ರಾಯಚೂರು: ಗುರುವಾರ ಬಂದಿರುವ ಗುರು ಪೂರ್ಣಿಮೆ ಹಿನ್ನೆಲೆಯಲ್ಲಿ ಪ್ರಸಿದ್ಧ ಕ್ಷೇತ್ರವಾದ ಮಂತ್ರಾಲಯಕ್ಕೆ (Mantralaya) ಭಕ್ತ ಸಾಗರವೇ ಹರಿದುಬಂದಿದೆ.
ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಗುರು ಪೂರ್ಣಿಮೆಯನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ.
ಬೆಳಿಗ್ಗೆಯಿಂದಲೇ ಮಠದಲ್ಲಿ ಧಾರ್ಮಿಕ ವಿಧಿ ವಿಧಾನಗಳು ನೆರವೇರಿಸಲಾಗುತ್ತಿದ್ದು, ಮಂತ್ರಾಲಯ ಕ್ಷೇತ್ರದ ಮಠಾಧಿಪತಿಗಳಾದ ಶ್ರೀ ಸುಬುಧೇಂದ್ರ ತೀರ್ಥರು ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ಮೂಲ ಬೃಂದಾವನಕ್ಕೆ ವಿಶೇಷ ಪೂಜೆ ಸಲ್ಲಿಸಿದರು.
ರಾಯರ ದಿನವೆಂದೇ ನಂಬಲಾದ ಗುರು ಪೂರ್ಣಿಮೆ ಗುರುವಾರವೇ ಬಂದ ಕಾರಣ ಬುಧವಾರ ರಾತ್ರಿಯೇ ಭಾರಿ ಸಂಖ್ಯೆಯಲ್ಲಿ ಭಕ್ತರು ಮಂತ್ರಾಲಯಕ್ಕೆ ಬಂದಿದ್ದಾರೆ.
ತುಂಗಭದ್ರೆಯ ನದಿ ತಟದಲ್ಲಿ ಸ್ನಾನ ಮಾಡಿ, ಪೂಜೆ ಸಲ್ಲಿಸುವ ಮೂಲಕ ಗುರುವಾರ ರಾಯರ ದರ್ಶನ ಪಡೆಯುತ್ತಿದ್ದಾರೆ.
ಬಂದಾವನದಿಂದ ಮಠದ ಹೊರಾಂಗಣದ ವರೆಗೂ ಅಪಾರ ಸಂಖ್ಯೆಯಲ್ಲಿ ಭಕ್ತರು ಸರತಿ ಸಾಲಿನಲ್ಲಿ ನಿಂತು ದರ್ಶನ ಪಡೆದು ಭಕ್ತಿ ಸೇವೆ ಸಲ್ಲಿಸುತ್ತಿದ್ದಾರೆ.
ಭಕ್ತರನ್ನು ನಿಯಂತ್ರಿಸಲು ಭದ್ರತಾ ಸಿಬ್ಬಂದಿ ಹರಸಾಹಸ ಪಡುವಂತಾಗಿದೆ.