There is no dissenting activity in the state BJP: Basavaraj Bommai

ರಾಜ್ಯ ಬಿಜೆಪಿಯಲ್ಲಿ ಯಾವುದೇ ಭಿನ್ನಮತಿಯ ಚಟುವಟಿಕೆ ಇಲ್ಲ: ಬಸವರಾಜ ಬೊಮ್ಮಾಯಿ

ಗದಗ: ದಲಿತರು ಮತ್ತು ಹಿಂದುಳಿದವರ ಅಭಿವೃದ್ದಿ ಕೇವಲ ಬಾಯಿ ಮಾತಿನ ಘೋಷಣೆಯಿಂದ ಆಗುವುದಿಲ್ಲ. ಸಿಎಂ ಸಿದ್ದರಾಮಯ್ಯ ಅವರು ಕೇವಲ ಘೋಷಣೆಯಿಂದ ಹೊಟ್ಟೆ ತುಂಬುತ್ತದೆ ಎಂದು ತಿಳಿದುಕೊಂಡಿದ್ದಾರೆ. ಆ ಸಮುದಾಯಗಳಿಗೆ ಮೀಸಲಿಟ್ಟ ಹಣವನ್ನು ಸರಿಯಾಗಿ ನೀಡಲಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ (Basavaraj Bommai) ಆಗ್ರಹಿಸಿದರು.

ಗದಗನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಲಿತರ ಬಗ್ಗೆ ಬಹಳ ಮಾತನಾಡುತ್ತಾರೆ. ಅವರು ಎಸ್ಸಿ ಎಸ್ಟಿಗೆ ಮೀಸಲಿಟ್ಟ ಹಣವನ್ನು ಸರಿಯಾಗಿ ಕೊಟ್ಡರೆ ಸಾಕು. ಅದೇ ರೀತಿ ಹಿಂದುಳಿದವರ ಯೋಜನೆಗಳಿಗೆ ಟಾರ್ಗೆಟ್ ಕೊಟ್ಟಿಲ್ಲ. ಎಂಟು ಒಬಿಸಿ ನಿಗಮಗಳಿವೆ ಅವುಗಳಿಗೆ ಹಣವನ್ನೇ ನೀಡಿಲ್ಲ.

ಒಬಿಸಿಯನ್ನು ಉದ್ದಾರ ಮಾಡುತ್ತೇವೆ ಎನ್ನುತ್ತಾರೆ. ಇರುವ ಯೋಜನೆಗಳಿಗೆ ಹಣ ಕೊಡುವುದಿಲ್ಲ. ದಲಿತರ ಯೋಜನೆಗಳಿಗೆ ಮೀಸಲಿಟ್ಟ ಹಣವನ್ನು ಕಡಿತ ಮಾಡುತ್ತಾರೆ. ಇದರ ಬಗ್ಗೆ ಮುಖ್ಯಮಂತ್ರಿ ‌ಚರ್ಚೆ ಮಾಡಲಿ, ಯಾರೋ ಅಧ್ಯಕ್ಷರಾಗುವುದರಿಂದ ಏನೂ ಆಗುವುದಿಲ್ಲ. ಆ ಜನಾಂಗ ಅಭಿವೃದ್ಧಿ ಆಗಬೇಕು.

ಜನಾಂಗ ಅಭಿವೃದ್ಧಿ ಆಗಬೇಕೆಂದರೆ ಅವರಿಗೆ ಯೋಜನೆಗಳು ತಲುಪಬೇಕು. ಕೇವಲ ಬಾಯಿ ಮಾತಿನಿಂದ ಘೋಷಣೆಯಿಂದ ಏನೂ ಆಗುವುದಿಲ್ಲ. ಸಿಎಂ ಸಿದ್ದರಾಮಯ್ಯ ಅವರು ಕೇವಲ ಘೋಷಣೆಯಿಂದ ಹೊಟ್ಟೆ ತುಂಬುತ್ತದೆ ಎಂದು ತಿಳಿದುಕೊಂಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ರಾಜ್ಯ ಬಿಜೆಪಿಯಲ್ಲಿ ಭಿನ್ನಮತವಿದೆಯಾ ಎಂದು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ರಾಜ್ಯ ಬಿಜೆಪಿಯಲ್ಲಿ ಯಾವುದೇ ಭಿನ್ನಮತಿಯ ಚಟುವಟಿಕೆ ಇಲ್ಲ. ಪಕ್ಷದ ವರಿಷ್ಠರಿಗೆ ಎಲ್ಲವೂ ಗೊತ್ತಿದೆ ಅವರು ತೀರ್ಮಾನ ಮಾಡುತ್ತಾರೆ ಎಂದರು.

ಏಜೆಂಟರ ಹಾವಳಿಗೆ ತಡೆ

ರೈತರ ಬೆಳೆ ವಿಮೆ ಮಾಡಿಸುವ ಹೆಸರಿನಲ್ಲಿ ಏಜೆಂಟರ್ ಹಾವಳಿ ಹೆಚ್ಚಾಗಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ಈಗಾಗಲೇ ಜಿಲ್ಲಾಧಿಕಾರಿಗಳು ಸಭೆ ನಡೆಸಿದ್ದಾರೆ. ಬೆಳೆ ವಿಮೆ ಪಡೆಯಲು ಶೇ 20% ಬೋಗಸ್ ಫಲಾನುಭವಿಗಳು ಇರುತ್ತಿದ್ದರು ಅದನ್ನು ಈ ವರ್ಷ ತಡೆಯಲು ಸೂಚನೆ ನೀಡಿದ್ದೇನೆ ಎಂದರು.

ರೈತರಿಗೆ ಬೆಳೆ ಸಾಲ ಹೆಚ್ಚಿನ ಪ್ರಮಾಣದಲ್ಲಿ ನೀಡಬೇಕು. ಎಕರೆವಾರು ನೀಡುವ ಸಾಲದ ಪ್ರಮಾಣ ಹೆಚ್ಚಾಗಬೇಕು. ಸಹಕಾರಿ ಬ್ಯಾಂಕ್ ಗಳ ಮೂಲಕ ಸಾಲ ಪಡೆಯದೇ ಹೊರಗುಳಿದವರನ್ನು ಸಹಕಾರಿ ವ್ಯವಸ್ಥೆಯ ವ್ಯಾಪ್ತಿಗೆ ತಂದು ಸಾಲ ನೀಡಬೇಕು.

ರೈತರಿಗೆ ಸಾಲ ಕೊಡುವಾಗ ಸಿಬಿಲ್ ಮಾನದಂಡ ಅನ್ವಯಿಸಬಾರದು ಎನ್ನುವುದು ನಮ್ಮ ಚಿಂತನೆ ಇದೆ. ಇದನ್ನು ರಾಷ್ಟ ಮಟ್ಟದಲ್ಲಿಯೇ ಮಾಡಲು ಪ್ರಯತ್ನಿಸಲಾಗುವುದು ಎಂದು ಹೇಳಿದರು.

ರಾಜಕೀಯ

ರಾಜ್ಯ ಬಿಜೆಪಿಯಲ್ಲಿ ಯಾವುದೇ ಭಿನ್ನಮತಿಯ ಚಟುವಟಿಕೆ ಇಲ್ಲ: ಬಸವರಾಜ ಬೊಮ್ಮಾಯಿ

ರಾಜ್ಯ ಬಿಜೆಪಿಯಲ್ಲಿ ಯಾವುದೇ ಭಿನ್ನಮತಿಯ ಚಟುವಟಿಕೆ ಇಲ್ಲ: ಬಸವರಾಜ ಬೊಮ್ಮಾಯಿ

ರಾಜ್ಯ ಬಿಜೆಪಿಯಲ್ಲಿ ಭಿನ್ನಮತವಿದೆಯಾ ಎಂದು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ರಾಜ್ಯ ಬಿಜೆಪಿಯಲ್ಲಿ ಯಾವುದೇ ಭಿನ್ನಮತಿಯ ಚಟುವಟಿಕೆ ಇಲ್ಲ: Basavaraj Bommai

[ccc_my_favorite_select_button post_id="111273"]
ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಿ: ಬಿ.ವೈ.ವಿಜಯೇಂದ್ರ

ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಿ: ಬಿ.ವೈ.ವಿಜಯೇಂದ್ರ

ಸಿದ್ದರಾಮಯ್ಯನವರು ಮತ್ತು ಕಾಂಗ್ರೆಸ್ ಪಕ್ಷದ ವರಿಷ್ಠರನ್ನು ಪ್ರಶ್ನಿಸಲು ಬಯಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ (B.Y. Vijayendra) ಅವರು ತಿಳಿಸಿದ್ದಾರೆ.

[ccc_my_favorite_select_button post_id="111198"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಪೊಲೀಸ್ ಹೆಡ್ ಕಾನ್ಸ್ಟೆಬಲ್ ಆತ್ಮಹತ್ಯೆ..!

ಪೊಲೀಸ್ ಹೆಡ್ ಕಾನ್ಸ್ಟೆಬಲ್ ಆತ್ಮಹತ್ಯೆ..!

ಪೊಲೀಸ್ ಠಾಣೆ ಆವರಣದಲ್ಲಿರುವ ರೆಸ್ಟ್ ರೂಮ್ ನಲ್ಲಿ ಹೆಡ್ ಕಾನ್ಸ್ಟೇಬಲ್ ಒಬ್ಬರು ಆತ್ಮಹತ್ಯೆಗೆ ಶರಣಾಗಿರುವ (Suicide) ಘಟನೆ

[ccc_my_favorite_select_button post_id="111207"]
Accident; ರಾಷ್ಟ್ರೀಯ ಹೆದ್ದಾರಿಯಲ್ಲಿ ಮಗುಚಿ ಬಿದ್ದ ಲಾರಿ.. ಮಾವಿನ ಕಾಯಿಗಾಗಿ ಮುಗಿಬಿದ್ದ ಜನ

Accident; ರಾಷ್ಟ್ರೀಯ ಹೆದ್ದಾರಿಯಲ್ಲಿ ಮಗುಚಿ ಬಿದ್ದ ಲಾರಿ.. ಮಾವಿನ ಕಾಯಿಗಾಗಿ ಮುಗಿಬಿದ್ದ ಜನ

ಮಾವಿನ ಕಾಯಿ ತುಂಬಿಕೊಂಡು ಸಾಗುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪೊ ಮಗುಚಿ ಬಿದ್ದಿರುವ ಘಟನೆ (Accident)

[ccc_my_favorite_select_button post_id="111232"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!