ದೊಡ್ಡಬಳ್ಳಾಪುರ: ಸರಳ, ಸಜ್ಜನ ಅಧಿಕಾರಿಯೆಂದು ಹೆಸರು ಪಡೆದಿದ್ದ ದೊಡ್ಡಬಳ್ಳಾಪುರ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ (EO) ಮುನಿರಾಜು ಅವರನ್ನು ಅಚ್ಚರಿಯ ಬೆಳವಣಿಗೆಯಲ್ಲಿ ಶನಿವಾರ ದಿಢೀರ್ ವರ್ಗಾವಣೆ ಮಾಡಲಾಗಿದೆ.

ಜುಲೈ 11ರಂದು ನೂತನ ಕಾರ್ಯನಿರ್ವಾಹಕ ಅಧಿಕಾರಿ (EO) ಅವರನ್ನು ದೊಡ್ಡಬಳ್ಳಾಪುರ ತಾಲೂಕು ಪಂಚಾಯಿತಿಗೆ ನೇಮಿಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸರ್ಕಾರದ ಜಂಟಿ ಕಾರ್ಯದರ್ಶಿ ಜಯಲಕ್ಷ್ಮಿ ಅಧಿಸೂಚನೆ ಹೊರಡಿಸಿದ್ದಾರೆ.
ಇದರನ್ವಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಕರ್ನಾಟಕ ಸಾಮಾನ್ಯ ಸೇವೆ (ಅಭಿವೃದ್ಧಿ ಶಾಖೆ ಮತ್ತು ಸ್ಥಳೀಯ ಆಡಳಿತ ಶಾಖೆ)ಗೆ ಸೇರಿದ ಗ್ರೂಪ್-ಎ (ಕಿರಿಯ ಶ್ರೇಣಿ) ವೃಂದದ ಅಧಿಕಾರಿಯಾದ ಮಂಜುನಾಥ ಹರ್ತಿ, ಸಹಾಯಕ ಕಾರ್ಯದರ್ಶಿ, ಜಿಲ್ಲಾ ಪಂಚಾಯಿತಿ, ಕೋಲಾರ ಜಿಲ್ಲೆ ಇವರನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಕಾರ್ಯನಿರ್ವಾಹಕ ಅಧಿಕಾರಿ, ತಾಲ್ಲೂಕು ಪಂಚಾಯಿತಿ. ದೊಡ್ಡಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿನ ಖಾಲಿ ಹುದ್ದೆಗೆ ವರ್ಗಾಯಿಸಿ ಆದೇಶಿಸಿದ್ದಾರೆ.