕೆಂದರೆ ಆಲಮಟ್ಟಿ ಅಣೆಕಟ್ಟಿನ ಎತ್ತರ ಹೆಚ್ಚಳದ ಬಗ್ಗೆ ತೀರ್ಮಾನವಾಗಿದ್ದರೂ 10 ವರ್ಷದಿಂದ ನಮ್ಮ ಪಾಲಿನ ನೀರು ಸಿಗದೇ ಕಾಯುತ್ತಿದ್ದೇವೆ. 1.40 ಲಕ್ಷ ಎಕರೆಗೆ ನೀರಾವರಿ ನೀಡಲು ನಾವು ತಯಾರಿ ಮಾಡಿಕೊಂಡಿದ್ದೇವೆ. ಇದರ ಬಗ್ಗೆ ಒಪ್ಪಂದವೂ ಆಗಿದೆ. ಕೇಂದ್ರದಿಂದ ಗೆಜೆಟ್ ನೋಟಿಫಿಕೇಷನ್ ಮಾತ್ರ ಆಗಬೇಕು. ನಮ್ಮ ನೀರನ್ನು ಬಳಸಿಕೊಳ್ಳುವುದಕ್ಕೆ ಮಹಾರಾಷ್ಟ್ರ ಏಕೆ ತಕರಾರು ಹಾಕಬೇಕು. ಮಹಾರಾಷ್ಟ್ರ, ಆಂಧ್ರ, ತೆಲಂಗಾಣವನ್ನು ಕರೆದು ಮಾತನಾಡಬೇಕು ಎಂದು ಹೇಳಿದ್ದೇನೆ. ಇದರ ಬಗ್ಗೆ ಸಭೆಯನ್ನು ಸಂಸತ್ ಅಧಿವೇಶನದ ಒಳಗಾಗಿ ಕರೆಯುತ್ತೇವೆ ಎಂದು ಸಚಿವರು ತಿಳಿಸಿದ್ದಾರೆ. ಕೇಂದ್ರ ಸಚಿವರು, ಸಂಸದರಿಗೆ ಈ ವಿಚಾರವಾಗಿ ಒತ್ತಡ ಏರಬೇಕು ಎಂದು ಮತ್ತೊಮ್ಮೆ ಮನವಿ ಮಾಡುತ್ತೇನೆ” ಎಂದರು.

“ಕೇಂದ್ರ ಸಚಿವರುಗಳನ್ನು ಭೇಟಿ ಮಾಡುವ ವೇಳೆ ಇದೇ ವೇಳೆ ಜೊತೆಯಲ್ಲಿ ಕೇಂದ್ರ ಸಚಿವರಾದ ಸೋಮಣ್ಣ ಅವರು ಸಹ ಇದ್ದರು. ಪ್ರಹ್ಲಾದ್ ಜೋಶಿ ಅವರನ್ನೂ ಭೇಟಿ ಮಾಡಲಾಯಿತು” ಎಂದು ಹೇಳಿದರು.

ರಾಜಕೀಯ

ಖಾಲಿ ಮಾತು ಬೇಡ, ಮೊದಲು ದುಡ್ಡು ಕೊಡಿಸಲಿ: ಕುಮಾರಸ್ವಾಮಿಯನ್ನು ಛೇಡಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್

ಖಾಲಿ ಮಾತು ಬೇಡ, ಮೊದಲು ದುಡ್ಡು ಕೊಡಿಸಲಿ: ಕುಮಾರಸ್ವಾಮಿಯನ್ನು ಛೇಡಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್

“ಮೊದಲು ದುಡ್ಡು ಕೊಡಿಸಲಿ, ಕೇವಲ ಖಾಲಿ ಮಾತನಾಡುವುದು ಬೇಡ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar) ಅವರು ಕೇಂದ್ರ ಸಚಿವ ಕುಮಾರಸ್ವಾಮಿ ಅವರನ್ನು ಛೇಡಿಸಿದ್ದಾರೆ.

[ccc_my_favorite_select_button post_id="110821"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ ಮಹಿಳೆ

ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ

ಗ್ರಾಮಪಂಚಾಯಿತಿ ಅದ್ಯಕ್ಷೆಗೆ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಐ ಲವ್ ಯು (I Love You) ಎಂದು ಕಿರುಕುಳ ಆರೋಪ ಹಿನ್ನೆಲೆ, ಮಹಿಳೆಯೋರ್ವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿರುವ

[ccc_my_favorite_select_button post_id="110702"]
ದೊಡ್ಡಬಳ್ಳಾಪುರ: ಅಪಘಾತದಲ್ಲಿ ಗಾಯಗೊಂಡವರನ್ನು ಕರೆದೊಯ್ಯುತ್ತಿದ್ದ  ಅಂಬುಲೆನ್ಸ್ಗೆ ಆಕ್ಸಿಡೆಂಟ್..!| Video ನೋಡಿ

ದೊಡ್ಡಬಳ್ಳಾಪುರ: ಅಪಘಾತದಲ್ಲಿ ಗಾಯಗೊಂಡವರನ್ನು ಕರೆದೊಯ್ಯುತ್ತಿದ್ದ ಅಂಬುಲೆನ್ಸ್ಗೆ ಆಕ್ಸಿಡೆಂಟ್..!| Video ನೋಡಿ

ಮಹಿಳೆಯೋರ್ವರನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ 108 ಅಂಬುಲೆನ್ಸ್ಗೆ (108 Ambulance) ಕಾರೊಂದು ಡಿಕ್ಕಿ ಹೊಡೆದಿರುವ ಘಟನೆ (Accident) ತಾಲೂಕಿನ

[ccc_my_favorite_select_button post_id="110756"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!