ವಿಶ್ವನಾಥಪುರ: ಮಾವಿನ ಕಾಯಿ ತುಂಬಿಕೊಂಡು ಸಾಗುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪೊ ಮಗುಚಿ ಬಿದ್ದಿರುವ ಘಟನೆ (Accident) ದಾಬಸ್‌ಪೇಟೆ- ದೇವನಹಳ್ಳಿ ನಡುವಿನ ರಾಷ್ಟ್ರೀಯ ಹೆದ್ದಾರಿ ಆಲೂರು ದುದ್ದನಹಳ್ಳಿ ಗೇಟ್ ಬಳಿ ಸಂಭವಿಸಿದೆ.
ದೇವನಹಳ್ಳಿ ಮಾರ್ಗವಾಗಿ ದೊಡ್ಡಬಳ್ಳಾಪುರದ ಕಡೆಗೆ ತೋತಾಪುರಿ ಮಾವಿನ ಕಾಯಿ ತುಂಬಿಕೊಂಡು ಬರುತ್ತಿದ್ದ ಲಾರಿ, ಆಲೂರು ದುದ್ದನಹಳ್ಳಿ ಗೇಟ್ ಬಳಿ ತಿರುವು ಪಡೆಯುತ್ತಿದ್ದ ಕ್ಯಾಂಟೈನ್‌ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ.
ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಉಂಟಾಗಿಲ್ಲವಾಗಿದ್ದು, ಚಾಲಕ ಹಾಗೂ ಸಹಾಯಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಲಾರಿ ಮಗುಚಿ ಬಿದ್ದ ವೇಳೆ ತುಂಬಿದ್ದ ಮಾವಿನ ಹಣ್ಣುಗಳು ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದು, ಅವುಗಳನ್ನು ಕೊಂಡೊಯ್ಯಲು ಸಾರ್ವಜನಿಕರು ಮುಗಿಬಿದ್ದಿದ್ದರು.
ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮಗುಚಿ ಬಿದ್ದ ಕಾರಣ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿದ್ದು, ಕೂಡಲೇ ಸ್ಥಳಕ್ಕೆ ದೌಡಾಯಿಸಿದ ವಿಶ್ವನಾಥಪುರ ಪೊಲೀಸರು ವಾಹನ ದಟ್ಟಣೆಯನ್ನು ತೆರವುಗೊಳಿಸಿದರು.