PM to meet soon regarding defence corridor in Bengaluru rural district: M.B. Patil

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಡಿಫೆನ್ಸ್ ಕಾರಿಡಾರ್ ಸಂಬಂಧ ಸದ್ಯದಲ್ಲೇ ಪ್ರಧಾನಿ ಭೇಟಿ: ಎಂ.ಬಿ. ಪಾಟೀಲ

ಬೆಂಗಳೂರು: ಉತ್ತರ ಕರ್ನಾಟಕದ ಹುಬ್ಬಳ್ಳಿ, ಧಾರವಾಡ-ಬೆಳಗಾವಿ-ವಿಜಯಪುರ ಮತ್ತು ದಕ್ಷಿಣ ಕರ್ನಾಟಕದ ಬೆಂಗಳೂರು ಗ್ರಾಮಾಂತರ-ಕೋಲಾರ-ಚಿಕ್ಕಬಳ್ಳಾಪುರಕ್ಕೆ ಡಿಫೆನ್ಸ್ ಕಾರಿಡಾರ್ ಮಂಜೂರು ಮಾಡುವ ನಮ್ಮ ಮನವಿಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ (M.B. Patila) ಹೇಳಿದ್ದಾರೆ.

ಈ ಸಂಬಂಧ ಆದಷ್ಟು ಬೇಗ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನೂ ಭೇಟಿ ಮಾಡಲಾಗುವುದು. ಅದಾದ ಮೇಲೆ ಈ ವಿಚಾರವು ಕೇಂದ್ರ ಸಂಪುಟದ ಮುಂದೆ ಬರಬೇಕಾಗುತ್ತದೆ ಎಂದು ಹೇಳಿದ್ದಾರೆ.

ಶುಕ್ರವಾರ ತಮ್ಮ ನಿವಾಸದಲ್ಲಿ ತಮ್ಮನ್ನು ಭೇಟಿಯಾದ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, `ಇಸ್ರೇಲ್-ಇರಾನ್, ರಷ್ಯಾ-ಉಕ್ರೇನ್ ಸಂಘರ್ಷ ಮತ್ತು ಜಾಗತಿಕ ರಾಜಕೀಯ ಪರಿಸ್ಥಿತಿಯಲ್ಲಿನ ಬದಲಾವಣೆಗಳಿಂದಾಗಿ ಮುಂದಿನ 20 ವರ್ಷಗಳ ಕಾಲ ರಕ್ಷಣಾ ಉದ್ಯಮ, ಏರೋಸ್ಪೇಸ್, ಸೆಮಿಕಂಡಕ್ಟರ್, ಎಐ ಮುಂತಾದ ಡೀಪ್-ಟೆಕ್ ಆಧಾರಿತ ಉದ್ಯಮಗಳಿಗೆ ಬೇಡಿಕೆ ಇರಲಿದೆ.

ನ್ವಿಡಿಯಾ ಕಂಪನಿ ಈ ವಲಯದಲ್ಲಿ 4 ಟ್ರಿಲಿಯನ್ ಡಾಲರ್ ವಹಿವಾಟು ದಾಖಲಿಸಿರುವ ಪ್ರಪ್ರಥಮ ಕಂಪನಿಯಾಗಿ ಹೊರಹೊಮ್ಮಿದೆ. ಇದನ್ನು ನಾವು ಸದವಕಾಶವಾಗಿ ಬಳಸಿಕೊಳ್ಳಲು ಕರ್ನಾಟಕವನ್ನು ಸಜ್ಜುಗೊಳಿಸಬೇಕಾದ ಜರೂರಿದೆ’ ಎಂದಿದ್ದಾರೆ.

ದೇವನಹಳ್ಳಿ ಸಮೀಪ ಹೈಟೆಕ್ ಡಿಫೆನ್ಸ್ ಮತ್ತು ಏರೋಸ್ಪೇಸ್ ಪಾರ್ಕ್ ಸ್ಥಾಪನೆಗೆ ಭೂಮಿ ಬೇಕಾಗಿದೆ. ಆದರೆ ರೈತರು ಭೂಸ್ವಾಧೀನಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೇ 15ರಂದು ಸಭೆ ಕರೆದಿದ್ದಾರೆ. ಸರಕಾರವೇನಾದರೂ ಭೂಸ್ವಾಧೀನ ಮಾಡಿಕೊಂಡರೆ ರೈತರಿಗೆ ಸರಿಯಾದ ಪರಿಹಾರ ಕೊಡಬೇಕೆನ್ನುವುದು ನಮ್ಮ ಕಳಕಳಿಯಾಗಿದೆ. ಏಕೆಂದರೆ, ರೈತರು ಕೂಡ ನಮ್ಮವರೇ ಆಗಿದ್ದಾರೆ ಎಂದು ಅವರು ನುಡಿದಿದ್ದಾರೆ.

ಬೆಂಗಳೂರಿನಲ್ಲಿ ಎರಡನೆಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿದಂತೆ ನಾಗರಿಕ ವಿಮಾನಯಾನ ಸಚಿವರನ್ನು ಮುಂದಿನ ವಾರ ದೆಹಲಿಗೆ ಹೋಗಿ ಭೇಟಿಯಾಗಿ, ಮಾತುಕತೆ ನಡೆಸಲಾಗುವುದು. ನೋಯಿಡಾ, ನವೀ ಮುಂಬೈ ನೂತನ ವಿಮಾನ ನಿಲ್ದಾಣಗಳ ಅಭಿವೃದ್ಧಿಯನ್ನು ವಿಸ್ತೃತವಾಗಿ ಗಮನಿಸಿ, ಈ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಚಿವರು ಹೇಳಿದ್ದಾರೆ.

ಸಿಎಂ ಕುರ್ಚಿ, ಕೆಪಿಸಿಸಿ ಅಧ್ಯಕ್ಷರ ಕುರ್ಚಿ ಖಾಲಿ ಇಲ್ಲ

ಸದ್ಯಕ್ಕೆ ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆಯಾಗಲಿ, ಕೆಪಿಸಿಸಿ ಅಧ್ಯಕ್ಷರ ಹುದ್ದೆಯಾಗಲಿ ಖಾಲಿ ಇಲ್ಲ. ಆದ್ದರಿಂದ ಈ ಬಗ್ಗೆ ಯಾರೂ ಮಾತನಾಡಬೇಕಾದ ಅಗತ್ಯವಿಲ್ಲ. ಕಾಂಗ್ರೆಸ್ಸಿನಲ್ಲಿ ಹೈಕಮಾಂಡೇ ಪರಮೋಚ್ಚ. ಅದು ಹೇಳುವ ಮಾತೇ ಅಂತಿಮ. ನಮ್ಮಲ್ಲಿ ಯಾವುದೇ ಗೊಂದಲವಿಲ್ಲ ಎಂದು ಪಾಟೀಲ ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ.

ರಾಜಕೀಯ

ಸಿಎಂ ಸ್ಥಾನದ ವಿಚಾರ ನಮಗೇ ಗಾಬರಿಯಿಲ್ಲ ನಿಮಗ್ಯಾಕೆ: ಖಾಸಗಿ ಸುದ್ದಿವಾಹಿನಿಗಳಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಟಕ್ಕರ್

ಸಿಎಂ ಸ್ಥಾನದ ವಿಚಾರ ನಮಗೇ ಗಾಬರಿಯಿಲ್ಲ ನಿಮಗ್ಯಾಕೆ: ಖಾಸಗಿ ಸುದ್ದಿವಾಹಿನಿಗಳಿಗೆ ಡಿಸಿಎಂ ಡಿ.ಕೆ.

ಈ ಹಿಂದೆ ನನ್ನ ಬಳಿ ಆಯ್ಕೆ ಇಲ್ಲ ಎಂದು ಹೇಳಿದ್ದಿರಿ, ಈಗಲೂ ನೀವು ಅದೇ ಸ್ಥಿತಿಯಲ್ಲಿದ್ದೀರಾ ಎಂದು ಕೇಳಿದಾಗ, “ನಿಮಗೆ ನಮ್ಮ ವಿಚಾರದಲ್ಲಿ ಯಾಕೆ ಗಾಬರಿ? ಈ ವಿಚಾರದಲ್ಲಿ ನಮಗೆ ಗಾಬರಿಯಿಲ್ಲ”: ಡಿಸಿಎಂ ಡಿ.ಕೆ.

[ccc_my_favorite_select_button post_id="110952"]
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಡಿಫೆನ್ಸ್ ಕಾರಿಡಾರ್ ಸಂಬಂಧ ಸದ್ಯದಲ್ಲೇ ಪ್ರಧಾನಿ ಭೇಟಿ: ಎಂ.ಬಿ. ಪಾಟೀಲ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಡಿಫೆನ್ಸ್ ಕಾರಿಡಾರ್ ಸಂಬಂಧ ಸದ್ಯದಲ್ಲೇ ಪ್ರಧಾನಿ ಭೇಟಿ: ಎಂ.ಬಿ.

ಬೆಂಗಳೂರು ಗ್ರಾಮಾಂತರ-ಕೋಲಾರ-ಚಿಕ್ಕಬಳ್ಳಾಪುರಕ್ಕೆ ಡಿಫೆನ್ಸ್ ಕಾರಿಡಾರ್ ಮಂಜೂರು ಮಾಡುವ ನಮ್ಮ ಮನವಿಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ: ಎಂ.ಬಿ. ಪಾಟೀಲ (M.B. Patila)

[ccc_my_favorite_select_button post_id="110949"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: ಲಾರಿ ಡಿಕ್ಕಿ ಪ್ರಕರಣ.. ಮೃತ ವೃದ್ಧನ ಗುರುತು ಪತ್ತೆ..!

ದೊಡ್ಡಬಳ್ಳಾಪುರ: ಲಾರಿ ಡಿಕ್ಕಿ ಪ್ರಕರಣ.. ಮೃತ ವೃದ್ಧನ ಗುರುತು ಪತ್ತೆ..!

ರಸ್ತೆ ದಾಟುವ ವೇಳೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ವೃದ್ಧನೋರ್ವ ಸಾವನಪ್ಪಿರುವ ಘಟನೆ (Accident) ಡಿಕ್ರಾಸ್ ಬಳಿ ಸಂಭವಿಸಿದೆ.

[ccc_my_favorite_select_button post_id="110927"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!