ಬೀಡ್; ನಡೆಯುತ್ತಿರುವ ರಸ್ತೆ ದುರಸ್ತಿ ಕಾಮಗಾರಿ ಪರಿಶೀಲಿಸಲು ಒಬ್ಬ ಎಂಜಿನಿಯರ್ ತನ್ನ ಇಡೀ ತಂಡದೊಂದಿಗೆ ಬಂದಿದ್ದಾಗ, ಬೀಡ್‌ನ ವಡ್ವಾನಿ ತಾಲೂಕಿನ ಬಳಿಯ ಖಡ್ಕಿ ಗ್ರಾಮದ ಮೂಲಕ ಹಾದುಹೋಗುತ್ತಿದ್ದ ಟ್ರಕ್ ಇದ್ದಕ್ಕಿದ್ದಂತೆ ರಸ್ತೆ ಕುಸಿತದಿಂದಾಗಿ ಪಲ್ಟಿಯಾಗಿದೆ (Overturned).
ಏಕಾಏಕಿ ಸಂಭವಿಸಿದ ಈ ಘಟನೆಯಿಂದಾಗಿ ಸ್ಥಳದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದ್ದು, ಇದು ಹಾನಿಗೊಳಗಾದ ರಸ್ತೆಯ ಅಪಾಯಕಾರಿ ಸ್ಥಿತಿಯನ್ನು ಎತ್ತಿ ತೋರಿಸಿದೆ ಮತ್ತು ಆ ಪ್ರದೇಶದಲ್ಲಿನ ಸುರಕ್ಷತೆ ಮತ್ತು ಮೂಲಸೌಕರ್ಯದ ಬಗ್ಗೆ ಗಂಭೀರ ಕಳವಳವನ್ನು ಹುಟ್ಟುಹಾಕಿದೆ.
ಈ ಘಟನೆಯನ್ನು ವಿಡಿಯೋದಲ್ಲಿ ಸೆರೆಹಿಡಿಯಲಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ವೈರಲ, ಆಗಿ ಅಲ್ಲಿನ ರಾಜ್ಯ ಸರ್ಕಾರದ ಭ್ರಷ್ಟಾಚಾರಕ್ಕೆ ಸಾಕ್ಷಿ ಎಂದು ನೆಟ್ಟಿಗರು ಲೇವಡಿ ಮಾಡುತ್ತಿದ್ದಾರೆ.
In Beed, Maharashtra, A team of engineer arrived to inspect a road.
— Mahua Moitra Fans (@MahuaMoitraFans) July 10, 2025
During the inspection, a truck overturned giving the live demo of CORRUPTION. pic.twitter.com/nylZVsALhw
ಘಟನೆಯಲ್ಲಿ ರಕ್ಷಸಿಕೊಳ್ಳಲು ಅಲ್ಲಿದ್ದ ಎಂಜಿನಿಯರ್ ಹಾಗೂ ಅಧಿಕಾರಿಗಳು ಓಡುತ್ತಿರುವುದನ್ನು ಮತ್ತು ಕೆಲವರು ಟ್ರಕ್ ಅಡಿಯಲ್ಲಿ ಸಿಲುಕಿಕೊಳ್ಳುವುದನ್ನು ತಪ್ಪಿಸಲು ಸೇತುವೆ ನಿರ್ಮಾಣಕ್ಕಾಗಿ ಅಗೆದ ಗುಂಡಿಗೆ ಹಾರುತ್ತಿರುವುದನ್ನು ಕಾಣಬಹುದಾಗಿದೆ.
ವಡ್ವಾನಿ ತಾಲೂಕಿನ ಖಡ್ಕಿಯಲ್ಲಿ ರಸ್ತೆ ನವೀಕರಣ ಕಾರ್ಯ ನಡೆಯುತ್ತಿದ್ದಾಗ ಈ ಘಟನೆ ನಡೆದಿದೆ.
ರಸ್ತೆಯ ಅಪಾಯಕಾರಿ ಸ್ಥಿತಿಯ ಬಗ್ಗೆ ಸ್ಥಳೀಯ ವಿದ್ಯಾರ್ಥಿಗಳು ನೀಡಿದ ದೂರುಗಳ ಹಿನ್ನೆಲೆಯಲ್ಲಿ ಪರಿಶೀಲನೆಗೆ ಬಂದ ಎಂಜಿನಿಯರ್ ಸ್ಥಳದಲ್ಲೇ ಇದ್ದರು.
ಸೇತುವೆ ಕಾಮಗಾರಿಯಿಂದಾಗಿ ಅಸ್ತಿತ್ವದಲ್ಲಿರುವ ರಸ್ತೆ ನಿರುಪಯುಕ್ತವಾಗಿದ್ದು, ಪರ್ಯಾಯ ಮಾರ್ಗ ನಿರ್ಮಾಣಕ್ಕೆ ಒತ್ತಾಯಿಸಿ ವಿದ್ಯಾರ್ಥಿಗಳು ಈ ಹಿಂದೆ ಮುಖ್ಯಮಂತ್ರಿಗಳ ಗ್ರಾಮ ಸಡಕ್ ಇಲಾಖೆಗೆ ನೇರವಾಗಿ ಸಮಸ್ಯೆ ಕುರಿತು ದೂರು ನೀಡಿದ್ದರು.
ಈ ಕಳವಳಗಳಿಗೆ ಸ್ಪಂದಿಸಿದ ಎಂಜಿನಿಯರ್, ಪ್ರದೇಶವನ್ನು ವೈಯಕ್ತಿಕವಾಗಿ ಪರಿಶೀಲಿಸುವುದಾಗಿ ಮತ್ತು ಜವಾಬ್ದಾರಿಯುತ ಗುತ್ತಿಗೆದಾರರಿಗೆ ತಿಳಿಸುವುದಾಗಿ ಭರವಸೆ ನೀಡಿದ್ದರು.
ಬುಧವಾರ ಅವರು ಪರಿಶೀಲನೆ ನಡೆಸುತ್ತಿದ್ದಾಗ ಈ ಕುಸಿತ ಸಂಭವಿಸಿದೆ. ರಸ್ತೆಯ ಕಳಪೆ ಸ್ಥಿತಿಯಿಂದಾಗಿ ಟ್ರಕ್ ನಿಯಂತ್ರಣ ಕಳೆದುಕೊಂಡು ಪಲ್ಟಿ ಹೊಡೆದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಅದೃಷ್ಟವಶಾತ್, ಘಟನೆಯಲ್ಲಿ ಯಾವುದೇ ಸಾವುನೋವುಗಳು ಸಂಭವಿಸಿಲ್ಲ ಎಂದು ವರದಿಯಾಗಿದೆ.