ಬೆಂ.ಗ್ರಾ.ಜಿಲ್ಲೆ: ಸಣ್ಣ ಹಿಡುವಳಿ ಜಮೀನು ಹೊಂದಿರುವ ರೈತರಿಗೆ ನೆರವಾಗುವ ಸಲುವಾಗಿ ಕೇಂದ್ರ ಸರ್ಕಾರವು ‘ಕಿಸಾನ್ ಸಮ್ಮಾನ್ ಯೋಜನೆ ಅಡಿ ವಾರ್ಷಿಕ ₹ 6 ಸಾವಿರ ಸಹಾಯಧನವನ್ನು ನೀಡುತ್ತ ಬಂದಿದೆ. ತಲಾ 2 ಸಾವಿರದಂತೆ ಮೂರು ಕಂತಿನಲ್ಲಿ ರೈತರ ಬ್ಯಾಂಕ್ ಖಾತೆಗೆ ನೇರವಾಗಿ ಹಣ ಸಂದಾಯ ಆಗುತ್ತಿದೆ. ಈ ಯೋಜನೆಯ ಫಲಾನುಭವಿ ರೈತರು ಆಗಾಗೆ ತಮ್ಮ ಬ್ಯಾಂಕ್ ಖಾತೆಗಳಿಗೆ ಇ-ಕೆವೈಸಿ (e-KYC) ಮಾಡಿಸುವುದು ಕಡ್ಡಾಯವಾಗಿದೆ.
ಜಿಲ್ಲೆಯಲ್ಲಿ ಒಟ್ಟು 11635 ಸಾವಿರ ರೈತರು ಇ-ಕೆವೈಸಿ ಬಾಕಿ ಉಳಿಸಿಕೊಂಡಿದ್ದು, ಇವರಿಗೆ ಕೇಂದ್ರ ಸರ್ಕಾರದ ಹಣ ಕೈತಪ್ಪಿದೆ.
ಕೂಡಲೇ ರೈತರು ತಮ್ಮ ಆಧಾರ್ ಕಾರ್ಡ್ ಗೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆಯೊಂದಿಗೆ ತಮ್ಮ ಬ್ಯಾಂಕ್ ಸಮೀಪದ ಸಾಮಾನ್ಯ ಸೇವಾ ಕೇಂದ್ರಗಳು ಇಲ್ಲವೇ ಗ್ರಾಮ ಒನ್ ಕೇಂದ್ರಗಳ ಮೂಲಕ ಇ-ಕೆವೈಸಿ ಮಾಡಿಸಬೇಕು.
ಹೆಚ್ಚಿನ ಮಾಹಿತಿಗಾಗಿ ರೈತರು ತಮ್ಮ ಸಮೀಪದ ರೈತ ಸಂಪರ್ಕ ಕೇಂದ್ರಗಳ ಅಧಿಕಾರಿಗಳಿಂದ ಮಾಹಿತಿ ಪಡೆಯಬಹುದು.
ಇನ್ನೂ ಕಾಂಗ್ರೆಸ್ ಸರ್ಕಾರ ಗೃಹಲಕ್ಷ್ಮೀ ಯೋಜನೆಯ ಎರಡು ಸಾವಿರ ತಡವಾದಲ್ಲಿ ದೊಡ್ಡ ದೊಡ್ಡ ದ್ವನಿಯಲ್ಲಿ ಕಿರುಚುವ ಕೆಲ ಖಾಸಗಿ ಸುದ್ದಿವಾಹಿನಿಗಳು, ಹಲವು ವರ್ಷಗಳಿಂದ ಕೇಂದ್ರ ಸರ್ಕಾರದಿಂದ ರೈತರಿಗೆ ಬರಬೇಕಾದ ಪಿ.ಎಂ ಕಿಸಾನ್ ಸಮ್ಮಾನ್ ಯೋಜನೆಯ 6 ಸಾವಿರ ಹಣಕ್ಕೆ ಕೊಕ್ಕೆ ಬಿದ್ದರು ಮೌನವಾಗಿರಲು ಕಾರಣವೇನು..? ಈ ಕುರಿತಾದ ಜಂಜಾಟ ಸರಳಗೊಳಿಸಲು ವರದಿ ಮಾಡುತ್ತಿಲ್ಲ ಏಕೆ..? ಎಂದು ಅನೇಕ ರೈತರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.