ಬೆಂ.ಗ್ರಾ.ಜಿಲ್ಲೆ: ಕೃಷಿ ಇಲಾಖೆ ವತಿಯಿಂದ 2025-26 ನೇ ಸಾಲಿನಲ್ಲಿ ರಾಜ್ಯದಲ್ಲಿ ಕೃಷಿ ಬೆಳೆಗಳ ಕಟಾವು ಕಾರ್ಯಕ್ಕೆ ಹೈಟೆಕ್ ಕಟಾವು ಯಂತ್ರಗಳನ್ನು (High-tech harvesting machine) ಸಮಯಕ್ಕೆ ಸರಿಯಾಗಿ ಎಲ್ಲಾ ವರ್ಗದ ರೈತರಿಗೆ ಬಾಡಿಗೆ ಆಧಾರದಲ್ಲಿ ಒದಗಿಸುವ ನಿಟ್ಟಿನಲ್ಲಿ ಹೈಟೆಕ್ ಹಾರ್ವೆಸ್ಟರ್ ಹಬ್ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ.
ಹೈಟೆಕ್ ಹಾರ್ವೆಸ್ಟರ್ ಹಬ್‌ಗಳನ್ನು ಅನುಷ್ಠಾನ ಮಾಡಲು ವೈಯಕ್ತಿಕ ಫಲಾನುಭವಿಗಳು (Individual) ಭಾಗವಹಿಸಬಹುದಾಗಿರುತ್ತದೆ ಹಾಗು ಸಾಮಾನ್ಯ ವರ್ಗದ ರೈತರಿಗೆ ಗರಿಷ್ಠ ಶೇ.50ರಂತೆ ಹಾಗು ಪ.ಜಾ/ಪ.ಪಂ. ವರ್ಗದ ರೈತರಿಗೆ ಗರಿಷ್ಠ ಶೇ.70 ರಂತೆ ಸಹಾಯಧನವನ್ನು ನೀಡಲಾಗುವುದು.
ಕಂಬೈನ್ಸ್ ಹಾರ್ವೆಸ್ಟರ್ ಹಬ್ ನಲ್ಲಿ ಕಂಬೈನ್ಸ್ ಹಾರ್ವೆಸ್ಟರ್ ರೊಂದಿಗೆ Tractor operated Baler ಉಪಕರಣಗಳನ್ನು ದಾಸ್ತಾನೀಕರಿಸುವುದು ಕಡ್ಡಾಯವಾಗಿರುತ್ತದೆ.
ಹೈಟೆಕ್ ಹಾರ್ವೆಸ್ಪರ್ ಹಬ್‌ಗಳಲ್ಲಿ ದಾಸ್ತಾನೀಕರಿಸುವ ಯಂತ್ರೋಪಕರಣಗಳನ್ನು ಬಾಡಿಗೆ ಆಧಾರದ ಮೇಲೆ Corridor ನಲ್ಲಿ ಬರುವ ರೈತರಿಗೆ ಒದಗಿಸಲಾಗುವುದು.
ಆಯ್ಕೆಯಾದ ಫಲಾನುಭವಿಗಳು ಕೃಷಿ ಮೂಲಭೂತ ಸೌಕರ್ಯ ನಿಧಿ (AlF-Agricultural infrastructure Fund) ಸಾಲದ ನೆರವನ್ನು ಪಡೆಯಲು ಸಹ ಅವಕಾಶವಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರಗಳು, ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿ, ಉಪ ಕೃಷಿ ನಿರ್ದೇಶಕರ ಕಛೇರಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಹಾಗೂ ಜಂಟಿ ಕೃಷಿ ನಿರ್ದೇಶಕರ ಕಛೇರಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕಛೇರಿಗಳನ್ನು ಸಂಪರ್ಕಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.