Shakti scheme provides free travel to women in the state

ರಾಜ್ಯದ ಮಹಿಳೆಯರಿಗೆ ಉಚಿತಪ್ರಯಾಣ ಕಲ್ಪಿಸಿದ ಶಕ್ತಿ ಯೋಜನೆ: 500ನೇ ಕೋಟಿ ಮಹಿಳೆಗೆ ಸಾಂಕೇತಿಕವಾಗಿ ಟಿಕೆಟ್ ವಿತರಿಸಿದ ಸಿಎಂ, ಡಿಸಿಎಂ

ಬೆಂಗಳೂರು: ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆಯಡಿ(Shakti scheme) 500ನೇ ಕೋಟಿಯ ಮಹಿಳಾ ಪ್ರಯಾಣಿಕರ ಪ್ರಯಾಣ ಸಂಭ್ರಮದ ಅಂಗವಾಗಿ ಸಾಂಕೇತಿಕವಾಗಿ 500ನೇ ಕೋಟಿಯ ಟಿಕೆಟನ್ನು ಇಂದು ವಿತರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

Guarantee scheme
ಎನ್ ವಿಶ್ವನಾಥ್

ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು ಘೋಷಿಸಲಾಗಿತ್ತು. 2023ರ ಮೇ 20 ರಂದು ಸರ್ಕಾರ ಅಸ್ತಿತ್ವಕ್ಕೆ ಬಂದ ತಕ್ಷಣ ಜಾರಿಗೊಳಿಸಲು ಸಚಿವಸಂಪುಟದಲ್ಲಿ ಕೈಗೊಂಡ ತೀರ್ಮಾನದಂತೆ ಜೂನ್ 11 ರಂದು ಶಕ್ತಿ ಯೋಜನೆಗೆ ಚಾಲನೆ ನೀಡಲಾಯಿತು. ಅಂದಿನಿಂದ ರಾಜ್ಯದ ಮಹಿಳೆಯರಿಗೆ ಸರ್ಕಾರಿ ಬಸ್ಸುಗಳಲ್ಲಿ ಉಚಿತ ಪ್ರಯಾಣದ ಸೌಲಭ್ಯವನ್ನು ಕಲ್ಪಿಸಲಾಗಿರುವ ಬಗ್ಗೆ ಮುಖ್ಯಮಂತ್ರಿ ವಿವರಿಸಿದರು.

ಸಿಗಂದೂರು ಕಾರ್ಯಕ್ರಮ-ಶಿಷ್ಠಾಚಾರ ಪಾಲನೆಯಾಗಿಲ್ಲ

ಸಿಗಂದೂರು ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡುವ ಕಾರ್ಯಕ್ರಮದ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸುತ್ತಾ, ಸಾಗರ ತಾಲ್ಲೂಕಿನಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮವನ್ನು ಮುಂದೂಡುವಂತೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ದೂರವಾಣಿ ಮೂಲಕ ಮಾತನಾಡಿ ಪತ್ರವನ್ನೂ ಬರೆಯಲಾಗಿತ್ತು.

ಕೇಂದ್ರ ಸಚಿವರೂ ಕಾರ್ಯಕ್ರಮ ಮುಂದೂಡಲು ಸಮ್ಮತಿಸಿದ್ದರೂ, ಕೂಡ ಇಲ್ಲಿನ ಸ್ಥಳೀಯ ಬಿಜೆಪಿ ನಾಯಕರ ಒತ್ತಡಕ್ಕೆ ಮಣಿದು, ನನ್ನ ಗಮನಕ್ಕೆ ತಾರದೇ, ಕಾರ್ಯಕ್ರಮವನ್ನು ಇಂದೇ ಆಯೋಜಿಸಿದ್ದಾರೆ.

ನನಗೆ ಪೂರ್ವನಿಯೋಜಿತ ಕಾರ್ಯಕ್ರಮಗಳಂತೆ ವಿಜಯಪುರ ಜಿಲ್ಲೆಗೆ ತೆರಳಬೇಕಾಗಿರುವುದರಿಂದ, ಸಾಗರ ತಾಲ್ಲೂಕಿನ ಕಾರ್ಯಕ್ರಮಕ್ಕೆ ಹೋಗಲು ಸಾಧ್ಯವಾಗುತ್ತಿಲ್ಲ ಎಂದರು.

ಬಿಜೆಪಿಯ ಈ ನಡೆಯನ್ನು ಪ್ರತಿಭಟಿಸಲು ಸಂಬಂಧಪಟ್ಟ ಸಾಗರ ತಾಲ್ಲೂಕಿನ ಇಂದಿನ ಕಾರ್ಯಕ್ರಮವನ್ನು ಸರ್ಕಾರದ ಯಾವುದೇ ಸಚಿವರು, ಸ್ಥಳೀಯ ಶಾಸಕರು ಭಾಗವಹಿಸುತ್ತಿಲ್ಲ. ನಮ್ಮ ನಡುವೆ ತಿಕ್ಕಾಟವನ್ನು ಪ್ರಾರಂಭಿಸಿರುವುದು ಕೇಂದ್ರ ಸರ್ಕಾರವೇ. ಇಲ್ಲಿ ಶಿಷ್ಠಾಚಾರದ ಪಾಲನೆಯಾಗಿಲ್ಲ.

ಕೇಂದ್ರ ಪುರಸ್ಕೃತ ಯೋಜನೆಗಳಲ್ಲಿ ರಾಜ್ಯ ಸರ್ಕಾರದ ಪಾಲೂ ಇರುತ್ತದೆ. ಅಂತಹ ಸಂದರ್ಭದಲ್ಲಿ ರಾಜ್ಯ ಸರ್ಕಾರ ಎಲ್ಲ ಶಿಷ್ಠಾಚಾರಗಳನ್ನೂ ತಪ್ಪದೇ ಪಾಲಿಸುತ್ತದೆ. ಇಂದಿನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳಿಗಾಗಲಿ, ಸಂಬಂಧಪಟ್ಟ ಇಲಾಖಾ ಸಚಿವರನ್ನಾಗಲೀ, ಸ್ಥಳೀಯ ಶಾಸಕರನ್ನಾಗಲೀ ಆಮಂತ್ರಣ ನೀಡಲಾಗಿಲ್ಲ ಎಂದರು.

ಕನ್ನಡದ ಮೇರುನಟಿ ಬಿ.ಸರೋಜಾದೇವಿ ನಿಧನ: ಮುಖ್ಯಮಂತ್ರಿಗಳ ಸಂತಾಪ

ಭಾರತೀಯ ಚಿತ್ರರಂಗದ ಖ್ಯಾತ ಚಿತ್ರನಟಿ ಬಿ.ಸರೋಜಾದೇವಿ ಅವರ ನಿಧನದ ಬಗ್ಗೆ ಸಂತಾಪ ಸೂಚಿಸುತ್ತಾ ಮಾತನಾಡಿದ ಮುಖ್ಯಮಂತ್ರಿಗಳು, ಬಿ.ಸರೋಜಾದೇವಿಯವರು ಕನ್ನಡ ನಾಡು ಕಂಡ ಪ್ರತಿಭಾವಂತ ಕಲಾವಿದರಾಗಿದ್ದರು.

ಬಹುಭಾಷಾ ನಟಿಯಾಗಿದ್ದ ಅವರು ಅಪ್ರತಿಮ ಕಲಾವಿದರಾಗಿದ್ದು, ಅವರ ಸಾವಿನಿಂದ ಇಡೀ ಕಲಾಜಗತ್ತು ಬಡವಾಗಿದೆ.

ಸರೋಜಾದೇವಿಯವರ ಆತ್ಮಕ್ಕೆ ಶಾಂತಿ ದೊರೆಯಲಿ ಹಾಗೂ ಅವರ ಕುಟುಂಬವರ್ಗ ಹಾಗೂ ಅಭಿಮಾನಿ ಬಳಗಕ್ಕೆ ದು:ಖವನ್ನು ಭರಿಸುವ ಶಕ್ತಿ ತುಂಬಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುವುದಾಗಿ ತಿಳಿಸಿದರು.

ರಾಜಕೀಯ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ಶಾಸಕರೇ ರಾಜ್ಯ ಸರ್ಕಾರದ ವಿರುದ್ದ ತಿರುಗಿ ಬಿದ್ದಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110970"]
ರಾಜ್ಯದ ಮಹಿಳೆಯರಿಗೆ ಉಚಿತಪ್ರಯಾಣ ಕಲ್ಪಿಸಿದ ಶಕ್ತಿ ಯೋಜನೆ: 500ನೇ ಕೋಟಿ ಮಹಿಳೆಗೆ ಸಾಂಕೇತಿಕವಾಗಿ ಟಿಕೆಟ್ ವಿತರಿಸಿದ ಸಿಎಂ, ಡಿಸಿಎಂ

ರಾಜ್ಯದ ಮಹಿಳೆಯರಿಗೆ ಉಚಿತಪ್ರಯಾಣ ಕಲ್ಪಿಸಿದ ಶಕ್ತಿ ಯೋಜನೆ: 500ನೇ ಕೋಟಿ ಮಹಿಳೆಗೆ ಸಾಂಕೇತಿಕವಾಗಿ

ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆಯಡಿ(Shakti scheme) 500ನೇ ಕೋಟಿಯ ಮಹಿಳಾ ಪ್ರಯಾಣಿಕರ ಪ್ರಯಾಣ ಸಂಭ್ರಮದ ಅಂಗವಾಗಿ ಸಾಂಕೇತಿಕವಾಗಿ 500ನೇ ಕೋಟಿಯ ಟಿಕೆಟನ್ನು ಇಂದು ವಿತರಿಸಲಾಗಿದೆ.

[ccc_my_favorite_select_button post_id="111076"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: ನಿಯಂತ್ರಣ ತಪ್ಪಿದ ಕಾರು ಪಲ್ಟಿ..!

ದೊಡ್ಡಬಳ್ಳಾಪುರ: ನಿಯಂತ್ರಣ ತಪ್ಪಿದ ಕಾರು ಪಲ್ಟಿ..!

ಚಾಲಕನ ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾಗಿರುವ ಘಟನೆ (Accident) ತಾಲೂಕಿನ ತಪಸೀಹಳ್ಳಿ ಬಳಿ ಸಂಭವಿಸಿದೆ.

[ccc_my_favorite_select_button post_id="111050"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!