ದೊಡ್ಡಬಳ್ಳಾಪುರ: ನಿಂತಿದ್ದ ಲಾರಿಗೆ ಹಿಂದಿನ ಡಿಕ್ಕಿ ಹೊಡೆದ ಪರಿಣಾಮ ಬೊಲೆರೋ ಪಿಕಪ್ ವಾಹನ ಚಾಲಕ ಸಾವನಪ್ಪಿರುವ ಘಟನೆ (Accident) ತಪ್ಪಸಿಹಳ್ಳಿ ಗೇಟ್ ಬಳಿ ಇಂದು (ಜುಲೈ.12) ಮುಂಜಾನೆ 3 ಗಂಟೆ ವೇಳೆಗೆ ಸಂಭವಿಸಿದೆ.
ಮೃತನನ್ನು ಚಿತ್ತೂರು ಮೂಲದ ಮಣಿಕಂಠ (31 ವರ್ಷ) ಎಂದು ಗುರುತಿಸಲಾಗಿದೆ.
ದೊಡ್ಡಬಳ್ಳಾಪುರ ಮಾರ್ಗವಾಗಿ ಗೌರಿಬಿದನೂರು ಕಡೆಗೆ ರಾಜ್ಯ ಹೆದ್ದಾರಿಯಲ್ಲಿ ತೆರಳುವ ವೇಳೆ ತಪಸೀಹಳ್ಳಿ ಗೇಟ್ ಬಳಿ, ಚಾಲಕನ ನಿಯಂತ್ರಣ ತಪ್ಪಿ ನಿಂದಿದ್ದ ಲಾರಿಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ.
ಘಟನೆಯಲ್ಲಿ ಬೊಲೆರೋ ಪಿಕಪ್ ವಾಹನದ ಚಾಲಕ ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯದಲ್ಲಿ ಸಾವನಪ್ಪಿದ್ದಾರೆ.
ಈ ಕುರಿತಂತೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.