ಬೆಂ.ಗ್ರಾ.ಜಿಲ್ಲೆ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಡಿ ಪಾಲಕರ ಪೋಷಣೆ ಹಾಗೂ ಹಿರಿಯ ನಾಗರಿಕರ ರಕ್ಷಣಾ ಕಾಯ್ದೆ-2007 ರಡಿ ಜಿಲ್ಲೆಯ ನಾಲ್ಕು ತಾಲ್ಲೂಕಿನಲ್ಲಿ ಸ್ವಯಂ ಸೇವಾ ಸಂಸ್ಥೆಗಳ ಮೂಲಕ ನಡೆಸುತ್ತಿರುವ ವೃದ್ದಾಶ್ರಮಗಳನ್ನು (Old age homes) ನೋಂದಣಿ ಮಾಡಿಸಲು ಸೂಚಿಸಲಾಗಿದೆ.
ನೋಂದಣಿ ಮಾಡಿರದ ಸ್ವಯಂ ಸೇವಾ ಸಂಸ್ಥೆಗಳ ಮೂಲಕ ನಡೆಸುತ್ತಿರುವ ವೃದ್ದಾಶ್ರಮಗಳನ್ನು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಡಿ ಪಾಲಕರ ಪೋಷಣೆ ಹಾಗೂ ಹಿರಿಯ ನಾಗರಿಕರ ರಕ್ಷಣಾ ಕಾಯ್ದೆ-2007 ರಡಿ ಸೇವಾಸಿಂಧು ಮೂಲಕ ಅರ್ಜಿ ಸಲ್ಲಿಸಿ ಕಡ್ಡಾಯವಾಗಿ ನೋಂದಾಯಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಯವರ ಕಛೇರಿ,ನಂ.3 ನೆಲಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ, ದೇವನಹಳ್ಳಿ ತಾಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ-562110 ಹಾಗೂ ವಿಕಲಚೇತನರ ಸಹಾಯವಾಣಿ ಕೇಂದ್ರದ ದೂ ಸಂಖ್ಯೆ: 080-29787441 ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಸತೀಶ್ ಪಾಣಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.