ಎರಡು ವರ್ಷದಿಂದ ನನಗೆ ಮನೆ ಕೊಟ್ಟಿಲ್ಲ: ಆರ್ ಅಶೋಕ

Congress government is getting 80 percent commission, CM Siddaramaiah should resign: R. Ashoka

ಬೆಂಗಳೂರು: ವಿಧಾನಸಭೆಯ ಪ್ರತಿಪಕ್ಷ ನಾಯಕನಾಗಿ ನನಗೆ ಅಧಿಕೃತ ಸರ್ಕಾರಿ ನಿವಾಸ ಕೊಡಿ ಎಂದು ಈವರೆಗೂ ರಾಜ್ಯ ಸರ್ಕಾರಕ್ಕೆ ಆರು ಬಾರಿ ಪತ್ರ ಬರೆದಿದ್ದೇನೆ. ಆದರೆ ಯಾವುದೇ ಪತ್ರಕ್ಕೂ ಉತ್ತರ ಬಂದಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ (R Ashoka) ತಿರುಗೇಟು ಹೇಳಿದ್ದಾರೆ ‌.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ನಮ್ಮ ಬಿಜೆಪಿ ಸರ್ಕಾರ ಇದ್ದಾಗ ಅಂದಿನ ಪ್ರತಿಪಕ್ಷ ನಾಯಕರಾಗಿದ್ದ ಸಿದ್ದರಾಮಯ್ಯನವರಿಗೆ ಯಾವ ಮನೆ ಕೊಡಲಾಗಿತ್ತೋ ಅದೇ ಮನೆ ಕೊಡಿ ಎಂದು ಕೇಳಿದ್ದೇನೆ. ಅದರಲ್ಲಿ ತಪ್ಪೇನಿದೆ.

ಎರಡು ವರ್ಷ ಆದರೂ ಇದುವೆರಗೂ ವಿರೋಧ ಪಕ್ಷದ ನಾಯಕನಿಗೆ ಅಧಿಕೃತ ಸರ್ಕಾರಿ ಮನೆ ಕೊಟ್ಟಿಲ್ಲ. ಇದು ಕಾಂಗ್ರೆಸ್ ಪಕ್ಷ ಶಿಷ್ಟಾಚಾರ ಪಾಲನೆ ಮಾಡುವ ಪರಿ ಎಂದು ಟೀಕಿಸಿದ್ದಾರೆ.

ಸಿಗಂದೂರು ಸೇತುವೆ ಉಲ್ಲಂಘನೆ ಕಾರ್ಯಕ್ರಮದಲ್ಲಿ ಯಾವುದೇ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ,

ಸಿಎಂ ಸಿದ್ದರಾಮಯ್ಯ ಪ್ರಧಾನ ಮಂತ್ರಿಗಳಿಗೆ ಪತ್ರ ಬರೆದಿರುವುದು ಸರಿ ಅಲ್ಲ. ಸೇತುವೆ ನಿರ್ಮಾಣದ ಕ್ರೆಡಿಟ್ ಬಿಜೆಪಿಗೆ ಹೋಗುತ್ತಿದೆ ಎನ್ನುವ ಹತಾಶೆಯಿಂದ ಸಿಎಂ ಗೊಂದಲ ಸೃಷ್ಟಿ ಮಾಡಲು ಹೊರಟಿದ್ದಾರೆ.

ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳಿಗೆ ಆಹ್ವಾನ ಕೊಟ್ಟಿದ್ದಾರೆ, ಶಿಷ್ಟಾಚಾರದ ಪ್ರಕಾರ ಮುಖ್ಯಮಂತ್ರಿಗಳ ಹೆಸರು ಹಾಕಿದ್ದಾರೆ. ಮುಖ್ಯಮಂತ್ರಿಗಳಿಗೆ ಬೇರೆ ಪೂರ್ವ ನಿಗದಿತ ಕಾರ್ಯಕ್ರಮ ಇದ್ದರೆ, ಯಾವ ಕಾರ್ಯಕ್ರಮ ಮುಖ್ಯ, ಯಾವುದಕ್ಕೆ ಆದ್ಯತೆ ಕೊಡಬೇಕು ಅನ್ನೋದನ್ನ ಅವರೇ ನಿರ್ಧಾರ ಮಾಡಬೇಕು. ಅದು ಬಿಟ್ಟು ಮುಖ್ಯಮಂತ್ರಿಗಳನ್ನ ಕೇಳಿ ಕಾರ್ಯಕ್ರಮದ ದಿನಾಂಕ, ಸಮಯ ನಿಗದಿ ಮಾಡಬೇಕು ಅನ್ನೋದು ಸರಿಯಲ್ಲ.

ಇಷ್ಟಕ್ಕೂ ರಾಜ್ಯ ಸರ್ಕಾರ ಯಾವ್ಯಾವ ಕಾರ್ಯಕ್ರಮಗಳಿಗೆ ವಿರೋಧ ಪಕ್ಷದ ನಾಯಕರು ಹಾಗೂ ಶಾಸಕರ ಸಲಹೆ ಕೇಳಿದೆ. ಕಳೆದ ಎರಡು ವರ್ಷದಲ್ಲಿ ವಿಪಕ್ಷ ನಾಯಕನಾದ ನನಗೆ ಬೆಂಗಳೂರಿನಲ್ಲಿ ಜರುಗಿದ ಸೇರಿದಂತೆ ಯಾವ ಕಾರ್ಯಕ್ರಮಕ್ಕೂ ಸಲಹೆಯನ್ನೂ ಕೇಳಿಲ್ಲ, ಆಹ್ವಾನವನ್ನೂ ಕೊಟ್ಟಿಲ್ಲ. ರಾಜ್ಯ ಸರ್ಕಾರ ಮಾಡಿರೋದನ್ನೇ ಕೇಂದ್ರ ಸರ್ಕಾರ ಮಾಡಿದೆ.

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಸಾಗರದಲ್ಲಿ ಇದ್ದರೂ ಕಾರ್ಯಕ್ರಮಕ್ಕೆ ಹೋಗಿಲ್ಲ. ಮಾಧ್ಯಮದವರ ಮುಂದೆ ಕಾರ್ಯಕ್ರಮಕ್ಕೆ ಹೋಗುತ್ತೇನೆ ಎಂದು ಹೇಳಿ ಕಡೆ ಕ್ಷಣದಲ್ಲಿ ಗೈರು ಹಾಜರಾಗಿದ್ದಾರೆ. ಕಾಂಗ್ರೆಸ್ ಸರ್ಕಾರಕ್ಕೆ ಶಿಷ್ಟಾಚಾರ ಪಾಲನೆ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ, ಎಂದು ಹೇಳಿದ್ದಾರೆ.

ರಾಜಕೀಯ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಯುದ್ಧ ಇನ್ನೂ ಸ್ಥಗಿತಗೊಂಡಿಲ್ಲ. ಅಡುಗೆ ಅನಿಲ ಸೇರಿದಂತೆ ತೈಲ ಸಮಸ್ಯೆ ಎಲ್ಲ ದೇಶಗಳಿಗೆ ತಟ್ಟಿದೆ. ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಆರ್‌. ಅಶೋಕ (R. Ashoka)

[ccc_my_favorite_select_button post_id="121608"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ನಡೆದಿದೆ.

[ccc_my_favorite_select_button post_id="121591"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]