ಬೆಂ.ಗ್ರಾ.ಜಿಲ್ಲೆ: ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ 2025-26 ನೇ ಸಾಲಿಗೆ ನೇಕಾರ ಸಮ್ಮಾನ್ ಯೋಜನೆಯಡಿ ಕೈಮಗ್ಗ ಮತ್ತು ವಿದ್ಯುತ್ ಮಗ್ಗ ನೇಕಾರರಿಗೆ (Weavers) ವಾರ್ಷಿಕ ರೂ.5000/- ಗಳ ಆರ್ಥಿಕ ನೆರವನ್ನು ನೀಡಲಾಗುತ್ತಿದೆ ಅದಕ್ಕಾಗಿ ಅರ್ಹ ನೇಕಾರರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಕೈಮಗ್ಗ ಮತ್ತು ವಿದ್ಯುತ್ ಮಗ್ಗ ಹಾಗೂ ಮಗ್ಗ ಪೂರ್ವ ಘಟಕಗಳ ಮಾಲೀಕರು/ ನೇಕಾರರು/ ಕಾರ್ಮಿಕರುಗಳು ಉಪ ನಿರ್ದೇಶಕರ ಕಛೇರಿ, ಗಾರ್ಮೆಂಟ್ಸ್ ತರಬೇತಿ ಕೇಂದ್ರದ ಕಟ್ಟಡ. ಕೆಐಎಡಿಬಿ ಅಪೇರಲ್ ಪಾರ್ಕ್. ದೊಡ್ಡಬಳ್ಳಾಪುರ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಈ ಕಛೇರಿಯಿಂದ ಅರ್ಜಿಯನ್ನು ಪಡೆದು ದಾಖಲಾತಿಗಳೊಂದಿಗೆ ಜುಲೈ 25 ರೊಳಗೆ ಕಛೇರಿ ವಿಳಾಸಕ್ಕೆ ಸಲ್ಲಿಸಬೇಕು.
ಈಗಾಗಲೇ 2024-25 ನೇ ಸಾಲಿನಲ್ಲಿ ಅರ್ಜಿಗಳನ್ನು ಸಲ್ಲಿಸಿದ್ದ ಜಿಲ್ಲೆಯ ಕೈಮಗ್ಗ ಮತ್ತು ವಿದ್ಯುತ್ ಮಗ್ಗ ಹಾಗೂ ಮಗ್ಗ ಪೂರ್ವ ಘಟಕಗಳ ಮಾಲಿಕರು/ ನೇಕಾರರು/ ಕಾರ್ಮಿಕರು ಮತ್ತೊಮ್ಮೆ ಅರ್ಜಿಗಳನ್ನು ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ ಎಂದು ಕೈಮಗ್ಗ ಮತ್ತು ಜವಳಿ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.