ದೊಡ್ಡಬಳ್ಳಾಪುರ: ನಗರದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಧಾರ್ಮಿಕ ಆಚರಣೆ ಹಿನ್ನೆಲೆಯಲ್ಲಿ ಸಂಚಾರ ಅಡಚಣೆ ಉಂಟಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಪೊಲೀಸ್ ವರಿಷ್ಠಾಧಿಕಾರಿ(SP) ಕಚೇರಿಯಿಂದ ಸಂಚಾರ ಸಲಹೆ (TrafficAdvisory) ನೀಡಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರ ಸಾಮಾಜಿಕ ಜಾಲತಾಣದ ಅಧಿಕೃತ ಪುಟದಲ್ಲಿ ಈ ಕುರಿತಂತೆ ಸಂದೇಶ ನೀಡಲಾಗಿದೆ.
ದೊಡ್ಡಬಳ್ಳಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಕೋಟೆ ಮಸೀದಿ ಆವರಣದಲ್ಲಿ ರಾಬ್ಜಿ ಹಬ್ಬದ ನಿಮಿತ್ತ ಪೂಜಾ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ವಿವಿಧ ನಗರಗಳಿಂದ ಸಾವಿರಾರು ಜನರು ಭಾಗವಹಿಸಲಿದ್ದಾರೆ.
ಈ ಹಿನ್ನೆಲೆಯಲ್ಲಿ ದೊಡ್ಡಬಳ್ಳಾಪುರ ನಗರಕ್ಕೆ ಪ್ರವೇಶ ಪಡೆಯುವ ರಸ್ತೆಗಳಲ್ಲಿ ವಾಹನ ದಟ್ಟಣೆಯಿಂದಾಗಿ ನಿಧಾನ ಗತಿಯ ಸಂಚಾರ ಉಂಟಾಗುವ ಸಂಭವವಿರುತ್ತದೆ. ಆದ್ದರಿಂದ ಸಾರ್ವಜನಿಕರು ಈ ಸಂಚಾರ ಅಡಚಣೆಗೆ ಸಹಕರಿಸಿ ಎಂದು ಮನವಿ ಮಾಡಲಾಗಿದೆ.