Two arrested for rape

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News; ಹುಬ್ಬಳ್ಳಿಯಲ್ಲಿ ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ.

ಇಲ್ಲಿನ ಮಂಟೂರ ರಸ್ತೆಯಲ್ಲಿ ಗ್ಯಾಂಗ್‌ ವಾ‌ರ್ ನಡೆದಿದ್ದು, ಶ್ಯಾಮ್ ಜಾಧವ್ ಮತ್ತೆ ಎಮ್.ಡಿ.ದಾವೂದ್ ಬ್ರದರ್ಸ್ ನಡುವೆ ಗಲಾಟೆ ಆಗಿದೆ ಎನ್ನಲಾಗಿದೆ.

ಗಂಗಾಧರ ನಗರದ ನಿವಾಸಿ ಶ್ಯಾಮ್ ಜಾಧವ್ ಮತ್ತು ಆತನ ಸಹಚರರು ಮಂಟೂರ ರಸ್ತೆಯ ಸ್ಮಶಾನಕ್ಕೆ ಶವಸಂಸ್ಕಾರಕ್ಕೆ ಹೋಗಿದ್ದರು. ಈ ವೇಳೆ ಎಮ್.ಡಿ.ದಾವೂದ್ ಸಹೋದರ ಜಿಲಾನಿ ನದಾಫ್ ಎಂಬಾತ ರಸ್ತೆಯಲ್ಲಿ ನಿಂತಿದ್ದ, ಆಗ ಶ್ಯಾಮ್ ಜಾಧವ್ ಸಹಚರರನ್ನು ಗುರಾಯಿಸಿ ನೋಡಿದ್ದಾನೆ ಎನ್ನಲಾಗಿದೆ.

ಇದೇ ಕಾರಣಕ್ಕೆ ಜಾಧವ್‌ ಸಹಚರರು ಪ್ರಶ್ನೆ ಮಾಡಿದ್ದಾರೆ. ಮಾತಿಗೆ ಮಾತು ಬೆಳೆದು ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಎರಡು ಗುಂಪಿನ ವರು ಪರಸ್ಪರ ತಲ್ವಾರ್, ಬಾಟಲಿ, ಹಾಗೂ ಕಬ್ಬಿಣದ ರಾಡ್‌ಗಳಿಂದ ಹೊಡೆದಾಡಿಕೊಂಡಿದ್ದಾರೆ.

ಘಟನೆಯಲ್ಲಿ ಹಲವರಿಗೆ ಗಂಭೀರ ಗಾಯಗಳಾಗಿದ್ದು, ಕಿಮ್ಸ್‌ನಲ್ಲಿ ದಾಖಲು ಮಾಡಲಾಗಿದೆ. ಕಿಮ್‌ಗೆ ಭೇಟಿ ನೀಡಿ ಹಿರಿಯ ಪೊಲೀಸ್ ಅಧಿಕಾರಿಗಳು ಮಾಹಿತಿ ಕಲೆಹಾಕಿದ್ದಾರೆ.

ವಿಷ ಕುಡಿದು ಕುಟುಂಬದ ಮೂವರು ಆತ್ಮಹತ್ಯೆ

ಬೆಳಗಾವಿ: ಇಲ್ಲಿನ ಶಹಾಪುರದ ಜೋಶಿ ಮಾಳ ಪ್ರದೇಶದಲ್ಲಿ ಬುಧವಾರ ಒಂದೇ ಕುಟುಂಬದ ಮೂವರು ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಸ್ಥಳದಲ್ಲಿ ಡೆತ್‌ನೋಟ್ ಪತ್ತೆಯಾಗಿದೆ.

ತನ್ನಿಂದ ಅರ್ಧ ಕೆ.ಜೆ ಚಿನ್ನ ಪಡೆದು ಮರಳಿ ಕೊಡದೇ ಚಿನ್ನದ ವ್ಯಾಪಾರಿ ಮೋಸ ಮಾಡಿದ್ದಾರೆ. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿರು ವುದಾಗಿ ಬರೆದಿದ್ದಾರೆ.

ಮಂಗಳಾ ಕುರಡೇಕರ್ (70 ವರ್ಷ) ಇವರ ಪುತ್ರ ಸಂತೋಷ (44 ವರ್ಷ), ಪುತ್ರಿ ಸುವರ್ಣ (42 ವರ್ಷ) ಮೃತಪಟ್ಟವರು. ಇನ್ನೊಬ್ಬ ಪುತ್ರಿ ಸುನಂದಾ (40 ವರ್ಷ) ಅವರೂ ವಿಷ ಸೇವಿಸಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ.

ಸಂತೋಷ ಅವರು ಚಿನ್ನದ ಚೀಟಿ ವ್ಯವಹಾರ ಮಾಡು ತ್ತಿದ್ದರು. ಅದರಲ್ಲಿ ಉಂಟಾದ ಮೋಸವೇ ಸಾವಿಗೆ ಕಾರಣ ವಾಗಿರಬಹುದು ಎಂದು ಅಂದಾಜಿಸಲಾಗಿದೆ ಎಂದು ಸಳ ಮಹಜರು ಮಾಡಿದ ಶಹಾಪುರ ಠಾಣೆ ಪೊಲೀಸರು ತಿಳಿಸಿದ್ದಾರೆ.

ಬುಧವಾರ ಬೆಳಗ್ಗೆ 9ರ ಸುಮಾರಿಗೆ ವಿಷ ಸೇವಿಸಿದ್ದಾರೆ ಎನ್ನಲಾಗಿದೆ.

ವಿದ್ಯಾರ್ಥಿನಿಯರ ಸಾವು ಪ್ರಕರಣ

ಚಿಕ್ಕಮಗಳೂರು: ಕೊಪ್ಪ ಪಟ್ಟಣದಲ್ಲಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಮೃತಪಟ್ಟ ಇಬ್ಬರು ಬಾಲಕಿಯರ ಸಾವಿನ ಪ್ರಕರಣದ ಕುರಿತು ತನಿಖೆಗೆ ನಿವೃತ್ತ ನ್ಯಾಯಾಧೀಶೆ ಎಸ್. ಶೋಭಾ ಅವರನ್ನು ನೇಮಿಸಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ(ಕ್ರೈಸ್) ಆದೇಶಿಸಿದೆ.

2025ರ ಜೂನ್ 29ರಂದು ವಸತಿ ಶಾಲೆಯ ಸ್ನಾನದ ಮನೆಯಲ್ಲಿ 9ನೇ ತರಗತಿ ವಿದ್ಯಾರ್ಥಿನಿಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ದೊರೆತಿತ್ತು. ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದ ಪೋಷಕರು, ವಿವಿಧ ಸಂಘಟನೆಗಳ ಮುಖಂಡರು ಮತ್ತು ಸ್ಥಳೀಯರು ಕೊಪ್ಪದಲ್ಲಿ ಪ್ರತಿಭಟನೆ ನಡೆಸಿದ್ದರು.

2023ರ ಜುಲೈ 27ರಂದು ಇದೇ ಶಾಲೆಯ 9ನೇ ತರಗತಿಯ ಮತ್ತೊಬ್ಬ ವಿದ್ಯಾರ್ಥಿನಿಯ ಶವ ಕೂಡ ನೇಣು ಬಿಗಿದ ಸ್ಥಿತಿಯಲ್ಲಿ ದೊರೆತಿತ್ತು.

ಎರಡೂ ಪ್ರಕರಣಗಳನ್ನು ತನಿಖೆ ನಡೆಸಲು ಆದೇಶಿಸಲಾಗಿದೆ. ಈ ಪ್ರಕರಣದಲ್ಲಿ ಕರ್ತವ್ಯ ಲೋಪ ಆರೋಪದಲ್ಲಿ ಪ್ರಾಂಶು ಪಾಲೆ ರಜಿನಿ ಮತ್ತು ನಿಲಯ ಪಾಲಕ(ಪ್ರಭಾರ) ಸುಂದರ ನಾಯ್ಕ ಅವರನ್ನು ಅಮಾನತು ಮಾಡಿ ಮತ್ತೊಂದು ಆದೇಶ ವನ್ನು ಕಾಂತರಾಜು ಪಿ.ಸ್. ಹೊರಡಿಸಿದ್ದಾರೆ.

ರಾಜಕೀಯ

ಅಡುಗೆ ಅನಿಲ ಕೊರತೆ; ಸಂಸದರು ಸಂಸತ್ತಿನಲ್ಲಿ ಮಾತನಾಡಿ ಜನರಿಗೆ ನ್ಯಾಯ ಒದಗಿಸಲಿ: ಡಿಸಿಎಂ ಡಿ.ಕೆ. ಶಿವಕುಮಾರ್

ಅಡುಗೆ ಅನಿಲ ಕೊರತೆ; ಸಂಸದರು ಸಂಸತ್ತಿನಲ್ಲಿ ಮಾತನಾಡಿ ಜನರಿಗೆ ನ್ಯಾಯ ಒದಗಿಸಲಿ: ಡಿಸಿಎಂ

"ಬೇರೆ ವಿಚಾರಗಳಲ್ಲಿ ಮಾತನಾಡುವ ಸಂಸದರು ಅಡುಗೆ ಅನಿಲ ಕೊರತೆ ವಿಚಾರವಾಗಿ ಸಂಸತ್ತಿನಲ್ಲಿ ಮಾತನಾಡಬೇಕು. ರಾಜ್ಯಕ್ಕೆ ನ್ಯಾಯ ಒದಗಿಸಿಕೊಡಬೇಕು" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="120157"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ ಪ್ರಮಾದ

ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ

ಮುಂದೆ ಸಾಗುತ್ತಿದ್ದ ಬೈಕ್ ಸವಾರರ ಜೀವ ಉಳಿಸಲು ಮುಂದಾದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ ಬೆಸ್ಕಾಂ ಕೇಂದ್ರಕ್ಕೆ ಡಿಕ್ಕಿ ಹೊಡೆದಿದ್ದು (Accident) ಅದೃಷ್ಟವಶಾತ್ ಸಂಭವಿಸಬಹುದಾಗಿದ್ದ ದೊಡ್ಡ ಪ್ರಮಾಣದ ಅನಾಹುತವೇ ತಪ್ಪಿದೆ.

[ccc_my_favorite_select_button post_id="120119"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!