ದೊಡ್ಡಬಳ್ಳಾಪುರ: ತಾಲೂಕಿನ ಕುಂಟನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ (MPCS)ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆ ಪ್ರಕ್ರಿಯೆಯಲ್ಲಿ ಅಪ್ಪಾಜಿ ಗೌಡ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಕೆಂಪೇಗೌಡ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಇಂದು ಚುನಾವಣೆ ಪ್ರಕ್ರಿಯೆ ನಡೆಸಲಾಯಿತು.
12 ಸದಸ್ಯತ್ವ ಬಲದ ಕುಂಟನಹಳ್ಳಿ ಹಾಲು ಉತ್ಪಾದಕರ ಸಹಾಕರ ಸಂಘದ (MPCS) ಅಧ್ಯಕ್ಷ ಸ್ಥಾನದ ಚುನಾವಣೆಗೆ ಅಪ್ಪಾಜಿ ಗೌಡ ಅವರು ಮಾತ್ರ ನಾಮಪತ್ರ ಸಲ್ಲಿಸಿದ ಕಾರಣ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.
ನೂತನ ಅಧ್ಯಕ್ಷ ಅಪ್ಪಾಜಿ ಗೌಡ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಬಿ.ಮುನೇಗೌಡ, ತಾಲೂಕು ಅಧ್ಯಕ್ಷ ಲಕ್ಷ್ಮೀಪತಯ್ಯ, ರಾಜ್ಯ ಕಾರ್ಯದರ್ಶಿಗಳಾದ ಡಾ.ವಿಜಯ್ ಕುಮಾರ್, ಹುಸ್ಕೂರು ಆನಂದ್, ಹಿರಿಯ ಮುಖಂಡ ಹರೀಶ್ ಗೌಡ, ವಕ್ತಾರ ಕುಂಟನಹಳ್ಳಿ ಮಂಜುನಾಥ್ ಶುಭಕೋರಿದ್ದಾರೆ.