ದೊಡ್ಡಬಳ್ಳಾಪುರ: ಕರ್ನಾಟಕ ಜಾನಪದ ಪರಿಷತ್, ದೊಡ್ಡಬಳ್ಳಾಪುರ ಗಾಳಿಪಟ ಕಲಾ ಸಂಘದಿಂದ ರಾಜ್ಯ ಮಟ್ಟದ ಗಾಳಿಪಟ ಉತ್ಸವ-2025 (State level kite festival) ಜುಲೈ 13ರಂದು ಬೆಳಗ್ಗೆ 11 ಗಂಟೆಯಿಂದ ದೊಡ್ಡಬಳ್ಳಾಪುರದಲ್ಲಿ ಆಯೋಜಿಲಾಗಿದೆ.
ಭುವನೇಶ್ವರಿನಗರದ ಮುನಿನಂಜಪ್ಪನವರ ಜಮೀನಿನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಕರ್ನಾಟಕ ಜಾನಪದ ಪರಿಷತ್‌ನ ಜಿಲ್ಲಾ ಘಟಕ ಉದ್ಘಾಟಿಸಲಾಗುತ್ತಿದೆ.
ಈ ಕಾರ್ಯಕ್ರಮದಲ್ಲಿ ಕರ್ನಾಟಕದ ವಿವಿಧ ಜಿಲ್ಲೆಗಳ ಅಂತರರಾಷ್ಟ್ರೀಯ ಗಾಳಿಪಟ ಪಟುಗಳು ತಮ್ಮ ವಿವಿಧ ಆಕಾರದ ಗಾಳಿಪಟಗಳ ಹಾರಾಟ ಮತ್ತು ಗಾಳಿಪಟಗಳಲ್ಲಿ ಕಸರತ್ತನ್ನು ತೋರಿಸಲಿದ್ದಾರೆ.
ದೊಡ್ಡಬಳ್ಳಾಪುರ ತಾಲೂಕಿನ ಮಕ್ಕಳಿಗಾಗಿ ಉಚಿತ ಗಾಳಿಪಟ ತಯಾರಿಕೆ ತರಬೇತಿ, ಸಂಜೆ 6.30ಕ್ಕೆ ಎಲ್ ಇಡಿ ಗಾಳಿಪಟಗಳ ಪ್ರದರ್ಶನ ಆಯೋಜಿಸಲಾಗಿದೆ.
ಆದರೆ ಈ ವರ್ಷ ಗಾಳಿಪಟ ಸ್ಪರ್ಧೆ ಇರುವುದಿಲ್ಲ ಎಂದು ಪ್ರಕಟಣೆ ತಿಳಿಸಿದೆ.