Protect 20 acres of land belonging to Doddaballapur Municipality

ದೊಡ್ಡಬಳ್ಳಾಪುರ ನಗರಸಭೆಗೆ ಸೇರಿದ 20 ಎಕರೆ ಜಮೀನು ರಕ್ಷಿಸಿ.. ಕರವೇ ಮನವಿ

ದೊಡ್ಡಬಳ್ಳಾಪುರ: ಪುರಸಭೆಗೆ (ಹಾಲಿ ನಗರಸಭೆ ” Municipal Council”) ಸೇರಿರುವ ಸರ್ವೇ ನಂ. 112ರ 20.00 ಎಕರೆ ಜಾಮೀನು ಪುರಸಭೆ ಎಂದು ನಮೂದಾಗಿದ್ದು ಕೂಡಲೇ ಈ ಸ್ವತ್ತನ್ನು ರಕ್ಷಿಸಿಕೊಳ್ಳುವಂತೆ ಕನ್ನಡಿಗರ ಕರ್ನಾಟಕ ರಕ್ಷಣಾ ವೇದಿಕೆ ಒತ್ತಾಯಿಸಿದೆ.

ಈ ಕುರಿತಂತೆ ಇಂದು ನಗರಸಭೆ ಪೌರಾಯುಕ್ತ ಕಾರ್ತೀಕ್ ಈಶ್ವರ್ ಅವರಿಗೆ ಮನವಿ ಸಲ್ಲಿಸಿ ಮಾತನಾಡಿದ ಕನ್ನಡಿಗರ ಕರ್ನಾಟಕ ರಕ್ಷಣಾ ವೇದಿಕೆ ಸಂಸ್ಥಾಪಕ ಅಧ್ಯಕ್ಷ ಬಿ.ಎಸ್. ಚಂದ್ರಶೇಖರ್, ದೊಡ್ಡಬಳ್ಳಾಪುರ ನಗರಸಭೆಯ ಪಕ್ಕದಲ್ಲೇ ಇರುವ 20 ಎಕರೆ ಜಾಗವು ಪುರಸಭೆಗೆ ಸೇರಿದ್ದು ಎಂದು ದಾಖಲಾತಿಗಳು ತಿಳಿಸುತ್ತವೆಯಾದರೂ ಮೇಲ್ನೋಟಕ್ಕೆ ಪುರಸಭೆಯ ಜಾಗವೆಂದು ಭಾಸವಾಗುತ್ತಿಲ್ಲ.

ದೊಡ್ಡಬಳ್ಳಾಪುರ ನಗರ ವೇಗದಲ್ಲಿ ಬೆಳೆಯುತ್ತಿದ್ದು, ಮುಂದಿನ ದಿನಗಳಲ್ಲಿ ಬಹಳಷ್ಟು ವಿಚಾರಗಳಿಗೆ ಈ ನಗರವು ಕೇಂದ್ರಬಿಂದುವಾಗುವ ಎಲ್ಲಾ ಲಕ್ಷಣಗಳು ಕಂಡುಬರುತ್ತಿದೆ.

ಹಾಗೆಯೇ ಇದೀಗ ನಮ್ಮ ಜಿಲ್ಲೆಯು ಬೆಂಗಳೂರು ಉತ್ತರ ಎಂದು ಘೋಷಣೆಯಾಗಿರುವ ಬೆನ್ನಲ್ಲೇ ನಮ್ಮ ನಗರಸಭೆ ಗ್ರೇಡ್ 1ಗೆ ಮುಂಬಡ್ತಿಯಾಗಿದೆ. ಹಾಗಾಗಿ ಹೆಚ್ಚಿನ ಕಾರ್ಯಗಳು ನಗರಸಭೆ ಹಾಗೂ ಪುರಸಭೆಯ ತೆಕ್ಕೆಗೆ ಬೀಳುವ ಕಾರಣ ಹೆಚ್ಚಿನ ಜಾಗದ ಹಾಗೂ ಕಟ್ಟಡ ಹಾಗೂ ಮೂಲಸೌಕರ್ಯಗಳ ಅವಶ್ಯಕತೆ ಹೆಚ್ಚುತ್ತದೆ.

ಆದ್ದರಿಂದ ಈಗಾಗಲೇ ಪುರಸಭೆಯ ಹೆಸರಿನಲ್ಲಿರುವ ಹಾಗೂ ನಗರಸಭೆಗೆ ಹೊಂದಿಕೊಂಡಂತೆಯೇ ಇರುವ ಈ 20 ಎಕರೆ ಜಾಗವನ್ನು ಅಳತೆ ಮಾಡಿಸಿ ಪುರಸಭೆಯ ಸುಪರ್ದಿಗೆ ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದರು.

ಅಲ್ಲದೆ ಸರ್ಕಾರಿ ಸೌಕರ್ಯಗಳನ್ನು ನೀಡುವುದರ ಜೊತೆಯಲ್ಲಿ ಈ ಜಾಗದಲ್ಲಿ ಒಂದು ಫುಡ್ ಕೋರ್ಟ್ ಅನ್ನು ನಿರ್ಮಿಸಿದ್ದಲ್ಲಿ, ಬಹಳಷ್ಟು ವ್ಯಾಪಾರಿಗಳಿಗೆ ಹಾಗೂ ಜನಸಾಮಾನ್ಯರಿಗೆ ಅನೂಕೂಲವಾಗುತ್ತದೆ. ಆದ್ದರಿಂದ ಫುಡ್ ಕೋರ್ಟ್ ನಿರ್ಮಿಸುವ ವಿಷಯನ್ನು ಮನ್ನಣೆಗೆ ತೆಗೆದುಕೊಳ್ಳಬೇಕೆಂದು ಹೇಳಿದರು.

ಭಗತ್ ಸಿಂಗ್ ಕ್ರೀಡಾಂಗಣದ ಸಮೀಪದ ಹೊಸ ಬಸ್ ನಿಲ್ದಾಣ, KSRTC ಬಸ್ ಡಿಪೋ, ಟಿಎಪಿಎಂಸಿಎಸ್ ಕಚೇರಿ 112 ಸರ್ವೆ ನಂಬರ್ಗೆ ಸೇರಿದ್ದು, ಈ ವ್ಯಾಪ್ತಿಯಲ್ಲಿ 20 ಎಕರೆ ಪುರಸಭೆಗೆ ಸೇರಿರುತ್ತದೆ.

ಈ ಜಾಗವನ್ನು ಕೂಡಲೇ ರಕ್ಷಿಸಿ ನಗರಸಭೆಗೆ ಸೇರಿಸಿಕೊಳ್ಳಬೇಕು ಎಂದು ಚಂದ್ರಶೇಖರ್ ಒತ್ತಾಯಿಸಿದ್ದಾರೆ‌.

ಈ ವೇಳೆ ಕನ್ನಡಿಗರ ಕರ್ನಾಟಕ ರಕ್ಷಣಾ ವೇದಿಕೆಯ ತಾಲ್ಲೂಕು ಅಧ್ಯಕ್ಷ ವಿನಯ್ ಆರಾಧ್ಯ, ಪ್ರಧಾನ ಕಾರ್ಯದರ್ಶಿ ಉದಯ್ ಕುಮಾರ್, ಸಂಘಟನಾ ಕಾರ್ಯದರ್ಶಿ ಶಿವಾನಂದ್, ಸುರೇಶ್, ಪ್ರಶಾಂತ್ ಇದ್ದರು.

ರಾಜಕೀಯ

ರಣದೀಪ್ ಸುರ್ಜೇವಾಲ ಕರ್ನಾಟಕದ ಸೂಪರ್ ಸಿಎಂ: ನಿಖಿಲ್ ಕುಮಾರಸ್ವಾಮಿ ಟೀಕೆ

ರಣದೀಪ್ ಸುರ್ಜೇವಾಲ ಕರ್ನಾಟಕದ ಸೂಪರ್ ಸಿಎಂ: ನಿಖಿಲ್ ಕುಮಾರಸ್ವಾಮಿ ಟೀಕೆ

ಬೆಂಗಳೂರು: ಕರ್ನಾಟಕದ ಸೂಪರ್ ಸಿಎಂ ಆಗಿ ಅಧಿಕಾರ ವಹಿಸಿಕೊಂಡಿರುವ ರಣದೀಪ್ ಸುರ್ಜೇವಾಲ (Randeep Surjewala) ಅವರಿಗೆ ಅಭಿನಂದನೆಗಳು ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="111193"]
ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಿ: ಬಿ.ವೈ.ವಿಜಯೇಂದ್ರ

ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಿ: ಬಿ.ವೈ.ವಿಜಯೇಂದ್ರ

ಸಿದ್ದರಾಮಯ್ಯನವರು ಮತ್ತು ಕಾಂಗ್ರೆಸ್ ಪಕ್ಷದ ವರಿಷ್ಠರನ್ನು ಪ್ರಶ್ನಿಸಲು ಬಯಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ (B.Y. Vijayendra) ಅವರು ತಿಳಿಸಿದ್ದಾರೆ.

[ccc_my_favorite_select_button post_id="111198"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಪೊಲೀಸ್ ಹೆಡ್ ಕಾನ್ಸ್ಟೆಬಲ್ ಆತ್ಮಹತ್ಯೆ..!

ಪೊಲೀಸ್ ಹೆಡ್ ಕಾನ್ಸ್ಟೆಬಲ್ ಆತ್ಮಹತ್ಯೆ..!

ಪೊಲೀಸ್ ಠಾಣೆ ಆವರಣದಲ್ಲಿರುವ ರೆಸ್ಟ್ ರೂಮ್ ನಲ್ಲಿ ಹೆಡ್ ಕಾನ್ಸ್ಟೇಬಲ್ ಒಬ್ಬರು ಆತ್ಮಹತ್ಯೆಗೆ ಶರಣಾಗಿರುವ (Suicide) ಘಟನೆ

[ccc_my_favorite_select_button post_id="111207"]
FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

ಸುಮಾರು 35 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯೋರ್ವ ರೈಲಿಗೆ ಸಿಲುಕಿ ಸಾವನಪ್ಪಿರುವ (Dies) ಘಟನೆ ದೊಡ್ಡಬಳ್ಳಾಪುರ- ರಾಜಾನುಕುಂಟೆ ನಡುವಿನ ***

[ccc_my_favorite_select_button post_id="111089"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!