ಕಾರ್ಕಳ: ಬಿಜೆಪಿ ಶಾಸಕ ಸುನಿಲ್ ಕುಮಾರ್‌ಗೆ (Sunil Kumar) ಪಿತೃ ವಿಯೋಗವಾಗಿದೆ. ಅವರ ತಂದೆ ಕೆ.ಎಂ. ವಾಸುದೇವ ಅವರು ಜು.17ರ ಗುರುವಾರ ಮುಂಜಾನೆ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಅವರಿಗೆ 87 ವರ್ಷ ವಯಸ್ಸಾಗಿತ್ತು.
ಕಳೆದ ಅನೇಕ ತಿಂಗಳಿಂದ ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಇತ್ತೀಚೆಗಷ್ಟೇ ಮಣಿಪಾಲ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ತೀವ್ರ ನಿಗಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.
ಮೃತರು ಪತ್ನಿ, ಪುತ್ರ ಶಾಸಕ ಸುನಿಲ್ ಕುಮಾರ್ ಹಾಗೂ ಓರ್ವ ಪುತ್ರಿ ಸೇರಿದಂತೆ ಅಪಾರ ಬಂದು ವರ್ಗವನ್ನು ಅಗಲಿದ್ದಾರೆ.
ಗುರುವಾರ ಸಂಜೆ ಅಥವಾ ಶುಕ್ರವಾರ ಮಧ್ಯಾಹ್ನ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಇನ್ನು, ಸುನಿಲ್ ಕುಮಾರ್ ತಂದೆ ವಾಸುದೇವ ಅವರ ಪಾರ್ಥಿವ ಶರೀರವನ್ನು ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ಇಡಲಾಗಿದೆ. ನೂರಾರು ಜನ ಬಿಜೆಪಿ ಕಾರ್ಯಕರ್ತರು ಹಾಗೂ ಅಭಿಮಾನಿಗಳು ವಾಸುದೇವ ಅವರಿಗೆ ಅಂತಿಮ ನಮನ ಸಲ್ಲಿಸಿದ್ದಾರೆ.