`Basava Culture Campaign' across the state from September 1st

ಗುಡ್ಮಾರ್ನಿಂಗ್ ನ್ಯೂಸ್: ಸೆ.1ರಿಂದ ರಾಜ್ಯಾದ್ಯಂತ `ಬಸವ ಸಂಸ್ಕೃತಿ ಅಭಿಯಾನ’

ಬೆಂಗಳೂರು: ರಾಜ್ಯ ಸರಕಾರವು ಬಸವಣ್ಣನನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ’ ಎಂದು ಘೋಷಿಸಿ ಒಂದು ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಲಿಂಗಾಯತ ಮಠಾಧಿಪತಿಗಳ ಒಕ್ಕೂಟವು ಸೆಪ್ಟೆಂಬರ್ 1ರಿಂದ ಅಕ್ಟೋಬರ್ 1ರವರೆಗೆ ಒಂದು ತಿಂಗಳು ರಾಜ್ಯದ ಪ್ರತಿಯೊಂದು ಜಿಲ್ಲೆಯಲ್ಲೂಬಸವ ಸಂಸ್ಕೃತಿ ಅಭಿಯಾನ’ (Basava Culture Campaign) ನಡೆಸಲು ತೀರ್ಮಾನಿಸಿದೆ.

ಈ ಸಂಬಂಧವಾಗಿ ಒಕ್ಕೂಟದಲ್ಲಿರುವ ಸ್ವಾಮೀಜಿಗಳು ಶನಿವಾರ ಲಿಂಗಾಯತ ಮುಖಂಡ ಮತ್ತು ಸಚಿವ ಎಂ ಬಿ ಪಾಟೀಲ ಅವರೊಂದಿಗೆ ಅವರ ಸದಾಶಿವನಗರದ ಮನೆಯಲ್ಲಿ ಚರ್ಚೆ ನಡೆಸಿದ್ದಾರೆ. ಒಕ್ಕೂಟದ ಪರವಾಗಿ ಭಾಲ್ಕಿ ಮಠದ ಶ್ರೀ ಬಸವಲಿಂಗ ಪಟ್ಟದ್ದೇವರು, ಅಥಣಿಯ ಶ್ರೀ ಚೆನ್ನಬಸವ ಸ್ವಾಮೀಜಿ, ನೆಲಮಂಗಲದ ಪವಾಡ ಶ್ರೀಮಠದ ಶ್ರೀ ಸಿದ್ಧಲಿಂಗ ಸ್ವಾಮೀಜಿ, ಗೊರವಣ್ಣ ದೇವರ ಮಠದ ನಂಜುಂಡ ಸ್ವಾಮೀಜಿ, ನಿಜಗುಣ ಮಠದ ಇಮ್ಮಡಿ ನಿಜಗುಣ ಶ್ರೀಗಳು, ಬಸವ ಧರ್ಮಪೀಠದ ಬಸವಯೋಗಿ ಸ್ವಾಮೀಜಿ, ಚನ್ನಪಟ್ಟಣದ ಬೇಗೂರು ಮಠದ ಮೃತ್ಯುಂಜಯ ಸ್ವಾಮೀಜಿ ಸಚಿವರ ಸದಾಶಿವನಗರದ ನಿವಾಸಕ್ಕೆ ಆಗಮಿಸಿದ್ದರು.

ಬಳಿಕ ಮಾತನಾಡಿದ ಸಚಿವರು, ಈ ಅಭಿಯಾನವು ಬಸವಣ್ಣನ ಜನ್ಮಸ್ಥಳವಾದ ಬಸವನ ಬಾಗೇವಾಡಿಯಲ್ಲಿ ಸೆ.1ರಂದು ಚಾಲನೆ ಕಾಣಲಿದೆ. ಬಸವರಥವು ಎಲ್ಲ ಜಿಲ್ಲೆಗಳಲ್ಲೂ ಸಂಚರಿಸಿ ಅ.1ರಂದು ಬೆಂಗಳೂರನ್ನು ತಲುಪಲಿದೆ. ಅ.5ರಂದು ಲಕ್ಷಾಂತರ ಲಿಂಗಾಯತ ಅನುಯಾಯಿಗಳನ್ನು ಸೇರಿಸಿ, ಬೆಂಗಳೂರಿನಲ್ಲಿ ಬೃಹತ್ ಸಮಾರೋಪ ಸಮಾರಂಭ ಏರ್ಪಡಿಸಲಾಗುವುದು. ಇಲ್ಲಿ ಬಸವಣ್ಣನನ್ನು ಸಾಂಸ್ಕೃತಿಕ ನಾಯಕನೆಂದು ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸನ್ಮಾನಿಸಲಾಗುವುದು. ಆದರೆ ಸಮಾರೋಪದ ಸ್ಥಳವಿನ್ನೂ ನಿಗದಿಯಾಗಿಲ್ಲ. ಮುಖ್ಯಮಂತ್ರಿಗಳ ಕಾಲಾವಕಾಶ ನೋಡಿಕೊಂಡು ಇದನ್ನು ನಿರ್ಧರಿಸಲಾಗುವುದು ಎಂದಿದ್ದಾರೆ.

ಅಭಿಯಾನದಲ್ಲಿ ಪ್ರತಿದಿನವೂ ಕಾಲೇಜು ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರ ಜತೆ ಸಂವಾದ, ಸಂಜೆ ಪಾದಯಾತ್ರೆ, ವಚನ ಸಂಗೀತ, ಸ್ವಾಮೀಜಿಗಳು ಮತ್ತು ಆಹ್ವಾನಿತ ಉಪನ್ಯಾಸಕರ ಭಾಷಣ, ರಾತ್ರಿ ಹೊತ್ತು ಶ್ರೀ ಪಂಡಿತಾರಾಧ್ಯ ಶಿವಾಚಾರ್ಯರು ಬರೆದಿರುವ `ಜಂಗಮದೆಡೆಗೆ’ ನಾಟಕ ಪ್ರದರ್ಶನ ನಡೆಯಲಿವೆ. ಇದಕ್ಕೆ ಜಾಗತಿಕ ಲಿಂಗಾಯತ ಮಹಾಸಭಾ, ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು, ರಾಷ್ಟ್ರೀಯ ಬಸವದಳ, ಬಸವ ಸಮಿತಿ, ಬಸವ ಕೇಂದ್ರ, ಕದಳಿ ಮಹಿಳಾ ವೇದಿಕೆ ಮುಂತಾದ ಬಸವಪರ ಸಂಘಟನೆಗಳು ಕೈಜೋಡಿಸಿವೆ ಎಂದು ಒಕ್ಕೂಟದ ಅಧ್ಯಕ್ಷರಾಗಿರುವ ಶ್ರೀ ಬಸವಲಿಂಗ ಪಟ್ಟದ್ದೇವರು ತಿಳಿಸಿದ್ದಾರೆ.

ಸಮ ಸಮಾಜ ನಿರ್ಮಾಣ, ವ್ಯಸನಮುಕ್ತ ಸಮಾಜ, ಅಂಧಶ್ರದ್ಧೆ ಅಳಿಸಿ ಹಾಕುವುದು, ಸದೃಢ ಸಮಾಜ, ಮಕ್ಕಳಲ್ಲಿ ಅಧ್ಯಾತ್ಮದ ಅರಿವು, ಮಹಿಳೆಯರ ಘನತೆ ಮತ್ತು ವ್ಯಕ್ತಿತ್ವ ವಿಕಸನಗಳು ಅಭಿಯಾನದ ಪ್ರಮುಖ ಆಶಯಗಳಾಗಿವೆ ಎಂದು ಒಕ್ಕೂಟವು ತಿಳಿಸಿದೆ.

ರಾಜಕೀಯ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ಶಾಸಕರೇ ರಾಜ್ಯ ಸರ್ಕಾರದ ವಿರುದ್ದ ತಿರುಗಿ ಬಿದ್ದಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110970"]
ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆ ಲೂಟಿ ಮಾಡುವ ಉದ್ದೇಶವನ್ನು ಹೊಂದಿದೆ. ಇದು ಹಣ ಕೊಳ್ಳೆ ಹೊಡೆಯುವ ಸ್ಕೀಮ್‌: ಆರ್‌.ಅಶೋಕ (R. Ashoka)

[ccc_my_favorite_select_button post_id="111019"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: ಲಾರಿಗೆ ಡಿಕ್ಕಿ.. ಬೊಲೆರೋ.. ವಾಹನ ಚಾಲಕ ಸಾವು..!

ದೊಡ್ಡಬಳ್ಳಾಪುರ: ಲಾರಿಗೆ ಡಿಕ್ಕಿ.. ಬೊಲೆರೋ.. ವಾಹನ ಚಾಲಕ ಸಾವು..!

ನಿಂತಿದ್ದ ಲಾರಿಗೆ ಹಿಂದಿನ ಡಿಕ್ಕಿ ಹೊಡೆದ ಪರಿಣಾಮ ಬೊಲೆರೋ ಪಿಕಪ್ ವಾಹನ ಚಾಲಕ ಸಾವನಪ್ಪಿರುವ ಘಟನೆ (Accident)

[ccc_my_favorite_select_button post_id="111021"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!