ದೊಡ್ಡಬಳ್ಳಾಪುರ: ರಸ್ತೆ ದಾಟುವ ವೇಳೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ವೃದ್ಧನೋರ್ವ ಸಾವನಪ್ಪಿರುವ ಘಟನೆ (Accident) ಡಿಕ್ರಾಸ್ ಬಳಿ ಸಂಭವಿಸಿದೆ.
ಗುರುವಾರ ರಾತ್ರಿ ಡಿಕ್ರಾಸ್ ಪೆಟ್ರೋಲ್ ಬಂಕ್ ಸಮೀಪ ರಸ್ತೆ ದಾಟುವ ವೇಳೆ ಲಾರಿ ಡಿಕ್ಕಿ ಹೊಡೆದಿದ್ದು, ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡ ವೃದ್ಧನನ್ನು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯದಲ್ಲಿ ಸಾವನಪ್ಪಿದ್ದಾರೆ.
ಈ ಕುರಿತಂತೆ ನಗರ ಠಾಣೆ ಇನ್ಸ್ಪೆಕ್ಟರ್ ಅಮರೇಶ್ ಗೌಡ ಅವರು ಮೃತ ವೃದ್ಧನ ಗುರುತು ಪತ್ತೆಗೆ ಮನವಿ ಮಾಡಿದ್ದಾರೆ.
ಈ ಕುರಿತಂತೆ ಪ್ರಕಟಣೆ ನೀಡಿರುವ ಅವರು, ಸುಮಾರು 65 ವರ್ಷದ ಅಪರಿಚಿತ ವೃದ್ಧ ದೊಡ್ಡಬಳ್ಳಾಪುರ ನಗರದ ಡಿ.ಕ್ರಾಸ್ ಬಳಿ ಟ್ರಕ್ ಡಿಕ್ಕಿ ಹೊಡೆದು ಅಪಘಾತವಾಗಿ ವಿಕ್ಟೊರಿಯಾ ಆಸ್ಪತ್ರೆಯಲ್ಲಿ ಮೃತಪಟ್ಟಿರುತ್ತಾರೆ.
ಮೃತರು ಬಿಳಿ ಬಣ್ಣದ ಶರ್ಟ್ ಮೇಲೆ ಹಸಿರು ಬಣ್ಣದ ಗೆರೆ ಇರುತ್ತದೆ. ಪಟಾಪಟಿ ಚಡ್ಡಿ ಧರಿಸಿರುತ್ತಾರೆ.
ಈ ಮೃತ ವ್ಯಕ್ತಿಯ ಬಗ್ಗೆ ಮಾಹಿತಿ ಇದ್ದಲ್ಲಿ ದೊಡ್ಡಬಳ್ಳಾಪುರ ನಗರ ಠಾಣೆಗೆ ತಿಳಿಸಲು ಕೋರಿದೆ. ಮೊಬೈಲ್ ಸಂಖ್ಯೆ 9480802454 ಗೆ ಸಂಪರ್ಕಿಸಲು ಕೋರಿದ್ದಾರೆ.