ಬೆಂ.ಗ್ರಾಂ.ಜಿಲ್ಲೆ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪ್ರವಾಸೋದ್ಯಮ ಇಲಾಖೆ ಬೆಂಗಳೂರು, ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಮೈಸೂರು ಇವರುಗಳ ಸಹಯೋಗದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕಿನ ರಾಜಘಟ್ಟ (Rajagatta) ಗ್ರಾಮ ಬೂದಿಗುಂಡಿಯಲ್ಲಿ ಬೌದ್ಧನೆಲೆಯ (Buddhist site) ಕುರಿತಾದ ಉತ್ಖನನ ಚಾಲನೆ ಕಾರ್ಯಕ್ರಮವನ್ನು ಜುಲೈ 16ರಂದು ಬೆಳಿಗ್ಗೆ 11 ಗಂಟೆಗೆ ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮವನ್ನು ಕಾನೂನು ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯಹಾರಗಳು ಮತ್ತು ಪ್ರವಾಸೋದ್ಯಮ ಸಚಿವರಾದ ಡಾ.ಎಚ್.ಕೆ ಪಾಟೀಲ್ ಅವರು ಉದ್ಘಾಟನೆ ಮಾಡಲಿದ್ದಾರೆ.

ಕಾರ್ಯಕ್ರಮದಲ್ಲಿ ‘ಕರ್ನಾಟಕದಲ್ಲಿ ಬೌದ್ಧಕಲೆ ಮತ್ತು ಸಂಸ್ಕೃತಿ’ ಎಂಬ ಪುಸ್ತಕವನ್ನು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಬಿಡುಗಡೆ ಮಾಡಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ದೊಡ್ಡಬಳ್ಳಾಪುರ ತಾಲ್ಲೂಕಿನ ವಿಧಾನಸಭಾ ಕ್ಷೇತ್ರದ ಶಾಸಕ ಧೀರಜ್ ಮುನಿರಾಜು ಅವರು ವಹಿಸಲಿದ್ದಾರೆ.
5ನೇ ಹಣಕಾಸು ಆಯೋಗದ ಅಧ್ಯಕ್ಷರಾದ ಸಿ.ನಾರಾಯಣಸ್ವಾಮಿ, ಕರ್ನಾಟಕ ವಿದುನ್ಮಾನ ಅಭಿವೃದ್ಧಿ ನಿಗಮ ನಿಯಮಿತ ಹಾಗೂ ಹೊಸಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ಶರತ್ ಕುಮಾರ್ ಬಚ್ಚೇಗೌಡ ಅವರು ಕಾರ್ಯಕ್ರಮದಲ್ಲಿ ಘನ ಉಪಸ್ಥಿತರಿರುತ್ತಾರೆ.
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸದಸ್ಯರು ಡಾ.ಕೆ ಸುಧಾಕರ್, ವಿಧಾನ ಪರಿಷತ್ತಿನ ಶಾಸಕರಾದ ಎಸ್.ರವಿ, ಪುಟ್ಟಣ್ಣ, ರಾಮೋಜಿ ಗೌಡ, ಎನ್.ನಾಗರಾಜ್, ನೆಲಮಂಗಲ ವಿಧಾನಸಭಾ ಕ್ಷೇತ್ರದ ಶಾಸಕ ಎನ್.ಶ್ರೀನಿವಾಸ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರು ಬಿ.ರಾಜಣ್ಣ, ತಾಲ್ಲೂಕು ಯೋಜನಾ ಪ್ರಾಧಿಕಾರದ ಅಧ್ಯಕ್ಷರು ಚುಂಚೆಗೌಡ, ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರು ವಿಶ್ವನಾಥ್ ರೆಡ್ಡಿ, ರಾ ಗ್ರಾಮ ಪಂಚಾಯತಿಯ ಅಧ್ಯಕ್ಷರಾದ ಮುನಿರಾಜು ಆರ್.ಗುಂಡ್ಲಪ್ಪ, ಆರ್ಥಿಕ ಇಲಾಖೆ (ಆಯವ್ಯಯ ಮತ್ತು ಸಂಪನ್ಮೂಲ) ಆಡಳಿತಾಧಿಕಾರಿ, ಜಿಲ್ಲಾ ಪಂಚಾಯತ್ ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಪಿ.ಸಿ ಜಾಫರ್, ಪ್ರವಾಸೋದ್ಯಮ ಇಲಾಖೆಯ ಕಾರ್ಯದರ್ಶಿ ಸಲ್ಮಾ ಕೆ.ಫಾಹಿಮ್, ಪ್ರವಾಸೋದ್ಯಮ ಇಲಾಖೆಯ ಆಯುಕ್ತರು ಕೆ.ವಿ ರಾಜೇಂದ್ರ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ ಬಸವರಾಜು, ಮೈಸೂರು ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕರು ಎಂ.ಎಸ್ ಕೃಷ್ಣಮೂರ್ತಿ, ಮೈಸೂರಿನ ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯ ಆಯುಕ್ತರು ದೇವರಾಜು ಎ, ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯ ನಿರ್ದೇಶಕರು (ಪುರಾತತ್ವ) ಡಾ.ಆರ್ ಶೇಜೇಶ್ವರ್, ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯ ನಿರ್ದೇಶಕರು (ವಸ್ತು ಸಂಗ್ರಹಾಲಯ) ಡಾ.ಸ್ಮಿತಾ ರೆಡ್ಡಿ ಇವರು ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗಹಿಸಲಿದ್ದಾರೆ.
ಮಹಾಬೋಧಿ ಸೊಸೈಟಿಯ ಪ್ರಧಾನ ಕಾರ್ಯದರ್ಶಿ ಆನಂದ ಬಂತೇಜಿ, ರಾಜ್ಯಸಭಾ ಸದಸ್ಯರು ಡಾ.ಎಲ್ ಹನುಮಂತಯ್ಯ, ಹಿರಿಯ ಸಾಹಿತಿಗಳು ನಾಡೋಜ ಪ್ರೊ.ಹಂಪನಾ, ರಾಜಾಘಟ್ಟ ಉತ್ಖನನ ಭೂಮಾಲೀಕರು ಕೃಷ್ಣಪ್ಪ ಎನ್.ಅಂಜಿನಪ್ಪ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ.
ಜಿಲ್ಲೆಯ ಎಲ್ಲಾ ಚುನಾಯಿತ ಪ್ರತಿನಿಧಿಗಳು ನಾಮನಿರ್ದೇಶಿತ ಸದಸ್ಯರು ಹಾಗೂ ಗ್ರಾಮ ಪಂಚಾಯತಿಯ ಎಲ್ಲಾ ಸದಸ್ಯರು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.