Shivakumar is an honest party worker, not a personality who shows off the strength of MLAs: D.K. Suresh

ಶಿವಕುಮಾರ್ ಪಕ್ಷದ ಪ್ರಾಮಾಣಿಕ ಕಾರ್ಯಕರ್ತ, ಶಾಸಕರ ಬಲಾಬಲ ಪ್ರದರ್ಶಿಸುವ ವ್ಯಕ್ತಿತ್ವ ಅವರದಲ್ಲ: ಡಿ.ಕೆ. ಸುರೇಶ್

ಬೆಂಗಳೂರು: “ಕೆಪಿಸಿಸಿ ಅಧ್ಯಕ್ಷರು ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಆತುರದಲ್ಲೂ ಇಲ್ಲ, ಆತಂಕದಲ್ಲೂ ಇಲ್ಲ” ಎಂದು ಬಮೂಲ್ ಅಧ್ಯಕ್ಷರಾದ ಡಿ.ಕೆ. ಸರೇಶ್ (D.K. Suresh) ಅವರು ಸ್ಪಷ್ಟಪಡಿಸಿದರು.

ಸದಾಶಿವನಗರ ನಿವಾಸದಲ್ಲಿ ಶನಿವಾರ ಮಾಧ್ಯಮಗಳ ಪ್ರಶ್ನೆಗಳಿಗೆ ಸುರೇಶ್ ಅವರು ಪ್ರತಿಕ್ರಿಯೆ ನೀಡಿದರು.

ನಾಯಕತ್ವ ಬದಲಾವಣೆ ಬಗ್ಗೆ ಮಾತನಾಡಬಾರದು ಎಂದು ಹೈಕಮಾಂಡ್ ನಿರ್ದೇಶನವಿದ್ದರೂ ಸಿಎಂ ಮೂರು ಬಾರಿ ನಾನೇ 5 ವರ್ಷ ಸಿಎಂ ಎಂದು ಹೇಳಿರುವ ಬಗ್ಗೆ ಕೇಳಿದಾಗ, “ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಜಗಳವಿಲ್ಲ. ಕಾಂಗ್ರೆಸ್ ಪಕ್ಷದ ವರಿಷ್ಠರು, ಮುಖ್ಯಮಂತ್ರಿಗಳು, ಅಧ್ಯಕ್ಷರು ಹಾಗೂ ಡಿಸಿಎಂ ಆಗಿರುವ ಡಿ.ಕೆ. ಶಿವಕುಮಾರ್ ಅವರು ಕೂಡ ಈಗಾಗಲೇ ಈ ವಿಚಾರವಾಗಿ ಸ್ಪಷ್ಟನೆ ನೀಡಿದ್ದು, ಸಿದ್ದರಾಮಯ್ಯ ಅವರು ನಾಯಕತ್ವದಲ್ಲಿ ಮುಂದುವರಿಯಲಿದ್ದಾರೆ ಎಂದು ಹೇಳಿದ್ದಾರೆ. ಆದರೂ ಮಾಧ್ಯಮಗಳಿಗೆ ಯಾಕೆ ಗೊಂದಲವಿದೆ ಎಂದು ಗೊತ್ತಿಲ್ಲ. ಶಿವಕುಮಾರ್ ಅವರು ಪಕ್ಷ ಕೊಟ್ಟಿರುವ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ಪಕ್ಷದ ಕಾರ್ಯಕರ್ತನಾಗಿ ಮುನ್ನಡೆಸುತ್ತಿದ್ದಾರೆ. ಪಕ್ಷದ ಸೂಚನೆಯಂತೆ ಅವರು ಕೆಲಸ ಮಾಡುತ್ತಿದ್ದಾರೆ. ಇದರ ಹೊರತಾಗಿ ಹೆಚ್ಚಿನ ವಿಚಾರ ಏನೂ ಇಲ್ಲ. ಸಧ್ಯಕ್ಕೆ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ. ಪದೇ ಪದೆ ಈ ವಿಚಾರ ಯಾಕೆ ಚರ್ಚೆಯಾಗುತ್ತಿದೆ ಗೊತ್ತಿಲ್ಲ” ಎಂದರು.

ಇದೇ ನನ್ನ ಕೊನೆ ಚುನಾವಣೆ ಎಂದಿದ್ದ ಸಿದ್ದರಾಮಯ್ಯ ಅವರು ಈಗ 2028ಕ್ಕೂ ನನ್ನದೇ ನೇತೃತ್ವದಲ್ಲಿ ಚುನಾವಣೆ ಎಂದು ಹೇಳಿರುವ ಬಗ್ಗೆ ಕೇಳಿದಾಗ, “ಸಿದ್ದರಾಮಯ್ಯ ಅವರು ಹಿರಿಯ ನಾಯಕರು. ರಾಜಕೀಯದಲ್ಲಿ ನಿವೃತ್ತಿ ಇಲ್ಲ. ರಾಜಕೀಯ ಇಚ್ಛಾಶಕ್ತಿ ಇರಬೇಕು. ಮುಖ್ಯಮಂತ್ರಿಗಳಿಗೆ ಇಚ್ಛಾಶಕ್ತಿ ಇದೆ. ಹೀಗಾಗಿ ಅವರು ಕೆಲವು ವಿಚಾರವನ್ನು ನಿಮ್ಮ ಜೊತೆ ಹಂಚಿಕೊಂಡಿರಬಹುದು” ಎಂದು ತಿಳಿಸಿದರು.

ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ ಎಂದಮೇಲೆ ಸಿಎಂ ಪದೇ ಪದೆ ನಾನೇ ಸಿಎಂ ಎಂದು ಹೇಳುವ ಅಗತ್ಯವಿದೆ ಎಂದು ಕೇಳಿದಾಗ, “ಈ ವಿಚಾರವಾಗಿ ಮಾತನಾಡಲು ನಾನು ಬಹಳ ಸಣ್ಣವನು” ಎಂದರು.

ಶಿವಕುಮಾರ್ ಪಕ್ಷದ ಪ್ರಾಮಾಣಿಕ ಕಾರ್ಯಕರ್ತ

ಡಿ.ಕೆ. ಶಿವಕುಮಾರ್ ಅವರಿಗೆ ಹೆಚ್ಚಿನ ಶಾಸಕರ ಬೆಂಬಲ ಇಲ್ಲ ಎಂಬ ಹೇಳಿಕೆ ಬಗ್ಗೆ ಕೇಳಿದಾಗ, “ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿದ್ದಾರೆ. ಶಾಸಕರ ಬೆಂಬಲ ಕೇಳುವ ಸಮಯವಲ್ಲ. ಸಿದ್ದರಾಮಯ್ಯ ಅವರು 2 ವರ್ಷಗಳಿಂದ ಮುಖ್ಯಮಂತ್ರಿ ಹುದ್ದೆಯನ್ನು ವಹಿಸಿಕೊಂಡು ಕೆಲಸ ಮಾಡುತ್ತಿದ್ದಾರೆ. ಅವರು ಮುಂದುವರಿಯುತ್ತಿರುವಾಗ ಈ ವಿಚಾರ ಚರ್ಚೆಯಾಗುತ್ತಿರುವ ಬಗ್ಗೆ ನಮಗೆ ಗೊತ್ತಿಲ್ಲ. ನೀವು ಈ ವಿಚಾರ ಚರ್ಚೆ ಮಾಡುತ್ತಿರುವವರನ್ನೇ ಕೇಳಿ. ಶಿವಕುಮಾರ್ ಅವರದ್ದು ಬಲಾಬಲ ಪ್ರದರ್ಶನ ಮಾಡುವ ವ್ಯಕ್ತಿತ್ವವಿಲ್ಲ. ಶಿವಕುಮಾರ್ ಅವರು ಕಾಂಗ್ರೆಸ್ ಪಕ್ಷದ ಪ್ರಾಮಾಣಿಕ ಕಾರ್ಯಕರ್ತ. ಕಾಂಗ್ರೆಸ್ ವರಿಷ್ಠರಿಗೆ ಗೌರವ ನೀಡುವ ವ್ಯಕ್ತಿತ್ವ ಹೊಂದಿರುವವರು. ಅವರು ಬೇರೆಯವರಿಗೆ ಮಾರ್ಗದರ್ಶಕರಾಗಿ ಕೆಲಸ ಮಾಡುತ್ತಿದ್ದಾರೆ” ಎಂದರು.

ಡಿ.ಕೆ. ಶಿವಕುಮಾರ್ ಅವರು ನಂಬುವ ಗುರುಗಳೇ ಈ ಅವಧಿಯಲ್ಲಿ ಅವರು ಸಿಎಂ ಆಗುತ್ತಾರೆ ಎಂದು ಹೇಳಿದ್ದಾರೆ ಎಂದು ಕೇಳಿದಾಗ, “ನನಗೆ ಈ ವಿಚಾರ ಗೊತ್ತಿಲ್ಲ. ಪ್ರತಿಯೊಬ್ಬರಿಗೂ ಒಬ್ಬೊಬ್ಬರು ಸಿಎಂ ಆಗಲಿ ಎಂದು ಆಸೆ ಪಡುತ್ತಾರೆ. ಪ್ರತಿ ಜಿಲ್ಲೆ, ಸಮುದಾಯದವರು ನಮ್ಮವರು ಸಿಎಂ ಆಗಲಿ ಎಂದು ಆಶಯ ವ್ಯಕ್ತಪಡಿಸುವುದು ಸಹಜ. ಇದು ಇಂದು ನಡೆದಿರುವ ವಿಚಾರವಲ್ಲ. ಪ್ರತಿ ಅವಧಿಯಲ್ಲೂ ಇಂತಹ ಬೆಳವಣಿಗೆ ನಡೆದುಕೊಂಡು ಬಂದಿದೆ. ಇಂತಹ ಅಭಿಪ್ರಾಯವನ್ನು ತಪ್ಪು ಎಂದು ಹೇಳಲು ಆಗುವುದಿಲ್ಲ” ಎಂದರು.

ಎರಡು ಬಾರಿ ಇಡಿ ವಿಚಾರಣೆ ಎದುರಿಸಿದ್ದೀರಿ ಅವರ ಉದ್ದೇಶವೇನು ಎಂದು ತಿಳಿಯಿತೇ ಎಂದು ಕೇಳಿದಾಗ, “ನನಗೆ ಕಾರಣ ಗೊತ್ತಿಲ್ಲ. ಆದರೆ ನನಗೆ ಕೇಳಿದ ಪ್ರಶ್ನೆಗಳಿಗೆ ಉತ್ತರ ನೀಡಿದ್ದೇನೆ. ಮತ್ತೆ ವಿಚಾರಣೆಗೆ ಕರೆದಾಗ ಬರಬೇಕು ಎಂದು ತಿಳಿಸಿದ್ದಾರೆ. ಜವಾಬ್ದಾರಿಯುತ ಪ್ರಜೆಯಾಗಿ ವಿಚಾರಣೆಗೆ ಸಹಕಾರ ನೀಡಲು ಸಿದ್ಧನಿದ್ದೇನೆ” ಎಂದು ತಿಳಿಸಿದರು.

ತಾವೇ ಹಾಕಿಕೊಂಡ ಲಕ್ಷ್ಮಣ ರೇಖೆ ಹೇಗೆ ದಾಟುತ್ತಾರೆ?

75 ವರ್ಷಕ್ಕೆ ನಿವೃತ್ತಿ ಪಡೆಯಬೇಕು ಎಂದು ಆರ್ ಎಸ್ಎಸ್ ಮುಖಂಡ ಮೋಹನ್ ಭಾಗವತ್ ಹೇಳಿಕೆ ಬಗ್ಗೆ ಕೇಳಿದಾಗ, “ರಾಜಕಾರಣದಲ್ಲಿ ನಿವೃತ್ತಿ ಇಲ್ಲ ಎಂದು ನಾನು ಹೇಳಿದ್ದೇನೆ. ರಾಜಕೀಯ ಇಚ್ಛಾಶಕ್ತಿ ಜೊತೆಗೆ ಅವರವರು ಹಾಕಿಕೊಂಡಿರುವ ಲಕ್ಷ್ಮಣ ರೇಖೆಗಳನ್ನು ದಾಟುವುದು ಹೇಗೆ ಎಂಬುದು ಮುಖ್ಯ. ಯಾವಾಗಲೂ ಇನ್ನೊಬ್ಬರಿಗೆ ಮಾರ್ಗದರ್ಶಕರಾಗಿ ಮಾದರಿಯಾಗಿರಬೇಕು. ಈ ರೀತಿ ದಿಟ್ಟ ಹೆಜ್ಜೆ ಇಟ್ಟಾಗ ಅವರ ಹೆಸರು ಶಾಶ್ವತವಾಗಿ ಉಳಿಯುತ್ತದೆ” ಎಂದು ತಿಳಿಸಿದರು.

ರಾಜಕೀಯ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ಶಾಸಕರೇ ರಾಜ್ಯ ಸರ್ಕಾರದ ವಿರುದ್ದ ತಿರುಗಿ ಬಿದ್ದಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110970"]
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಡಿಫೆನ್ಸ್ ಕಾರಿಡಾರ್ ಸಂಬಂಧ ಸದ್ಯದಲ್ಲೇ ಪ್ರಧಾನಿ ಭೇಟಿ: ಎಂ.ಬಿ. ಪಾಟೀಲ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಡಿಫೆನ್ಸ್ ಕಾರಿಡಾರ್ ಸಂಬಂಧ ಸದ್ಯದಲ್ಲೇ ಪ್ರಧಾನಿ ಭೇಟಿ: ಎಂ.ಬಿ.

ಬೆಂಗಳೂರು ಗ್ರಾಮಾಂತರ-ಕೋಲಾರ-ಚಿಕ್ಕಬಳ್ಳಾಪುರಕ್ಕೆ ಡಿಫೆನ್ಸ್ ಕಾರಿಡಾರ್ ಮಂಜೂರು ಮಾಡುವ ನಮ್ಮ ಮನವಿಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ: ಎಂ.ಬಿ. ಪಾಟೀಲ (M.B. Patila)

[ccc_my_favorite_select_button post_id="110949"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: ಲಾರಿ ಡಿಕ್ಕಿ ಪ್ರಕರಣ.. ಮೃತ ವೃದ್ಧನ ಗುರುತು ಪತ್ತೆ..!

ದೊಡ್ಡಬಳ್ಳಾಪುರ: ಲಾರಿ ಡಿಕ್ಕಿ ಪ್ರಕರಣ.. ಮೃತ ವೃದ್ಧನ ಗುರುತು ಪತ್ತೆ..!

ರಸ್ತೆ ದಾಟುವ ವೇಳೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ವೃದ್ಧನೋರ್ವ ಸಾವನಪ್ಪಿರುವ ಘಟನೆ (Accident) ಡಿಕ್ರಾಸ್ ಬಳಿ ಸಂಭವಿಸಿದೆ.

[ccc_my_favorite_select_button post_id="110927"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!