ಬೆಂಗಳೂರು: ಗಾಳಿ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ (Gaali Anjaneya Temple) ಅವ್ಯವಹಾರ ನಡೆದಿರುವ ಹಿನ್ನೆಲೆಯಲ್ಲಿ ದೇವಸ್ಥಾನವನ್ನು ಮುಜರಾಯಿ ಇಲಾಖೆ ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಾಳಿ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಅವ್ಯವಹಾರ ನಡೆದಿರುವ ಹಿನ್ನೆಲೆಯಲ್ಲಿ ದೇವಸ್ಥಾನವನ್ನು ಮುಜರಾಯಿ ಇಲಾಖೆ ವಶಕ್ಕೆ ತೆಗೆದುಕೊಳ್ಳಲಾಗಿದೆ. ಐದು ವರ್ಷಗಳ ನಂತರ ದೇವಸ್ಥಾನ ಆಡಳಿತ ಮಂಡಳಿ ಸುಪರ್ದಿಗೆ ಕೊಡಲಾಗುವುದು, ಈ ವಿಚಾರವಾಗಿ ನ್ಯಾಯಾಲಯಕ್ಕೆ ಹೋಗುವವರು ಹೋಗಬಹುದು ಎಂದಿದ್ದಾರೆ.
ಮೈಸೂರು ರಸ್ತೆಯ ಐತಿಹಾಸಿಕ ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನದ ಹುಂಡಿ ಹಣ ಎಣಿಸುವಾಗ ಅಕ್ರಮ ನಡೆದಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿದೆ ಎನ್ನಲಾಗಿದೆ.
ಅಲ್ಲದೆ ದೇವಸ್ಥಾನದಲ್ಲಿ ಆಡಳಿತ ನಿರ್ವಹಣೆ ಸರಿಯಿಲ್ಲ ಎಂಬ ಆರೋಪಗಳು ಕೇಳಿಬಂದಿದ್ದವು. ಇದನ್ನು ಗಂಭೀರವಾಗಿ ಪರಿಗಣಿಸಿದ ಸರ್ಕಾರ ಮುಜರಾಯಿ ಇಲಾಖೆಯಿಂದ ವರದಿ ನೀಡುವಂತೆ ಸೂಚಿಸಿತ್ತು.
ಇಲಾಖೆ ನೀಡಿದ ಇದೀಗ ವರದಿ ಆಧಾರದಲ್ಲಿ ಸರ್ಕಾರ ದೇವಸ್ಥಾನವನ್ನು ಮುಜರಾಯಿ ಇಲಾಖೆ ವಶಕ್ಕೆ ನೀಡಿದೆ ಎಂದರು.