ಬೆಂ.ಗ್ರಾ.ಜಿಲ್ಲೆ: 2025-26ನೇ ಸಾಲಿಗೆ ಡಿ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ವತಿಯಿಂದ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ವಿದೇಶಿ ವ್ಯಾಸಂಗಕ್ಕೆ ಸಾಲ (Foreign Study Loan) ಸೌಲಭ್ಯ ಪಡೆಯಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅಸಕ್ತ ವಿಧ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್ https://sevasindhu.karnataka.gov.in ಹಾಗೂ ಗ್ರಾಮಒನ್, https://gramaone.karnataka.gov.in ಬೆಂಗಳೂರು ಒನ್ https://www.karnatakaone.gov.in ಮತ್ತು ಕರ್ನಾಟಕ ಒನ್ https://k1app.karnatakaone.gov.in ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು.
ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ & 3ಬಿ ಸೇರಿದವರಾಗಿರಬೇಕು. ಕುಟುಂಬದ ವಾರ್ಷಿಕ ಆದಾಯ ಗರಿಷ್ಠ 15.00 ಲಕ್ಷ ರೂ.ಗಳ ಮಿತಿಯಲ್ಲಿರಬೇಕು. ವಿದ್ಯಾರ್ಥಿಗಳು ಅರ್ಹತಾ ಪರೀಕ್ಷೇಯಲ್ಲಿ ಶೇ.60ಕ್ಕಿಂತಲೂ ಹೆಚ್ಚಿನ ಅಂಕ ಪಡೆದಿರಬೇಕು.
QS World Ranking 1000 ರೊಳಗೆ ಬರುವ ವಿಶ್ವ ವಿದ್ಯಾನಿಲಯಗಳಲ್ಲಿ ಪ್ರವೇಶ ಪಡೆದಿರಬೇಕು. ವಾರ್ಷಿಕ ಗರಿಷ್ಟ 25.00 ಲಕ್ಷ ಹಾಗೂ ಪೂರ್ಣ ಕೋರ್ಸ್ ನ ಅವಧಿಗೆ ರೂ.50.00 ಲಕ್ಷಗಳ ಸಾಲವನ್ನು ಬಡ್ಡಿರಹಿತವಾಗಿ ಒದಗಿಸಲಾಗುವುದು.
ಸಾಲದ ಭದ್ರತೆಗೆ ನಿಗಮಕ್ಕೆ ಅರ್ಜಿದಾರ/ಜಾಮೀನ್ಮದಾರ/ಪೋಷಕರ ಸ್ಥಿರಾಸ್ತಿಯನ್ನು ನಿಗಮಕ್ಕೆ ಆಧಾರ ಮಾಡಬೇಕು. ಅರ್ಜಿಯ ಜೋತೆಯಲ್ಲಿ ವಿದೇಶಿ ವಿಶ್ವ ವಿದ್ಯಾಲಯದ ಪ್ರವೇಶ ಪತ್ರ ವಿದ್ಯಾರ್ಥಿಯ ವಿಸಾ ಪಾಸ್ ಪೋರ್ಟ್ ಮತ್ತು ಏರ್ ಟಿಕೇಟ್ ಪ್ರತಿ ಒದಗಿಸಬೇಕು. ಸ್ನಾತಕೋತ್ತರ ಕೊರ್ಸಗಳಿಗೆ ವಯೋಮಿತಿ 32, ಪಿ.ಎಚ್.ಡಿ ಕೊರ್ಸಗಳಿಗೆ 35 ವರ್ಷಗಳ ವಯೋಮಿತಿ ಒಳಗಿರಬೇಕು.
ಹೆಚ್ಚಿನ ಮಾಹಿತಿಗಾಗಿ 080-29605761 ಗೆ ಸಂಪರ್ಕಿಸಬಹುದು ಎಂದು ಡಿ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ರಂಗನಾಥ ಎಸ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.