Doddaballapura: The excavation of the Buddhist site will be inaugurated today... Preparations are in full swing

ದೊಡ್ಡಬಳ್ಳಾಪುರ: ಇಂದು ಬೌದ್ಧನೆಲೆಯ ಉತ್ಖನನ ಚಾಲನೆ ಕಾರ್ಯಕ್ರಮ… ಸಿದ್ಧತೆ ಜೋರು

ದೊಡ್ಡಬಳ್ಳಾಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪ್ರವಾಸೋದ್ಯಮ ಇಲಾಖೆ ಬೆಂಗಳೂರು, ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಮೈಸೂರು ಇವರುಗಳ ಸಹಯೋಗದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕಿನ ರಾಜಘಟ್ಟ (Rajagatta) ಗ್ರಾಮ ಬೂದಿಗುಂಡಿಯಲ್ಲಿ ಬೌದ್ಧನೆಲೆಯ (Buddhist) ಕುರಿತಾದ ಉತ್ಖನನ ಚಾಲನೆ ಕಾರ್ಯಕ್ರಮವನ್ನು ಇಂದು (ಜುಲೈ 16) ಬೆಳಿಗ್ಗೆ 11 ಗಂಟೆಗೆ ಹಮ್ಮಿಕೊಳ್ಳಲಾಗಿದೆ.

ರಾಜಘಟ್ಟ ಮೂಲಕ ದಾಸಗೊಂಡನಹಳ್ಳಿ ಗ್ರಾಮಕ್ಕೆ ತೆರಳುವ ಮಾರ್ಗ ಮಧ್ಯದಲ್ಲಿ ಬೂದಿಗುಂಡಿ ಎಂಬ ಸ್ಥಳ. ಬೃಹತ್ ವೇದಿಕೆ ನಿರ್ಮಾಣ ಮಾಡಲಾಗಿದ್ದು, ಸುಮಾರು 26 ಮಂದಿ ಬೌದ್ಧ ಬಿಕ್ಕುಗಳು ವೇದಿಕೆಯನ್ನು ಸಿದ್ಧತೆ ಕಾರ್ಯದಲ್ಲಿ ತೊಡಗಿದ್ದಾರೆ.

ಕಾರ್ಯಕ್ರಮವನ್ನು ಕಾನೂನು ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯಹಾರಗಳು ಮತ್ತು ಪ್ರವಾಸೋದ್ಯಮ ಸಚಿವರಾದ ಡಾ.ಎಚ್.ಕೆ ಪಾಟೀಲ್ ಅವರು ಉದ್ಘಾಟನೆ ಮಾಡಲಿದ್ದಾರೆ.

ಕಾರ್ಯಕ್ರಮದಲ್ಲಿ ‘ಕರ್ನಾಟಕದಲ್ಲಿ ಬೌದ್ಧಕಲೆ ಮತ್ತು ಸಂಸ್ಕೃತಿ’ ಎಂಬ ಪುಸ್ತಕವನ್ನು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಬಿಡುಗಡೆ ಮಾಡಲಿದ್ದಾರೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ದೊಡ್ಡಬಳ್ಳಾಪುರ ತಾಲ್ಲೂಕಿನ ವಿಧಾನಸಭಾ ಕ್ಷೇತ್ರದ ಶಾಸಕ ಧೀರಜ್ ಮುನಿರಾಜು ಅವರು ವಹಿಸಲಿದ್ದಾರೆ.

5ನೇ ಹಣಕಾಸು ಆಯೋಗದ ಅಧ್ಯಕ್ಷರಾದ ಸಿ.ನಾರಾಯಣಸ್ವಾಮಿ, ಕರ್ನಾಟಕ ವಿದುನ್ಮಾನ ಅಭಿವೃದ್ಧಿ ನಿಗಮ ನಿಯಮಿತ ಹಾಗೂ ಹೊಸಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ಶರತ್ ಕುಮಾರ್ ಬಚ್ಚೇಗೌಡ ಅವರು ಕಾರ್ಯಕ್ರಮದಲ್ಲಿ ಘನ ಉಪಸ್ಥಿತರಿರುತ್ತಾರೆ.

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸದಸ್ಯರು ಡಾ.ಕೆ ಸುಧಾಕರ್, ವಿಧಾನ ಪರಿಷತ್ತಿನ ಶಾಸಕರಾದ ಎಸ್.ರವಿ, ಪುಟ್ಟಣ್ಣ, ರಾಮೋಜಿ ಗೌಡ, ಎನ್.ನಾಗರಾಜ್, ನೆಲಮಂಗಲ ವಿಧಾನಸಭಾ ಕ್ಷೇತ್ರದ ಶಾಸಕ ಎನ್.ಶ್ರೀನಿವಾಸ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರು ಬಿ.ರಾಜಣ್ಣ, ತಾಲ್ಲೂಕು ಯೋಜನಾ ಪ್ರಾಧಿಕಾರದ ಅಧ್ಯಕ್ಷರು ಚುಂಚೆಗೌಡ, ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರು ವಿಶ್ವನಾಥ್ ರೆಡ್ಡಿ, ರಾ ಗ್ರಾಮ ಪಂಚಾಯತಿಯ ಅಧ್ಯಕ್ಷರಾದ ಮುನಿರಾಜು ಆರ್.ಗುಂಡ್ಲಪ್ಪ, ಆರ್ಥಿಕ ಇಲಾಖೆ (ಆಯವ್ಯಯ ಮತ್ತು ಸಂಪನ್ಮೂಲ) ಆಡಳಿತಾಧಿಕಾರಿ, ಜಿಲ್ಲಾ ಪಂಚಾಯತ್ ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಪಿ.ಸಿ ಜಾಫರ್, ಪ್ರವಾಸೋದ್ಯಮ ಇಲಾಖೆಯ ಕಾರ್ಯದರ್ಶಿ ಸಲ್ಮಾ ಕೆ.ಫಾಹಿಮ್, ಪ್ರವಾಸೋದ್ಯಮ ಇಲಾಖೆಯ ಆಯುಕ್ತರು ಕೆ.ವಿ ರಾಜೇಂದ್ರ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ ಬಸವರಾಜು, ಮೈಸೂರು ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕರು ಎಂ.ಎಸ್ ಕೃಷ್ಣಮೂರ್ತಿ, ಮೈಸೂರಿನ ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯ ಆಯುಕ್ತರು ದೇವರಾಜು ಎ, ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯ ನಿರ್ದೇಶಕರು (ಪುರಾತತ್ವ) ಡಾ.ಆರ್ ಶೇಜೇಶ್ವರ್, ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯ ನಿರ್ದೇಶಕರು (ವಸ್ತು ಸಂಗ್ರಹಾಲಯ) ಡಾ.ಸ್ಮಿತಾ ರೆಡ್ಡಿ ಇವರು ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗಹಿಸಲಿದ್ದಾರೆ.

ಮಹಾಬೋಧಿ ಸೊಸೈಟಿಯ ಪ್ರಧಾನ ಕಾರ್ಯದರ್ಶಿ ಆನಂದ ಬಂತೇಜಿ, ರಾಜ್ಯಸಭಾ ಸದಸ್ಯರು ಡಾ.ಎಲ್ ಹನುಮಂತಯ್ಯ, ಹಿರಿಯ ಸಾಹಿತಿಗಳು ನಾಡೋಜ ಪ್ರೊ.ಹಂಪನಾ, ರಾಜಾಘಟ್ಟ ಉತ್ಖನನ ಭೂಮಾಲೀಕರು ಕೃಷ್ಣಪ್ಪ ಎನ್.ಅಂಜಿನಪ್ಪ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ.

ಜಿಲ್ಲೆಯ ಎಲ್ಲಾ ಚುನಾಯಿತ ಪ್ರತಿನಿಧಿಗಳು ನಾಮನಿರ್ದೇಶಿತ ಸದಸ್ಯರು ಹಾಗೂ ಗ್ರಾಮ ಪಂಚಾಯತಿಯ ಎಲ್ಲಾ ಸದಸ್ಯರು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ರಾಜಕೀಯ

ಎರಡು ವರ್ಷದಿಂದ ನನಗೆ ಮನೆ ಕೊಟ್ಟಿಲ್ಲ: ಆರ್ ಅಶೋಕ

ಎರಡು ವರ್ಷದಿಂದ ನನಗೆ ಮನೆ ಕೊಟ್ಟಿಲ್ಲ: ಆರ್ ಅಶೋಕ

ವಿಧಾನಸಭೆಯ ಪ್ರತಿಪಕ್ಷ ನಾಯಕನಾಗಿ ನನಗೆ ಅಧಿಕೃತ ಸರ್ಕಾರಿ ನಿವಾಸ ಕೊಡಿ ಎಂದು ಈವರೆಗೂ ರಾಜ್ಯ ಸರ್ಕಾರಕ್ಕೆ ಆರು ಬಾರಿ ಪತ್ರ ಬರೆದಿದ್ದೇನೆ: ಆರ್ ಅಶೋಕ (R Ashoka)

[ccc_my_favorite_select_button post_id="111165"]
ಕೆಎಸ್‌ಆರ್‌ಟಿಸಿಯ ವಿನೂತನ ಧ್ವನಿ ಸ್ಪಂದನೆ ಯೋಜನೆ ಚಾಲನೆ

ಕೆಎಸ್‌ಆರ್‌ಟಿಸಿಯ ವಿನೂತನ ಧ್ವನಿ ಸ್ಪಂದನೆ ಯೋಜನೆ ಚಾಲನೆ

ದೃಷ್ಟಿ ವಿಶೇಷ ಚೇತನರಿಗೆ KSRTC ಯ 200 ಬಸ್ಸುಗಳಲ್ಲಿ, ಅವರ ಆಯ್ಕೆಯ ಬಸ್ ಮಾರ್ಗವನ್ನು ಸೆಲೆಕ್ಟ್ ಮಾಡಲು ಧ್ವನಿ ಸ್ಪಂದನ ಯೋಜನೆ ಜಾರಿಗೊಳಿಸಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ (RamalingaReddy)

[ccc_my_favorite_select_button post_id="111154"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಎಣ್ಣೆ ಪಾರ್ಟಿ.. ಮಾರಕಾಸ್ತ್ರಗಳಿಂದ ಹಲ್ಲೆ..!

ಎಣ್ಣೆ ಪಾರ್ಟಿ.. ಮಾರಕಾಸ್ತ್ರಗಳಿಂದ ಹಲ್ಲೆ..!

ಎಣ್ಣೆ ಪಾರ್ಟಿಯಲ್ಲಿ (Drinks party) ಜತೆಗೂಡಿದ ಸ್ನೇಹಿತರು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹೊಡೆದು ಗಂಭೀರವಾಗಿ ಹಲ್ಲೆ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ.

[ccc_my_favorite_select_button post_id="111121"]
FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

ಸುಮಾರು 35 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯೋರ್ವ ರೈಲಿಗೆ ಸಿಲುಕಿ ಸಾವನಪ್ಪಿರುವ (Dies) ಘಟನೆ ದೊಡ್ಡಬಳ್ಳಾಪುರ- ರಾಜಾನುಕುಂಟೆ ನಡುವಿನ ***

[ccc_my_favorite_select_button post_id="111089"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!