ನವದೆಹಲಿ: ಕರ್ನಾಟಕ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು (Congress Guarantee Scheme) ವಿರೋಧಿಸುತ್ತಲೇ ಇರುವ ವಿರೋಧ ಪಕ್ಷಗಳು, ಸದ್ದಿಲ್ಲದೆ ತಮ್ಮ ಚುನಾವಣೆ ಲಾಭಕ್ಕಾಗಿ ಗ್ಯಾರಂಟಿ ಯೋಜನೆಗಳನ್ನು ಒಂದೊಂದಾಗಿ ಅಳವಡಿಸಿಕೊಳ್ಳುತ್ತಿವೆ.
ಅದರಲ್ಲಿಯೂ ಕಾಂಗ್ರೆಸ್‌ನ ಪ್ರಮುಖ ವಿರೋಧ ಪಕ್ಷವಾದ ಬಿಜೆಪಿ, ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳಿಂದ ರಾಜ್ಯ ದಿವಾಳಿಯಾಗುತ್ತದೆ ಎಂದು ಖಂಡಿಸಿತ್ತು. ಆದರೆ ಕಳೆದ ಚುನಾವಣೆಯಲ್ಲಿ ಮೋದಿಕಿ ಗ್ಯಾರಂಟಿ ಘೋಷಿಸಿ ಮುಜುಗರಕ್ಕೀಡಾಗಿತ್ತು. ಈಗ ಸರದಿ ಅದರ ಮಿತ್ರ ಪಕ್ಷ ಜೆಡಿಯುದ್ದಾಗಿದೆ.
ಹೌದು ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲೊಂದಾದ ಗೃಹ ಜ್ಯೂತಿ ಯೋಜನೆ ಉಚಿತ ವಿದ್ಯುತ್ ಸೌಲಭ್ಯವನ್ನು ಜೆಡಿಯು ಘೋಷಿಸಿದೆ.
ಈ ಕುರಿತಂತೆ ಪಕ್ಷದ ಮುಖ್ಯಸ್ಥ ನಿತೀಶ್ ಕುಮಾರ್ ಈ ಕುರಿತಂತೆ ಟ್ವಿಟ್ ಮಾಡಿದ್ದು, ನಾವು ಆರಂಭದಿಂದಲೂ ಎಲ್ಲರಿಗೂ ಕೈಗೆಟುಕುವ ದರದಲ್ಲಿ ವಿದ್ಯುತ್ ಒದಗಿಸುತ್ತಿದ್ದೇವೆ. ಈಗ ನಾವು ಆಗಸ್ಟ್ 1, 2025 ರಿಂದ, ಅಂದರೆ ಜುಲೈ ಬಿಲ್‌ನಿಂದ, ರಾಜ್ಯದ ಎಲ್ಲಾ ಗೃಹಬಳಕೆದಾರರು 125 ಯೂನಿಟ್‌ಗಳವರೆಗಿನ ವಿದ್ಯುತ್‌ಗೆ ಹಣ ಪಾವತಿಸಬೇಕಾಗಿಲ್ಲ ಎಂದು ನಿರ್ಧರಿಸಿದ್ದೇವೆ.
हमलोग शुरू से ही सस्ती दरों पर सभी को बिजली उपलब्ध करा रहे हैं। अब हमने तय कर दिया है कि 1 अगस्त, 2025 से यानी जुलाई माह के बिल से ही राज्य के सभी घरेलू उपभोक्ताओं को 125 यूनिट तक बिजली का कोई पैसा नहीं देना पड़ेगा। इससे राज्य के कुल 1 करोड़ 67 लाख परिवारों को लाभ होगा। हमने यह…
— Nitish Kumar (@NitishKumar) July 17, 2025
ಇದು ರಾಜ್ಯದ ಒಟ್ಟು 1 ಕೋಟಿ 67 ಲಕ್ಷ ಕುಟುಂಬಗಳಿಗೆ ಪ್ರಯೋಜನವನ್ನು ನೀಡುತ್ತದೆ. ಮುಂದಿನ ಮೂರು ವರ್ಷಗಳಲ್ಲಿ, ಈ ಎಲ್ಲಾ ಗೃಹಬಳಕೆದಾರರು ಅವರ ಒಪ್ಪಿಗೆಯನ್ನು ಪಡೆದು ತಮ್ಮ ಮನೆಗಳ ಛಾವಣಿಯ ಮೇಲೆ ಅಥವಾ ಹತ್ತಿರದ ಸಾರ್ವಜನಿಕ ಸ್ಥಳದಲ್ಲಿ ಸೌರ ವಿದ್ಯುತ್ ಸ್ಥಾವರಗಳನ್ನು ಸ್ಥಾಪಿಸುವ ಮೂಲಕ ಪ್ರಯೋಜನ ಪಡೆಯಬೇಕೆಂದು ನಾವು ನಿರ್ಧರಿಸಿದ್ದೇವೆ.
ಕುಟೀರ ಜ್ಯೋತಿ ಯೋಜನೆಯಡಿಯಲ್ಲಿ, ರಾಜ್ಯ ಸರ್ಕಾರವು ಅತ್ಯಂತ ಬಡ ಕುಟುಂಬಗಳಿಗೆ ಸೌರ ವಿದ್ಯುತ್ ಸ್ಥಾವರಗಳನ್ನು ಸ್ಥಾಪಿಸುವ ಸಂಪೂರ್ಣ ವೆಚ್ಚವನ್ನು ಭರಿಸುತ್ತದೆ ಮತ್ತು ಉಳಿದ ಮೊತ್ತಕ್ಕೆ ಸಾಕಷ್ಟು ಬೆಂಬಲವನ್ನು ನೀಡುತ್ತದೆ.
ಇದರಿಂದಾಗಿ, ಗೃಹಬಳಕೆಯ ಗ್ರಾಹಕರು ಈಗ 125 ಯೂನಿಟ್ ವಿದ್ಯುತ್‌ಗೆ ಏನನ್ನೂ ಖರ್ಚು ಮಾಡಬೇಕಾಗಿಲ್ಲ ಮತ್ತು ಅಂದಾಜಿನ ಪ್ರಕಾರ, ಮುಂದಿನ ಮೂರು ವರ್ಷಗಳಲ್ಲಿ ರಾಜ್ಯದಲ್ಲಿ 10 ಸಾವಿರ ಮೆಗಾವ್ಯಾಟ್‌ಗಳಷ್ಟು ಸೌರಶಕ್ತಿ ಲಭ್ಯವಿರುತ್ತದೆ ಎಂದಿದ್ದಾರೆ.