ದೊಡ್ಡಬಳ್ಳಾಪುರ: ಚಾಲಕನ ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾಗಿರುವ ಘಟನೆ (Accident) ತಾಲೂಕಿನ ತಪಸೀಹಳ್ಳಿ ಬಳಿ ಸಂಭವಿಸಿದೆ.
ಗೌರಿಬಿದನೂರು ಮೂಲಕ ದೊಡ್ಡಬಳ್ಳಾಪುರಕ್ಕೆ ಬರುವ ವೇಳೆ ರಾಜ್ಯ ಹೆದ್ದಾರಿ ಯಲಹಂಕ-ಹಿಂದೂಪುರ ನಡುವಿನ ತಪಸೀಹಳ್ಳಿ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಗೆ ತೆರಳಿ ಪಲ್ಟಿಯಾಗಿದೆ.
ಕಾರಿನಲ್ಲಿ ಸುಮಾರು 5 ಮಂದಿ ಪ್ರಯಾಣಿಸುತ್ತಿದ್ದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದು, ಅದೃಷ್ಟವಶಾತ್ ಯಾರಿಗೂ ಪ್ರಾಣಾಪಾಯ ಉಂಟಾಗಿಲ್ಲ ಎಂದು ತಿಳಿದು ಬಂದಿದೆ.
ಕಾರು ಪಲ್ಟಿಯಾದ ಕೂಡಲೇ ಇತರೆ ವಾಹನ ಸವಾರರು ಸ್ಥಳಕ್ಕೆ ದೌಡಾಯಿಸಿ ಕಾರಿನಲ್ಲಿದ್ದವರನ್ನು ರಕ್ಷಿಸಿದ್ದಾರೆ.
ಕಾರು ನುಗ್ಗಿದ ಸ್ಥಳದ ಸಮೀಪದಲ್ಲಿಯೇ ಮರವೊಂದು ಇದ್ದು, ಅಕಸ್ಮಾತ್ ಕಾರು ಮರಕ್ಕೆ ನುಗ್ಗಿದ ವೇಗದಲ್ಲಿ ಡಿಕ್ಕಿ ಹೊಡೆದಿದ್ದರೆ ದೊಡ್ಡಮಟ್ಟದ ಪ್ರಮಾಣದ ಅಪಾಯ ಸಂಭವಿಸುವ ಸಾಧ್ಯತೆ ಇತ್ತು. ಆದರೆ ಅದೃಷ್ಟವಶಾತ್ ಪಾರಾಗಿದೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.