BJP, which criticized the guarantee scheme, is now copying it in other states: DCM D.K. Shivakumar

ಗ್ಯಾರಂಟಿ ಯೋಜನೆ ಟೀಕಿಸಿದ್ದ ಬಿಜೆಪಿ ಈಗ ಬೇರೆ ರಾಜ್ಯಗಳಲ್ಲಿ ಅದನ್ನೇ ನಕಲು ಮಾಡುತ್ತಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ಮೈಸೂರು: “ಕಾಂಗ್ರೆಸ್ ಸರ್ಕಾರದ ಅಭಿವೃದ್ಧಿ ಯೋಜನೆಗಳು ಜನರ ಕಣ್ಣಿಗೆ ಕಾಣುತ್ತಿವೆ. ನಮ್ಮ ಗ್ಯಾರಂಟಿ ಟೀಕಿಸಿದ್ದ ಬಿಜೆಪಿ ಬೇರೆ ರಾಜ್ಯಗಳಲ್ಲಿ ಅದನ್ನೇ ನಕಲು ಮಾಡುತ್ತಿದೆ. ವಿರೋಧ ಪಕ್ಷಗಳ ಟೀಕೆಗಳು ಸಾಯುತ್ತವೆ, ನಮ್ಮ ಕೆಲಸ ಉಳಿಯುತ್ತವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K.Shivakumar) ಅವರು ತಿಳಿಸಿದರು.

ಮೈಸೂರಿನಲ್ಲಿ ಶನಿವಾರ ನಡೆದ ವಿವಿಧ ಇಲಾಖೆಗಳ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಶಿವಕುಮಾರ್ ಅವರು ಮಾತನಾಡಿದರು.

“ನಮ್ಮ ಗ್ಯಾರಂಟಿ ಯೋಜನೆಗಳು ದೇಶಕ್ಕೇ ಮಾದರಿ. ಈ ಗ್ಯಾರಂಟಿ ಯೋಜನೆಗಳು ಸುಳ್ಳು, ಇದರಿಂದ ರಾಜ್ಯ ದಿವಾಳಿಯಾಗುತ್ತದೆ ಎಂದು ಪ್ರಧಾನಮಂತ್ರಿಗಳಿಂದ ಹಿಡಿದು ರಾಜ್ಯದ ಬಿಜೆಪಿ ನಾಯಕರವರೆಗೂ ಎಲ್ಲರೂ ಟೀಕೆ ಮಾಡಿದರು. ನಂತರ ನಡೆದ ಮಧ್ಯಪ್ರದೇಶ, ಮಹಾರಾಷ್ಟ್ರ, ದೆಹಲಿ, ಹರಿಯಾಣ ಸೇರಿದಂತೆ ಬೇರೆ ರಾಜ್ಯಗಳ ಚುನಾವಣೆಯಲ್ಲಿ ಕಾಂಗ್ರೆಸ್ ಗಿಂತ ಮೊದಲೇ ಗ್ಯಾರಂಟಿ ಯೋಜನೆ ಘೋಷಣೆ ಮಾಡಿದ್ದಾರೆ. ಇತ್ತೀಚೆಗೆ ಬಿಹಾರದಲ್ಲೂ ನಮ್ಮದೇ ಗ್ಯಾರಂಟಿ ಯೋಜನೆ ನಕಲು ಮಾಡಿದ್ದಾರೆ” ಎಂದು ಟೀಕಿಸಿದರು.

“ಕಮಲ ಕೆರೆಯಲ್ಲಿದ್ದರೆ ಚೆಂದ, ತೆನೆ ಹೊಲದಲ್ಲಿದ್ದರೆ ಚೆಂದ, ದಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿದ್ದರೆ ಚೆಂದ. ದಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿರುವ ಕಾರಣ ಜನರ ಬದುಕಿಗಾಗಿ ಐದು ಗ್ಯಾರಂಟಿ ಯೋಜನೆಗಳನ್ನು ನೀಡಲಾಗಿದೆ. ಆ ಮೂಲಕ ರಾಜ್ಯದ ಜನರ ಋಣ ತೀರಿಸಲಾಗುತ್ತಿದೆ” ಎಂದರು.

“ಐದು ಬೆರಳು ಸೇರಿ ಕೈ ಮುಷ್ಟಿಯಾಯಿತು, ಐದು ಗ್ಯಾರಂಟಿ ಸೇರಿ ಕೈ ಗಟ್ಟಿಯಾಯಿತು. ನಾವು ಮಾಡಿದ ಕೆಲಸಗಳು ಜನರ ಕಣ್ಣಿಗೆ ಕಾಣುತ್ತಿವೆ. ನಾವು ಇಲ್ಲಿಗೆ ಜನರಿಂದ ಜೈಕಾರ ಹಾಕಿಸಿಕೊಳ್ಳಲು ಬಂದಿಲ್ಲ. ನಿಮ್ಮ ಋಣ ತೀರಿಸಲು ಬಂದಿದ್ದೇವೆ. ನಮ್ಮ ಸರ್ಕಾರ ಬಂದ ನಂತರ ನಾನು ಹಾಗೂ ಸಿದ್ದರಾಮಯ್ಯ ಅವರು ತಾಯಿ ಚಾಮುಂಡೇಶ್ವರಿ ದೇವಾಲಯಕ್ಕೆ ಹೋಗಿ ಐದು ವರ್ಷದ ಗೃಹಲಕ್ಷ್ಮೀ ಯೋಜನೆ ಹಣವನ್ನು ತಾಯಿಯ ಪಾದಕ್ಕೆ ಅರ್ಪಿಸಿ ಆಶೀರ್ವಾದ ಪಡೆದೆವು” ಎಂದು ಹೇಳಿದರು.

“ರಾಹುಲ್ ಗಾಂಧಿ ಅವರು ಭಾರತ ಜೋಡೋ ಯಾತ್ರೆ ನಡೆಸಿದರು. ನಮ್ಮ ರಾಜ್ಯದಲ್ಲಿ ರಾಹುಲ್ ಗಾಂಧಿ ಯಾತ್ರೆ ನಡೆಸಿದ ಎಲ್ಲಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ. ಇದೇ ಸಂದರ್ಭದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಎಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾದರು” ಎಂದರು.

ವಿರೋಧ ಪಕ್ಷಗಳ ಅಪಪ್ರಚಾರಕ್ಕೆ ಉತ್ತರ ಸಿಕ್ಕಿದೆ

“ರಾಜ್ಯದಲ್ಲಿ ಅಭಿವೃದ್ಧಿ ಆಗುತ್ತಿಲ್ಲ, ಸರ್ಕಾರದಲ್ಲಿ ಹಣವಿಲ್ಲ ಎಂದು ವಿರೋಧ ಪಕ್ಷಗಳು ಅಪಪ್ರಚಾರ ಮಾಡುತ್ತಿವೆ. ಕಲ್ಯಾಣ ಕರ್ನಾಟಕಕ್ಕೆ ನಮ್ಮ ಸರ್ಕಾರ ಪ್ರತಿ ವರ್ಷ 5 ಸಾವಿರ ಕೋಟಿ ಅನುದಾನ ನೀಡುತ್ತಿದೆ. ಬೀದರ್ ನಲ್ಲಿ 2025 ಕೋಟಿ ಮೊತ್ತದ ಯೋಜನೆಗೆ ಚಾಲನೆ ನೀಡಿದ್ದೇವೆ. ಇತ್ತೀಚೆಗೆ ಇಂಡಿಯಲ್ಲಿ 3400 ಕೋಟಿ ಮೊತ್ತದ ಯೋಜನೆಗಳಿಗೆ ಚಾಲನೆ ನೀಡಿದೆವು. ಇಂದು ಮೈಸೂರಿನಲ್ಲಿ 2 ಸಾವಿರ ಕೋಟಿಗೂ ಹೆಚ್ಚಿನ ಅನುದಾನದಲ್ಲಿ 74 ಯೋಜನೆಗಳಿಗೆ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿದ್ದೇವೆ” ಎಂದರು.

“ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ ಮಾಡಿ, 3 ಸಾವಿರ ಕೋಟಿಗೂ ಹೆಚ್ಚು ಮೊತ್ತದ ಯೋಜನೆ, ವಿಜಯನಗರದಲ್ಲಿ 2 ಸಾವಿರ ಕೋಟಿಗೂ ಹೆಚ್ಚು ಮೊತ್ತದ ಯೋಜನೆಗಳು, ನಂದಿ ಬೆಟ್ಟದಲ್ಲಿ ಸುಮಾರು 2 ಸಾವಿರ ಕೋಟಿಗೂ ಹೆಚ್ಚು ಮೊತ್ತದ ಕಾಮಗಾರಿಗಳಿಗೆ ಅನುಮೋದನೆ ನೀಡಿದ್ದೇವೆ. ನಾವು ಭಾವನೆ ಮೇಲೆ ರಾಜಕೀಯ ಮಾಡುವುದಿಲ್ಲ, ಬದುಕಿನ ಮೇಲೆ ರಾಜಕೀಯ ಮಾಡುತ್ತೇವೆ” ಎಂದು ತಿಳಿಸಿದರು.

“ನಮ್ಮ ಸರ್ಕಾರ ದೇವಾಲಯವಿದ್ದಂತೆ. ಆರೋಗ್ಯ, ನೆಮ್ಮದಿಯ ಬದುಕು, ಉತ್ತಮ ಬೆಳೆ, ಆರ್ಥಿಕ ಪ್ರಗತಿ ಹೊಂದಲು ದೇವರಲ್ಲಿ ಪ್ರಾರ್ಥಿಸಲು ನಾವು ದೇವಾಲಯಕ್ಕೆ ಹೋಗುತ್ತೇವೆ. ಕಳೆದ 92 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಕಾವೇರಿ ತಾಯಿ ಜೂನ್ ತಿಂಗಳಲ್ಲಿ ತುಂಬಿದ್ದಾಳೆ. ನಾನು ಹಾಗೂ ಸಿಎಂ ಜೂನ್ 230ರಂದು ಬಂದು ಕಾವೇರಿ ತಾಯಿಗೆ ಬಾಗಿನ ಅರ್ಪಿಸಿ ಪೂಜಿಸಿದ್ದೇವೆ. ಕಾಂಗ್ರೆಸ್ ಸರ್ಕಾರ ಬಂದರೆ ಬರಗಾಲ ಬರುತ್ತದೆ ಎಂಬ ಬಿಜೆಪಿ ಅಪಪ್ರಚಾರ ನುಚ್ಚು ನೂರಾಗಿದೆ” ಎಂದರು.

ಹಸ್ತ ಜನರ ಬದುಕಿಗೆ ಆಸರೆಯಾಗಿದೆ

“ಇದು ನಿಮ್ಮ ಹಸ್ತ. ಈ ಹಸ್ತ ಟೀಕೆ ಮಾಡುವ ವಿರೋಧಿಗಳ ಬಾಯಿ ಮುಚ್ಚಿಸಿದೆ, ರೈತರನ್ನು ಉಳಿಸಿದೆ, ಮಹಿಳೆಯರಿಗೆ ಶಕ್ತಿ ತುಂಬಿದೆ, ಬೆಲೆ ಏರಿಕೆ ಸಮಸ್ಯೆಗೆ ಪರಿಹಾರ ಕೊಟ್ಟಿದೆ. ಪ್ರತಿ ತಿಂಗಳು ಸುಮಾರು 5 ಸಾವಿರದಷ್ಟು ಆರ್ಥಿಕವಾಗಿ ಶಕ್ತಿ ನೀಡುತ್ತಿದೆ” ಎಂದರು.

“ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗೆಲ್ಲಾ ಉಳುವವನಿಗೆ ಭೂಮಿ, ಬಡವರಿಗೆ ಮನೆ, ನಿವೇಶನ, ವಿವಿಧ ಪಿಂಚಣಿ ಯೋಜನೆ, ಅಂಗನವಾಡಿ, ಆದಿವಾಸಿಗಳಿಗೆ ಭೂಮಿ, ಶೈಕ್ಷಣಿಕ ಹಕ್ಕು, ಆಹಾರ ಭದ್ರತೆ, ಉದ್ಯೋಗ ಖಾತರಿ ಹೀಗೆ ಅನೇಕ ಯೋಜನೆಗಳನ್ನು ಜಾರಿ ಮಾಡಿದೆ. ರಾಹುಲ್ ಗಾಂಧಿ ಅವರೊಂದಿಗೆ ಪಾದಯಾತ್ರೆಯಲ್ಲಿ ಸಾಗುವಾಗ ವಯಸ್ಸಾದ ಮಹಿಳೆ ಸೌತೆಕಾಯಿ ತಂದು ರಾಹುಲ್ ಗಾಂಧಿ ಅವರಿಗೆ ಕೊಟ್ಟು, ಇದು ನಿಮ್ಮ ಅಜ್ಜಿ ಕೊಟ್ಟ ಭೂಮಿಯಲ್ಲಿ ಬೆಳೆದಿದ್ದೇನೆ ಎಂದರು. ಇಂತಹ ಯಾವುದಾದರೂ ಒಂದು ಕಾರ್ಯಕ್ರಮವನ್ನು ಬಿಜೆಪಿ ಅಥವಾ ಜೆಡಿಎಸ್ ಕೊಟ್ಟಿದೆಯೇ?” ಎಂದು ಸವಾಲೆಸೆದರು.

“ಈ ಕಾರ್ಯಕ್ರಮ ಮಾಡಿರುವುದು ಚುನಾವಣೆಗಾಗಿ ಅಲ್ಲ. ನೀವು ಕೊಟ್ಟ ಶಕ್ತಿಯಿಂದ ನಿಮ್ಮ ಋಣ ತೀರಿಸಲು. ಸಾಮಾಜಿಕ, ಆರ್ಥಿಕ, ಶೈಕ್ಷಣಿಕವಾಗಿ ನ್ಯಾಯ ಒದಗಿಸಿಕೊಟ್ಟಿರುವುದನ್ನು ತಿಳಿಸಲು ಈ ಕಾರ್ಯಕ್ರಮ ಮಾಡುತ್ತಿದ್ದೇವೆ. ನಮ್ಮನ್ನು ಟೀಕಿಸಬಹುದು. ನಿಂದಕರು ಇದ್ದಾಗ ಮಾತ್ರ ನಾವು ಎಚ್ಚರಿಕೆಯಿಂದ ಕೆಲಸ ಮಾಡಲು ಸಾಧ್ಯ. ಯಾರು ಎಷ್ಟೇ ಟೀಕೆ ಮಾಡಿದರೂ ನಮ್ಮ ಸರ್ಕಾರ ಮುಂದೆ ಸಾಗುತ್ತಿರುತ್ತದೆ” ಎಂದರು.

“ಕಾವೇರಿ ಜಲಾನಯನ ಪ್ರದೇಶಕ್ಕೆ 3 ಸಾವಿರ ಕೋಟಿ ಅನುದಾನವನ್ನು ನೀಡಿ ಪ್ರತ್ಯೇಕ ಕಾರ್ಯಕ್ರಮ ರೂಪಿಸಲಾಗಿದೆ. ವಿದ್ಯಾ ಕ್ಷೇತ್ರದಲ್ಲಿ ಕ್ರಾಂತಿ ತರಲು ರಾಜ್ಯದಲ್ಲಿ 2 ಸಾವಿರ ಕೆಪಿಎಸ್ ಶಾಲೆ ನಿರ್ಮಾಣಕ್ಕೆ ಮುಂದಾಗಿದ್ದೇವೆ” ಎಂದರು.

“ಕಳೆದ ವರ್ಷ ನಡೆದ ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದಿತ್ತು. ನಾವು ಇಬ್ಬರು ಮಾಜಿ ಮುಖ್ಯಮಂತ್ರಿಗಳ ಮಕ್ಕಳನ್ನು ಸೋಲಿಸಿದ್ದೇವೆ. ಆಮೂಲಕ ಮತದಾರ ಸಂದೇಶ ರವಾನಿಸಿ ನಮಗೆ ಆತ್ಮಬಲ ತುಂಬಿದ್ದಾರೆ. 2028ರ ಚುನಾವಣೆಯಲ್ಲಿ ನೀವು ಇನ್ನು ಹೆಚ್ಚಿನ ಕ್ಷೇತ್ರಗಳಲ್ಲಿ ಗೆಲ್ಲಿಸಿ ಆಶೀರ್ವಾದ ಮಾಡಬೇಕು. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ತಂದು ನಿಮ್ಮ ಸೇವೆ ಮಾಡಲು ಅವಕಾಶ ನೀಡಬೇಕು. ಮಲ್ಲಿಕಾರ್ಜುನ ಖರ್ಗೆ ಅವರ ನಾಯಕತ್ವ, ಸಿಎಂ ಸಿದ್ದರಾಮಯ್ಯ ಅವರ ಮುಖಂಡತ್ವದಲ್ಲಿ ನಾನು ಹಾಗೂ ಎಲ್ಲಾ ಸಚಿವರು ಒಗ್ಗಟ್ಟಾಗಿ ಕೆಲಸ ಮಾಡಿ ನಿಮ್ಮ ಋಣ ತೀರಿಸುತ್ತೇವೆ” ಎಂದು ಭರವಸೆ ನೀಡಿದರು.

ರಾಜಕೀಯ

ಗ್ಯಾರಂಟಿ ಯೋಜನೆ ಟೀಕಿಸಿದ್ದ ಬಿಜೆಪಿ ಈಗ ಬೇರೆ ರಾಜ್ಯಗಳಲ್ಲಿ ಅದನ್ನೇ ನಕಲು ಮಾಡುತ್ತಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ಗ್ಯಾರಂಟಿ ಯೋಜನೆ ಟೀಕಿಸಿದ್ದ ಬಿಜೆಪಿ ಈಗ ಬೇರೆ ರಾಜ್ಯಗಳಲ್ಲಿ ಅದನ್ನೇ ನಕಲು ಮಾಡುತ್ತಿದೆ:

ಬಿಜೆಪಿ ಬೇರೆ ರಾಜ್ಯಗಳಲ್ಲಿ ಅದನ್ನೇ ನಕಲು ಮಾಡುತ್ತಿದೆ. ವಿರೋಧ ಪಕ್ಷಗಳ ಟೀಕೆಗಳು ಸಾಯುತ್ತವೆ, ನಮ್ಮ ಕೆಲಸ ಉಳಿಯುತ್ತವೆ: ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar)

[ccc_my_favorite_select_button post_id="111370"]
ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಿ: ಬಿ.ವೈ.ವಿಜಯೇಂದ್ರ

ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಿ: ಬಿ.ವೈ.ವಿಜಯೇಂದ್ರ

ಸಿದ್ದರಾಮಯ್ಯನವರು ಮತ್ತು ಕಾಂಗ್ರೆಸ್ ಪಕ್ಷದ ವರಿಷ್ಠರನ್ನು ಪ್ರಶ್ನಿಸಲು ಬಯಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ (B.Y. Vijayendra) ಅವರು ತಿಳಿಸಿದ್ದಾರೆ.

[ccc_my_favorite_select_button post_id="111198"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಮಲಗಿದ್ದ ವೇಳೆ ಮನೆಯಲ್ಲಿ ಬೆಂಕಿ.. ವ್ಯಕ್ತಿ ಸಾವು.!

ದೊಡ್ಡಬಳ್ಳಾಪುರ: ಮಲಗಿದ್ದ ವೇಳೆ ಮನೆಯಲ್ಲಿ ಬೆಂಕಿ.. ವ್ಯಕ್ತಿ ಸಾವು.!

ಆಕಸ್ಮಿಕವಾಗಿ ತಗುಲಿದ ಬೆಂಕಿಯ (Fire) ಕೆನ್ನಾಲಿಗೆಗೆ ಮನೆಯಲ್ಲಿ ಮಲಗಿದ್ದ ವೇಳೆ ವ್ಯಕ್ತಿಯೋರ್ವ ಸುಟ್ಟು ಸಾವನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ

[ccc_my_favorite_select_button post_id="111353"]
Accident; ರಾಷ್ಟ್ರೀಯ ಹೆದ್ದಾರಿಯಲ್ಲಿ ಮಗುಚಿ ಬಿದ್ದ ಲಾರಿ.. ಮಾವಿನ ಕಾಯಿಗಾಗಿ ಮುಗಿಬಿದ್ದ ಜನ

Accident; ರಾಷ್ಟ್ರೀಯ ಹೆದ್ದಾರಿಯಲ್ಲಿ ಮಗುಚಿ ಬಿದ್ದ ಲಾರಿ.. ಮಾವಿನ ಕಾಯಿಗಾಗಿ ಮುಗಿಬಿದ್ದ ಜನ

ಮಾವಿನ ಕಾಯಿ ತುಂಬಿಕೊಂಡು ಸಾಗುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪೊ ಮಗುಚಿ ಬಿದ್ದಿರುವ ಘಟನೆ (Accident)

[ccc_my_favorite_select_button post_id="111232"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!