ದೊಡ್ಡಬಳ್ಳಾಪುರ: ಕಾರ್ಮಿಕ ಸಚಿವ ಸಂತೋಷ್ ಲಾಡ್ (Santosh lad) ಅವರು ಇಂದು (ಜೂ.10) ದೊಡ್ಡಬಳ್ಳಾಪುರಕ್ಕೆ ಭೇಟಿ ನೀಡಲಿದ್ದಾರೆ.
ದೊಡ್ಡಬಳ್ಳಾಪುರ ನಗರದ ಹೊರವಲಯದಲ್ಲಿರುವ ಓಬದೇನಹಳ್ಳಿ ಬಳಿ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿ ವತಿಯಿಂದ ವಲಸೆ ಕಾರ್ಮಿಕರಿಗಾಗಿ ನಿರ್ಮಿಸಿರುವ ವಸತಿ ಸಮುಚ್ಚಯ ಕಟ್ಟಡಗಳ (Transit Accommodation) ಉದ್ಘಾಟನೆಯನ್ನು ಸಚಿವರು ನೆರವೇರಿಸಲಿದ್ದಾರೆ.
ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿವಿಧ ಯೋಜನೆಗಳಡಿ ನೊಂದಾಯಿತರಾದ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಹಾಗೂ ಯೋಜನೆಗಳ ಕುರಿತು ಅರಿವು ಕಾರ್ಯಕ್ರಮದಲ್ಲಿ ಸಚಿವ ಸಂತೋಷ್ ಲಾಡ್ ಭಾಗಿಯಾಗಲಿದ್ದಾರೆ.
ಈ ಹಿನ್ನೆಲೆಯಲ್ಲಿ ಸಂತೋಷ್ ಲಾಡ್ ಅವರಿಗೆ ಕಾಂಗ್ರೆಸ್ ಕಾರ್ಯಕರ್ತರು ಸಿದ್ಧತೆ ನಡೆಸಿದ್ದಾರೆ.
ಯುವ ಕಾಂಗ್ರೆಸ್ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಶರತ್ ಪಟೇಲ್, ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷ ಪುನೀತ್ ಗೌಡ ಮಲ್ಲೋಹಳ್ಳಿ ನೇತೃತ್ವದ ಯುವ ಕಾಂಗ್ರೆಸ್ ಪಡೆ, ಸಂತೋಷ್ ಲಾಡ್ ಅವರಿಗೆ ಅದ್ಧೂರಿಯಾಗಿ ದೊಡ್ಡಬಳ್ಳಾಪುರಕ್ಕೆ ಸ್ವಾಗತ ಕೋರಲು ಸಿದ್ಧತೆ ನಡೆಸಿದೆ.