Siddaramaiah CM conference to retain chair: Opposition Leader R. Ashoka

ಕುರ್ಚಿ ಉಳಿಸಿಕೊಳ್ಳಲು ಸಿಎಂ ಸಿದ್ದರಾಮಯ್ಯ ಸಮಾವೇಶ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಬೆಂಗಳೂರು: ಸಿಎಂ ಸಿದ್ದರಾಮಯ್ಯ (Cmsiddaramaiah) ಕುರ್ಚಿ ಉಳಿಸಿಕೊಳ್ಳಲು ಸಮಾವೇಶ ನಡೆಸುತ್ತಿದ್ದಾರೆ. ಸಾಧನಾ ಸಮಾವೇಶ ಆದ ನಂತರ ಇದು ಸಿಎಂ ಅಳಿವು-ಉಳಿವಿನ ಸಮಾವೇಶವಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R. Ashoka) ಟೀಕಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆರಂಭದಿಂದಲೂ ಮುಖ್ಯಮಂತ್ರಿ ಬದಲಾಗುತ್ತಾರೆ ಎಂದು ಹೇಳುತ್ತಲೇ ಇದ್ದಿದ್ದರಿಂದ ಯಾವಾಗಲೂ ಸರ್ಕಾರವನ್ನು ಅಸ್ಥಿರತೆ ಕಾಡುತ್ತಿದೆ. ಈ ಸಮಾವೇಶದಿಂದ ಜನರಿಗೆ ಯಾವುದೇ ಉಪಯೋಗವಿಲ್ಲ.

ವಾಲ್ಮೀಕಿ ನಿಗಮದಲ್ಲಿ ಹಗರಣ, 2,500 ರೈತರ ಆತ್ಮಹತ್ಯೆ 1200 ನವಜಾತ ಶಿಶುಗಳ ಸಾವು, ಬಾಣಂತಿಯರ ಸಾವು, ಹತ್ತಕ್ಕೂ ಅಧಿಕ ಗುತ್ತಿಗೆದಾರರು ಹಾಗೂ ಅಧಿಕಾರಿಗಳ ಆತ್ಮಹತ್ಯೆ, ಆರ್‌ಸಿಬಿ ಸಂಭ್ರಮಾಚರಣೆ ವೇಳೆ 11 ಸಾವು, ಇಂತಹ ಘಟನೆಗಳನ್ನು ಸಂಭ್ರಮಿಸಲು ಸಮಾವೇಶ ಮಾಡಲಾಗುತ್ತಿದೆಯೇ ಎಂದು ಪ್ರಶ್ನಿಸಿದರು.

ಆರ್‌ಸಿಬಿ ಕಾರ್ಯಕ್ರಮ ಸರ್ಕಾರದ ವತಿಯಿಂದ ನಡೆದಿಲ್ಲ ಎಂದು ಬಿಂಬಿಸಲಾಗುತ್ತಿದೆ. ಆದರೆ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಈ ಕಾರ್ಯಕ್ರಮದಲ್ಲಿ ಮುಂಚೂಣಿಯಲ್ಲಿದ್ದರು.

ಸಿಐಡಿ ಹಾಗೂ ನ್ಯಾ.ಡಿಕುನ್ಹ ನೇತೃತ್ವದಲ್ಲಿ ನಡೆದ ತನಿಖೆಯಲ್ಲಿ ಸರ್ಕಾರದ ಪಾತ್ರದ ಬಗ್ಗೆ ಹೇಳದೆ, ಪೊಲೀಸರ ಮೇಲೆ ಆರೋಪ ಮಾಡಲಾಗಿದೆ. ಪೊಲೀಸರಿಗೆ ಆದೇಶ ಕೊಟ್ಟ ಸರ್ಕಾರದ ತಪ್ಪಿನ ಬಗ್ಗೆ ಎಲ್ಲೂ ಹೇಳಿಲ್ಲ. ಇಂತಹ ಸಮಯದಲ್ಲಿ ಸಮಾವೇಶ ನಡೆಸಲಾಗುತ್ತಿದೆ. ಇದೇ ರೀತಿ ಡಿ.ಕೆ.ಶಿವಕುಮಾರ್‌ ಕನಕಪುರದಲ್ಲಿ ಸಮಾವೇಶ ನಡೆಸಿದರೆ ಆಗ ಯಾರ ಬಲ ಹೆಚ್ಚಿದೆ ಎಂದು ತೀರ್ಮಾನಿಸಬಹುದು. ಇಲ್ಲಿ ಪರಸ್ಪರ ಸ್ಪರ್ಧೆ ನಡೆಯುತ್ತಿದೆ ಎಂದರು.

ತನಿಖಾ ಆಯೋಗಗಳನ್ನು ನೇಮಕ ಮಾಡುವಾಗ ಪದೇ ಪದೆ ಇಬ್ಬರನ್ನೇ ನೇಮಕ ಮಾಡಲಾಗುತ್ತದೆ. ಇದರಿಂದಾಗಿ ಜನರಿಗೆ ಸರ್ಕಾರದ ಮೇಲೆ ನಂಬಿಕೆ ಹೋಗಿದೆ.

ವಿರೋಧ ಪಕ್ಷದ ಶಾಸಕರಾದ ಬೈರತಿ ಬಸವರಾಜ್‌ ಅವರನ್ನು ಬಗ್ಗುಬಡಿಯಲು ಪೊಲೀಸರೇ ಎಫ್‌ಐಆರ್‌ನಲ್ಲಿ ಅವರ ಹೆಸರು ಬರೆದಿದ್ದಾರೆ. ದೂರು ಕೊಟ್ಟ ಮಹಿಳೆಯೇ ಮುಂದೆ ಬಂದು ಶಾಸಕರ ಹೆಸರನ್ನು ಹೇಳಿಲ್ಲ ಎಂದಿದ್ದಾರೆ. ಆದರೂ ಸರ್ಕಾರದ ದ್ವೇಷ ಸಾಧಿಸುತ್ತಿದೆ ಎಂದರು.

ಅಭಿವೃದ್ಧಿ ಕಾರ್ಯಗಳಿಲ್ಲ

ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯ ನಡೆಯುತ್ತಿಲ್ಲ ಎಂದು ಕಾಂಗ್ರೆಸ್‌ ಶಾಸಕರೇ ಹೇಳಿದ್ದಾರೆ. ಇಂತಹ ಸಮಯದಲ್ಲಿ ಕಾಂಗ್ರೆಸ್‌ ಶಾಸಕರ ಕ್ಷೇತ್ರಕ್ಕೆ 50 ಕೋಟಿ ರೂ. ಹಾಗೂ ಬಿಜೆಪಿ-ಜೆಡಿಎಸ್‌ ಕ್ಷೇತ್ರಕ್ಕೆ 25 ಕೋಟಿ ರೂ. ನೀಡಲಾಗುವುದೆಂದು ಹೇಳಿದ್ದಾರೆ. ಈ ರೀತಿ ತಾರತಮ್ಯ ಮಾಡಿ, ಕೇಂದ್ರದ ಮೇಲೆ ತಾರತಮ್ಯದ ಆರೋಪ ಹೊರಿಸುತ್ತಿದ್ದಾರೆ. ಎಲ್ಲ ಶಾಸಕರಿಗೆ ಸಮಾನ ಅನುದಾನ ನೀಡಬೇಕು. ಇದರಿಂದ ಸಮಾನ ಅಭಿವೃದ್ಧಿ ಸಾಧ್ಯ ಎಂದರು.

ಬೆಂಗಳೂರಿನಲ್ಲಿ ಗಟ್ಟಿಯಾದ ಕಲ್ಲು ಇರುವುದರಿಂದ ಸುರಂಗ ಮಾಡುವುದು ಕಷ್ಟ. ಅದರ ಬದಲು ಮೆಟ್ರೊ ಯೋಜನೆಗೆ ಒತ್ತು ನೀಡಬಹುದಿತ್ತು. ಮೊದಲು ಮೇಲಿನ ರಸ್ತೆಗಳನ್ನು ಅಭಿವೃದ್ಧಿಪಡಿಸಿದರೆ ಸಾಕು.

ಬೆಂಗಳೂರನ್ನು ಒಡೆದರೆ ನಾಡಪ್ರಭು ಕೆಂಪೇಗೌಡರಿಗೆ ಅಪಮಾನವಾಗುತ್ತದೆ. ಒಡೆಯುವುದು ಕಾಂಗ್ರೆಸ್‌ನ ಬುದ್ಧಿ. ಅಭಿವೃದ್ಧಿ ಮಾಡುವುದರ ಬದಲು ಒಡೆಯುವುದು ಸರಿಯಲ್ಲ. ಬ್ರ್ಯಾಂಡ್‌ ಬೆಂಗಳೂರಿನ ಹೆಸರಲ್ಲಿ ಇದುವರೆಗೆ ಒಂದು ಯೋಜನೆಯೂ ಜಾರಿಯಾಗಿಲ್ಲ ಎಂದರು.

ಬಿಜೆಪಿ ಸರ್ಕಾರ ಇದ್ದಾಗ ಕೇಳಿದ್ದ ಮನೆಯನ್ನೇ ಕೊಡಲಾಗುತ್ತಿತ್ತು. ಕಳೆದೆರಡು ವರ್ಷಗಳಿಂದ ಮನೆ ನೀಡಲು ಅನೇಕ ಪತ್ರಗಳನ್ನು ಬರೆದರೂ ಸರ್ಕಾರ ಸ್ಪಂದಿಸಿಲ್ಲ. ನೀತಿ ಸಂಹಿತೆ, ಶಿಷ್ಟಾಚಾರದ ಬಗ್ಗೆ ಪ್ರಧಾನಮಂತ್ರಿಗೂ ಪತ್ರ ಬರೆಯುವ ಇವರು, ಇಲ್ಲಿ ಶಿಷ್ಟಾಚಾರ ಪಾಲಿಸುತ್ತಿಲ್ಲ. ವಿರೋಧ ಪಕ್ಷದ ನಾಯಕನಾದ ನನಗೆ ಮನೆ ನೀಡಲು ಸರ್ಕಾರಕ್ಕೆ ಸಾಧ್ಯವಾಗಿಲ್ಲ ಎಂದರು.

ಸರ್ಕಾರದಲ್ಲಿ ಹಣವಿಲ್ಲ. ಒಂದು ರೂಪಾಯಿ ಖರ್ಚು ಮಾಡುವಾಗ ಕೂಡ ಬಹಳ ಯೋಚನೆ ಮಾಡಬೇಕು. ಅದಕ್ಕಾಗಿ ಬೀದಿ ವ್ಯಾಪಾರಿಗಳಿಂದ ಬರುವ ಜಿಎಸ್‌ಟಿ ಹೆಚ್ಚಿಸಲು ರಾಜ್ಯ ಸರ್ಕಾರ ಕುತಂತ್ರ ಮಾಡಿದೆ.

ಈ ಮೂಲಕ ಕೇಂದ್ರ ಸರ್ಕಾರದ ಮೇಲೆ ಆರೋಪ ಹೊರಿಸಲಾಗಿದೆ. ಇದರಿಂದ ದೇಶದ ಆರ್ಥಿಕ ವ್ಯವಸ್ಥೆಗೂ ಹಾನಿಯಾಗಲಿದೆ. ಜನರಿಗೆ ಅನ್ಯಾಯವಾಗಿದ್ದರೆ ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ತಿಳಿಸಲಾಗುವುದು ಎಂದರು.

ರಾಜಕೀಯ

ರಾಜ್ಯ ಬಿಜೆಪಿಯಲ್ಲಿ ಯಾವುದೇ ಭಿನ್ನಮತಿಯ ಚಟುವಟಿಕೆ ಇಲ್ಲ: ಬಸವರಾಜ ಬೊಮ್ಮಾಯಿ

ರಾಜ್ಯ ಬಿಜೆಪಿಯಲ್ಲಿ ಯಾವುದೇ ಭಿನ್ನಮತಿಯ ಚಟುವಟಿಕೆ ಇಲ್ಲ: ಬಸವರಾಜ ಬೊಮ್ಮಾಯಿ

ರಾಜ್ಯ ಬಿಜೆಪಿಯಲ್ಲಿ ಭಿನ್ನಮತವಿದೆಯಾ ಎಂದು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ರಾಜ್ಯ ಬಿಜೆಪಿಯಲ್ಲಿ ಯಾವುದೇ ಭಿನ್ನಮತಿಯ ಚಟುವಟಿಕೆ ಇಲ್ಲ: Basavaraj Bommai

[ccc_my_favorite_select_button post_id="111273"]
ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಿ: ಬಿ.ವೈ.ವಿಜಯೇಂದ್ರ

ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಿ: ಬಿ.ವೈ.ವಿಜಯೇಂದ್ರ

ಸಿದ್ದರಾಮಯ್ಯನವರು ಮತ್ತು ಕಾಂಗ್ರೆಸ್ ಪಕ್ಷದ ವರಿಷ್ಠರನ್ನು ಪ್ರಶ್ನಿಸಲು ಬಯಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ (B.Y. Vijayendra) ಅವರು ತಿಳಿಸಿದ್ದಾರೆ.

[ccc_my_favorite_select_button post_id="111198"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
Drink & Drive: ಮದ್ಯಪಾನ ಮಾಡಿ ವಾಹನ ಚಲಾವಣೆ ಮಾಡಿದ ಚಾಲಕನಿಗೆ 12,500 ರೂ. ದಂಡ.!

Drink & Drive: ಮದ್ಯಪಾನ ಮಾಡಿ ವಾಹನ ಚಲಾವಣೆ ಮಾಡಿದ ಚಾಲಕನಿಗೆ 12,500

ಮದ್ಯಪಾನ ಮಾಡಿ ವಾಹನ ಚಾಲನೆ (Drink & Drive) ಮಾಡಿದ ಆರೋಪಿಗೆ ನ್ಯಾಯಾಲಯ ರೂ.12 ಸಾವಿರ 500 ದಂಡ ವಿಧಿಸಿದೆ

[ccc_my_favorite_select_button post_id="111318"]
Accident; ರಾಷ್ಟ್ರೀಯ ಹೆದ್ದಾರಿಯಲ್ಲಿ ಮಗುಚಿ ಬಿದ್ದ ಲಾರಿ.. ಮಾವಿನ ಕಾಯಿಗಾಗಿ ಮುಗಿಬಿದ್ದ ಜನ

Accident; ರಾಷ್ಟ್ರೀಯ ಹೆದ್ದಾರಿಯಲ್ಲಿ ಮಗುಚಿ ಬಿದ್ದ ಲಾರಿ.. ಮಾವಿನ ಕಾಯಿಗಾಗಿ ಮುಗಿಬಿದ್ದ ಜನ

ಮಾವಿನ ಕಾಯಿ ತುಂಬಿಕೊಂಡು ಸಾಗುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪೊ ಮಗುಚಿ ಬಿದ್ದಿರುವ ಘಟನೆ (Accident)

[ccc_my_favorite_select_button post_id="111232"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!