ಬೆಂಗಳೂರು: ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯಲ್ಲಿ ಉದ್ದೇಶಿದ್ದ ಡಿಫೆನ್ಸ್ ಮತ್ತು ಏರೋಸ್ಪೇಸ್ ಪಾರ್ಕ್ ಸ್ಥಾಪನೆ ಕುರಿತು ರೈತರ ಪ್ರತಿಭಟನೆಗೆ ಮಣಿದ ಸಿಎಂ ಸಿದ್ದರಾಮಯ್ಯ (Cmsiddaramaiah) ಸರ್ಕಾರ ಭೂಸ್ವಾಧೀನ ಪ್ರಕ್ರಿಯೆ ಕೈಬಿಟ್ಟಿದೆ.
ಆದರೆ ಇದನ್ನೆ ತನ್ನ ಲಾಭಕ್ಕೆ ಬಳಸಿಕೊಳ್ಳಲು ಮುಂದಾಗಿರುವ ನೆರೆಯ ಆಂಧ್ರಪ್ರದೇಶ ಸರ್ಕಾರ ಉದ್ಯಮಿಗಳಿಗೆ ಆಮಿಷ ಒಡ್ಡಿದೆ.
ನಾ.ರಾ.ಲೋಕೇಶ್ ಆಮಿಷ
ಈ ಕುರಿತಂತೆ ಮಾಹಿತಿ ತಂತ್ರಜ್ಞಾನ, ಎಲೆಕ್ಟ್ರಾನಿಕ್ಸ್ ಮತ್ತು ಸಂವಹನ , ನೈಜ ಸಮಯ ಆಡಳಿತ ಮತ್ತು ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ನಾರಾ ಲೋಕೇಶ್ (Na.Ra.Lokesh) ಉದ್ಯಮಿಗಳನ್ನು ತಮ್ಮ ರಾಜ್ಯಕ್ಕೆ ಬರುವಂತೆ ಆಹ್ವಾನ ನೀಡಿದ್ದಾರೆ.
Dear Aerospace industry, sorry to hear about this. I have a better idea for you. Why don’t you look at Andhra Pradesh instead? We have an attractive aerospace policy for you, with best-in-class incentives and over 8000 acres of ready-to-use land (just outside Bengaluru)! Hope to…
— Lokesh Nara (@naralokesh) July 15, 2025
ಸಿಎಂ ಸಿದ್ದರಾಮಯ್ಯ ಭೂಸ್ವಾಧೀನ ಪ್ರಕ್ರಿಯೆ ಕೈಬಿಟ್ಟ ಬೆನ್ನಲ್ಲೇ ಟ್ಚೀಟ್ ಮಾಡಿರುವ ಅವರು, ಆತ್ಮೀಯ ಏರೋಸ್ಪೇಸ್ ಉದ್ಯಮದವರೇ, ಇದರ ಬಗ್ಗೆ ಕೇಳಿ ಬೇಸರವಾಯಿತು. ನಿಮಗಾಗಿ ನನ್ನ ಬಳಿ ಇನ್ನೊಂದು ಉತ್ತಮ ಐಡಿಯಾ ಇದೆ. ನೀವು ಆಂಧ್ರಪ್ರದೇಶವನ್ನು ಏಕೆ ನೋಡಬಾರದು? ಅತ್ಯುತ್ತಮ ಪ್ರೋತ್ಸಾಹ ಧನ ಮತ್ತು 8000 ಎಕರೆಗಳಿಗೂ ಹೆಚ್ಚು ಬಳಸಲು ಸಿದ್ಧವಾದ ಭೂಮಿ (ಬೆಂಗಳೂರಿನ ಹೊರಗೆ) ಹೊಂದಿರುವ ಆಕರ್ಷಕ ಏರೋಸ್ಪೇಸ್ ನೀತಿಯನ್ನು ನಾವು ನಿಮಗಾಗಿ ಹೊಂದಿದ್ದೇವೆ! ಶೀಘ್ರದಲ್ಲೇ ನಿಮ್ಮನ್ನು ಭೇಟಿಯಾಗಿ ಚರ್ಚಿಸಲು ಆಶಿಸುತ್ತೇವೆ ಎಂದಿದ್ದಾರೆ.
ಆಂಧ್ರದ ಆಮಿಷಕ್ಕೆ ಸಚಿವ ಎಂ.ಬಿ. ಪಾಟೀಲ (M.B.Patila) ತಿರುಗೇಟು
ಡಿಫೆನ್ಸ್ ಮತ್ತು ಏರೋಸ್ಪೇಸ್ ಪಾರ್ಕ್ ಸ್ಥಾಪನೆಗೆ ದೇವನಹಳ್ಳಿಯಲ್ಲಿ ನಡೆಯಬೇಕಾಗಿದ್ದ ಭೂಸ್ವಾಧೀನವನ್ನು ರೈತರ ಹಿತದೃಷ್ಟಿಯಿಂದ ಕೈಬಿಡಬೇಕಾಯಿತು. ಆದರೆ ಈ ಉದ್ಯಮಿಗಳಿಗೆ ಅವರು ಕೇಳಿದ ಕಡೆ ಜಮೀನು ಕೊಡಲಾಗುವುದು. ಆಂಧ್ರಪ್ರದೇಶದ ಸಚಿವ ನಾರಾ ಲೋಕೇಶ್ ಕರೆದಾಕ್ಷಣ ಯಾವ ಉದ್ಯಮಿಯೂ ಇಲ್ಲಿಂದ ಅಲ್ಲಿಗೆ ಹೋಗಿಬಿಡುವುದಿಲ್ಲ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ರಾಜ್ಯವು ವೈಮಾಂತರಿಕ್ಷ ವಲಯದಲ್ಲಿ ದೇಶದ ಶೇ.65ರಷ್ಟು ಪಾಲು ಹೊಂದಿದೆ. ಜಾಗತಿಕ ಮಟ್ಟದಲ್ಲಿ ನಮ್ಮದು ಮೂರನೇ ಅತ್ಯುತ್ತಮ ಕಾರ್ಯ ಪರಿಸರವಾಗಿದೆ.
Dear @naralokesh,
— M B Patil (@MBPatil) July 16, 2025
Karnataka doesn’t just offer land – it offers India’s No. 1 aerospace & defence ecosystem.
We’ve built the country’s strongest aerospace base over the decades, contributing 65% of India’s aerospace output and ranking No. 1 nationally, 3rd globally.
It isn’t… https://t.co/XzArds5xZY
ಉದ್ಯಮಗಳಿಗೆ ಭೂಮಿ ಕೊಟ್ಟಮಾತ್ರಕ್ಕೆ ಅವು ಅಲ್ಲಿಗೆ ಹೋಗುವುದಿಲ್ಲ. ಕಾರ್ಯ ಪರಿಸರ ಕೂಡ ಮಹತ್ತ್ವದ ಪಾತ್ರ ವಹಿಸುತ್ತದೆ ಎಂದು ಅವರು ತಿರುಗೇಟು ಕೊಟ್ಟಿದ್ದಾರೆ.
ನಾರಾ ಲೋಕೇಶ್ ಅವರ ಟ್ವೀಟ್ ಅನ್ನು ನಾನೂ ನೋಡಿದ್ದೇನೆ. ನಾನೂ ಅಲ್ಲೇ ಉತ್ತರ ಕೊಟ್ಟಿದ್ದೇನೆ. ಎಂ ಬಿ ಪಾಟೀಲನಿಗೂ ಸಾಮರ್ಥ್ಯವಿದೆ, ಕರ್ನಾಟಕ ರಾಜ್ಯವೂ ಸಮರ್ಥವಾಗಿದೆ . ರಾಜ್ಯದ ಅನೇಕ ಕಡೆಗಳಲ್ಲಿ ಏರೋಸ್ಪೇಸ್ ಮಾತ್ರವಲ್ಲ, ಎಐ, ಡೀಪ್-ಟೆಕ್, ಐಟಿ ಹೀಗೆ ಎಲ್ಲಾ ತರಹದ ಉದ್ಯಮಗಳಿಗೂ ಭೂಮಿ ಇದೆ. ಒಬ್ಬೇ ಒಬ್ಬ ಉದ್ಯಮಿಯೂ ಕರ್ನಾಟಕದಿಂದ ಹೊರಹೋಗಲು ನಾನು ಬಿಡುವುದಿಲ್ಲ ಎಂದು ಅವರು ವಿಶ್ವಾಸ ಪ್ರಕಟಿಸಿದ್ದಾರೆ.
ಏರೋಸ್ಪೇಸ್ ಉದ್ಯಮಿಗಳಿಗೆ ಬರೀ ಭೂಮಿಯಲ್ಲ, ಅದರ ಜತೆಗೆ ನೀರು, ವಿದ್ಯುತ್ ಎಲ್ಲವನ್ನೂ ಕೊಡುತ್ತೇವೆ. ರಾಜ್ಯದಲ್ಲಿ ಕೈಗಾರಿಕಾ ಪ್ರದೇಶಗಳಿಗೆ ನಮ್ಮ ಪಾಲಿನ ನೀರು ಬಳಸಿಕೊಳ್ಳಲು 3,600 ಕೋಟಿ ರೂಪಾಯಿ ವೆಚ್ಚದಲ್ಲಿ ಸಮಗ್ರ ಯೋಜನೆಯನ್ನೇ ರೂಪಿಸಲಾಗಿದೆ ಎಂದು ಪಾಟೀಲ ತಿಳಿಸಿದ್ದಾರೆ.
ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಅವರು ಈಗ ಉದ್ಯಮಿಗಳ ಪರವಾಗಿ ಮಾತನಾಡುತ್ತಿದ್ದಾರೆ. ಸರಕಾರವೇನಾದರೂ ದೇವನಹಳ್ಳಿ ತಾಲ್ಲೂಕಿನಲ್ಲಿ ರೈತರ ಜಮೀನನ್ನು ಸ್ವಾಧೀನಪಡಿಸಿಕೊಳ್ಳಲು ಮುಂದಾಗಿದ್ದರೆ, ಆಗ ಅವರು ರೈತರ ಪರವಾಗಿ ಮಾತನಾಡುತ್ತಿದ್ದರು. ವಿರೋಧ ಪಕ್ಷಗಳು ಏನಾದರೂ ಮಾಡಿಕೊಳ್ಳಲಿ, ನನಗೆ ರಾಜ್ಯದ ಹಿತಾಸಕ್ತಿ ಮಾತ್ರ ಮುಖ್ಯ ಎಂದು ಅವರು ಪ್ರತಿಪಾದಿಸಿದ್ದಾರೆ.
ಕೈಗಾರಿಕಾ ಇಲಾಖೆಯಲ್ಲಿ ಸಾಧಿಸಿರುವ ಪ್ರಗತಿ ಮತ್ತು ದೇವನಹಳ್ಳಿ ವಿದ್ಯಮಾನವನ್ನೆಲ್ಲ ಪಕ್ಷದ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲಾ ಅವರಿಗೆ ಹೇಳಿದ್ದೇನೆ. ಇಲಾಖೆಯ ಪ್ರಗತಿ ಬಗ್ಗೆ ಅವರು ತೃಪ್ತಿ ವ್ಯಕ್ತಪಡಿಸಿದ್ದಾರೆ ಎಂದು ಅವರು ನುಡಿದಿದ್ದಾರೆ.
ಇಷ್ಟು ವರ್ಷ ತೆಪ್ಪಗಿದ್ದ ಆಂಧ್ರ ಸಚಿವರು: ಸಂತೋಷ್ ಲಾಡ್
ಇನ್ನೂ ನಾರಾ ಲೋಕೇಶ್ ಟ್ವೀಟ್ಗೆ ಆಕ್ರೋಶ ವ್ಯಕ್ತಪಡಿಸಿರುವ ಸಚಿವ ಸಂತೋಷ್ ಲಾಡ್, ಕಳೆದ 5 ದಶಕಗಳಿಂದ ನಾವು ಜಿಡಿಪಿಯಲ್ಲಿ ಮೊದಲ ಸ್ಥಾನದಲ್ಲಿದ್ದೇವೆ. ನಾವು ಪರಿಹಾರವನ್ನು ಕಂಡುಕೊಳ್ಳುತ್ತೇವೆ. ಈ ಭೂಮಿಯನ್ನು ಬೇರೆಯವರಿಗೆ ನೀಡಬಾರದು ಎಂಬ ಬಲವಾದ ಅಭಿಪ್ರಾಯ ರೈತರಲ್ಲಿತ್ತು. ರೈತರು ಸ್ವಯಂಪ್ರೇರಣೆಯಿಂದ ತಮ್ಮ ಭೂಮಿಯನ್ನು ನಮಗೆ ನೀಡುವಂತೆ ನಾವು ಕೇಳಿದ್ದೇವೆ. ಇದರರ್ಥ ಯೋಜನೆ ರದ್ದಾಗಿದೆ ಎಂದಲ್ಲ.
#WATCH | Bengaluru | On Andhra Pradesh Minister Nara Lokesh welcoming aerospace companies to the state after farmers' protest in Karnataka, state Minister Santosh Lad says, "For last 5 decades we have been at number one position in GDP. We will find a solution. The farmers had a… pic.twitter.com/eLpZWzMKkU
— ANI (@ANI) July 16, 2025
ಇಷ್ಟು ವರ್ಷ ತೆಪ್ಪಗಿದ್ದ ಆಂಧ್ರದ ಸಚಿವರು (ನಾರಾ ಲೋಕೇಶ್) ಈಗ ಏಕೆ ಟ್ವೀಟ್ ಮಾಡಿದ್ದಾರೆ ಎಂದು ನೀವು ಕೇಳಬೇಕು ಎಂದಿದ್ದಾರೆ.