Victory for the Channarayapatna farmers Fight

ಚನ್ನರಾಯಪಟ್ಟಣ ರೈತರ ಹೋರಾಟಕ್ಕೆ ಗೆಲುವು.. ಭೂಸ್ವಾಧೀನ ಕೈಬಿಟ್ಟ ಸಿದ್ದರಾಮಯ್ಯ ಸರ್ಕಾರ

ಬೆಂಗಳೂರು: ಭೂಸ್ವಾಧೀನ ಕುರಿತು ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ರೈತರ (farmers) ಹೋರಾಟಕ್ಕೆ ಗೆಲುವು ದೊರೆತಿದ್ದು, ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಅಂತಿಮ ನಿರ್ಧಾರ ಕೈಗೊಂಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ವಿಧಾನಸೌಧದ ಸಭಾಂಗಣದಲ್ಲಿ ನಡೆದ ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹಾಗೂ ಇತರ ಗ್ರಾಮಗಳಲ್ಲಿನ ಭೂಸ್ವಾಧೀನ ಪ್ರಕ್ರಿಯೆಗೆ ಸಂಬಂಧಪಟ್ಟಂತೆ ಅಧಿಕಾರಿಗಳ ಹಾಗೂ ರೈತ ಮುಖಂಡರ ಸಭೆಯಲ್ಲಿ ಮತ್ತು ಬಳಿಕ ಪತ್ರಿಕಾಗೋಷ್ಠಿಯಲ್ಲಿ ಹೇಳಿದ ಮುಖ್ಯಾಂಶಗಳು ಈ ರೀತಿಯಾಗಿದೆ.

ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹಾಗೂ ಇತರ ಗ್ರಾಮಗಳಲ್ಲಿನ ಭೂಸ್ವಾಧೀನ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಕೈಬಿಟ್ಟಿದ್ದೇವೆ.

ಸರ್ಕಾರ ಭೂಸ್ವಾಧೀನ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಕೈಬಿಡಲು ನಿರ್ಧರಿಸಿದೆ. ಕೆಲವು ರೈತರು ಜಮೀನು ನೀಡಲು ಸಿದ್ಧರಿರುವುದಾಗಿ ಮುಂದೆ ಬಂದಿದ್ದಾರೆ. ಜಮೀನು ನೀಡಲು ಇಚ್ಚಿಸುವವರ ಜಮೀನು ಸರ್ಕಾರ ಸ್ವಾಧೀನಪಡಿಸಿಕೊಳ್ಳಲಿದ್ದು, ಅವರಿಗೆ ಹೆಚ್ಚಿನ ಪರಿಹಾರ ಮತ್ತು ಅಭಿವೃದ್ಧಿಪಡಿಸಿದ ಜಮೀನು ನೀಡಲಾಗುವುದು.

ಅಂತಹ ರೈತರಿಗೆ ಮಾರ್ಗಸೂಚಿ ದರಕ್ಕಿಂತ ಹೆಚ್ಚುವರಿ ದರವನ್ನು ನೀಡಲಿದೆ. ಅಲ್ಲಿ ಕೃಷಿ ಚಟುವಟಿಕೆಗಳನ್ನು ಮುಂದುವರೆಸಲು ಬಯಸುವ ರೈತರು ಕೃಷಿ ಚಟುವಟಿಕೆಗಳನ್ನು ಮುಂದುವರೆಸಿಕೊಂಡು ಹೋಗಬಹುದಾಗಿದೆ.

ದೇವನಹಳ್ಳಿ ತಾಲೂಕು ಬೆಂಗಳೂರಿಗೆ ಹತ್ತಿರದ್ದಲ್ಲಿದ್ದು, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಅಲ್ಲಿಯೇ ಇದೆ. ರಾಜ್ಯದ ಪ್ರತಿಯೊಬ್ಬರ ವರಮಾನ ಹೆಚ್ಚಳವಾಗಬೇಕಿದ್ದರೆ ಅಭಿವೃದ್ದಿ ಕಾರ್ಯ ನಡೆಯಬೇಕಾಗಿದೆ.

ಹೊಸ ಕೈಗಾರಿಕೆಗಳ ಪ್ರಾರಂಭಕ್ಕೆ, ಬಂಡವಾಳ ಹೂಡಿಕೆಗೆ ಜಮೀನಿನ ಅಗತ್ಯವಿದೆ. ಜಮೀನು ಸ್ವಾಧೀನ ಪಡಿಸಿ ಕೈಗಾರಿಕೆಗಳನ್ನು ಪ್ರಾರಂಭಿಸಲು ಸರ್ಕಾರ ನೀಡಬೇಕಾಗುತ್ತದೆ.

ಸರ್ಕಾರ ಭೂಸ್ವಾಧೀನ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಕೈಬಿಡಲು ನಿರ್ಧರಿಸಿದೆ. ಆದರೆ ಕೆಲವು ರೈತರು ಜಮೀನು ನೀಡಲು ಸಿದ್ಧರಿರುವುದಾಗಿ ಮುಂದೆ ಬಂದಿದ್ದಾರೆ. ಜಮೀನು ನೀಡಲು ಇಚ್ಚಿಸುವವರ ಜಮೀನು ಸರ್ಕಾರ ಸ್ವಾಧೀನಪಡಿಸಿಕೊಳ್ಳಲಿದ್ದು, ಅವರಿಗೆ ಹೆಚ್ಚಿನ ಪರಿಹಾರ ಮತ್ತು ಹೆಚ್ಚಿನ ವಿಸ್ತೀರ್ಣದ ಅಭಿವೃದ್ಧಿಪಡಿಸಿದ ನಿವೇಶನ ನೀಡಲಾಗುವುದು.

1777 ಎಕ್ರೆ ಜಮೀನು ದೇವನಹಳ್ಳಿ ತಾಲೂಕಿನಲ್ಲಿ ಸರ್ಕಾರ ಸ್ವಾಧೀನಪಡಿಸಿ, ಅಲ್ಲಿ ಏರೋಸ್ಪೇಸ್ ಪ್ರಾರಂಭಿಸುವುದು ಸರ್ಕಾರದ ಉದ್ದೇಶ. ಬೆಂಗಳೂರಿನ ಸಮೀಪದಲ್ಲಿ ಇದಕ್ಕೆ ಜಮೀನು ಒದಗಿಸಲು ಕೋರಿಕೆ ಸ್ವೀಕರಿಸಲಾಗಿತ್ತು.

ರಾಜ್ಯದಲ್ಲಿ ಭೂಸ್ವಾಧೀನ ವಿರುದ್ಧ ಈ ಮಟ್ಟದ ಪ್ರತಿಭಟನೆ ನಡೆದಿಲ್ಲ. ಅದು ಫಲವತ್ತಾದ ವ್ಯವಸಾಯಕ್ಕೆ ಯೋಗ್ಯವಾದ ಭೂಮಿ. ಅಲ್ಲಿನ ರೈತರು ಆ ಜಮೀನಿನ ಮೇಲೆ ಹೆಚ್ಚು ಅವಲಂಬಿತರಾಗಿದ್ದಾರೆ. ಆದ್ದರಿಂದ ಭೂಸ್ವಾಧೀನ ಪ್ರಕ್ರಿಯೆ ಕೈಬಿಡಬೇಕೆಂದು ಹೋರಾಟಗಾರರು ಸ್ಪಷ್ಟಪಡಿಸಿದ್ದಾರೆ.

ಸರ್ಕಾರ ರೈತರು, ಜಮೀನುದಾರರು ಸೇರಿದಂತೆ ಎಲ್ಲರ ಅಹವಾಲುಗಳನ್ನು ಆಲಿಸಿದೆ. ರಾಜ್ಯದ ಅಭಿವೃದ್ದಿಗೆ, ಬೆಳವಣಿಗೆಗೆ ಕೈಗಾರಿಕೆ ಉತ್ತೇಜನ ನೀಡುವುದು ಅಗತ್ಯವಿದೆ.

ಯಾವುದೇ ಕಾರಣಕ್ಕೆ ಜಮೀನು ಸ್ವಾಧೀನ ಕೈಬಿಟ್ಟರೆ ಈ ಕೈಗಾರಿಕೆ ಬೇರೆ ಕಡೆ ಹೋಗುವ ಸಾಧ್ಯತೆ ಇದೆ. ಆದರೂ ಸರ್ಕಾರ ರೈತಪರವಾಗಿದ್ದು, ಅವರ ಬೇಡಿಕೆಗಳನ್ನು ಪರಿಗಣಿಸಿ ಭೂಸ್ವಾಧೀನ ಪ್ರಕ್ರಿಯೆಯನ್ನು ಕೈಬಿಡಲು ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಅವರು ಹೇಳಿದರು.

ಮುಖ್ಯಮಂತ್ರಿ ಅವರ ಸಾಮಾಜಿಕ ನ್ಯಾಯ ಕೇವಲ ನುಡಿಯಲ್ಲಿ ಮಾತ್ರವಲ್ಲ ನಡೆಯಲ್ಲೂ ಅದನ್ನು ಇಂದು ಅವರು ತೋರಿಸಿಕೊಟ್ಟಿದ್ದಾರೆ ಎಂದು ಚಿತ್ರನಟ ಪ್ರಕಾಶ್ ರಾಜ್ ಅವರು ಹೇಳಿದರು.

ಸಚಿವರಾದ ಎಂ.ಬಿ.ಪಾಟೀಲ್, ಕೆ.ಎಚ್.ಮುನಿಯಪ್ಪ, ಹೆಚ್.ಕೆ.ಪಾಟೀಲ್, ಕೃಷ್ಣ ಭೈರೇಗೌಡ, ಪ್ರಿಯಾಂಕ ಖರ್ಗೆ, ಭೈರತಿ ಸುರೇಶ್, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಕಾನೂನು ಸಲಹೆಗಾರ ಪೊನ್ನಣ್ಣ, ಅಡ್ವಕೇಟ್ ಜನರಲ್ ಶಶಿಕಿರಣ ಶೆಟ್ಟಿ, ರೈತ ಪ್ರತಿನಿಧಿಗಳು ಮತ್ತಿತರರು ಉಪಸ್ಥಿತರಿದ್ದರು.

ರಾಜಕೀಯ

ರಾಜ್ಯ ಸರ್ಕಾರವನ್ನು ಕಡೆಗಣಿಸಿ ಸಿಗಂದೂರು ಸೇತುವೆ ಉದ್ಘಾಟನೆ.!?: ಪ್ರಧಾನಿಗೆ ಸಿಎಂ ಪತ್ರ

ರಾಜ್ಯ ಸರ್ಕಾರವನ್ನು ಕಡೆಗಣಿಸಿ ಸಿಗಂದೂರು ಸೇತುವೆ ಉದ್ಘಾಟನೆ.!?: ಪ್ರಧಾನಿಗೆ ಸಿಎಂ ಪತ್ರ

ರಾಜಕೀಯ ಕೆಸರೆರಚಾಟ, ಎಡಬಿಡದೆ ಸುರಿಯುತ್ತಿದ್ದ ಮಳೆಯ ನಡುವೆಯೂ ಸೋಮವಾರ ಮಧ್ಯಾಹ್ನ ಸಾಗರ ತಾಲೂಕಿನ ಸಿಗಂದೂರು ನೂತನ ತೂಗು ಸೇತುವೆಯನ್ನು (SigandooruBridge)

[ccc_my_favorite_select_button post_id="111123"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಎಣ್ಣೆ ಪಾರ್ಟಿ.. ಮಾರಕಾಸ್ತ್ರಗಳಿಂದ ಹಲ್ಲೆ..!

ಎಣ್ಣೆ ಪಾರ್ಟಿ.. ಮಾರಕಾಸ್ತ್ರಗಳಿಂದ ಹಲ್ಲೆ..!

ಎಣ್ಣೆ ಪಾರ್ಟಿಯಲ್ಲಿ (Drinks party) ಜತೆಗೂಡಿದ ಸ್ನೇಹಿತರು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹೊಡೆದು ಗಂಭೀರವಾಗಿ ಹಲ್ಲೆ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ.

[ccc_my_favorite_select_button post_id="111121"]
FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

ಸುಮಾರು 35 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯೋರ್ವ ರೈಲಿಗೆ ಸಿಲುಕಿ ಸಾವನಪ್ಪಿರುವ (Dies) ಘಟನೆ ದೊಡ್ಡಬಳ್ಳಾಪುರ- ರಾಜಾನುಕುಂಟೆ ನಡುವಿನ ***

[ccc_my_favorite_select_button post_id="111089"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!