ದೊಡ್ಡಬಳ್ಳಾಪುರ: ಆಕಸ್ಮಿಕವಾಗಿ ತಗುಲಿದ ಬೆಂಕಿಯ (Fire) ಕೆನ್ನಾಲಿಗೆಗೆ ಮನೆಯಲ್ಲಿ ಮಲಗಿದ್ದ ವೇಳೆ ವ್ಯಕ್ತಿಯೋರ್ವ ಸುಟ್ಟು ಸಾವನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಕನ್ನಮಂಗಲ ಕಾಲೋನಿಯಲ್ಲಿ ಸಂಭವಿಸಿದೆ.
ಅಗ್ನಿ ಅವಘಡದಿಂದ 35 ವರ್ಷದ ಉದಯಕುಮಾರ್ ಎನ್ನುವವರು ಸಾವನಪ್ಪಿದ್ದಾರೆ.
ಶುಕ್ರವಾರ ರಾತ್ರಿ ಘಟನೆ ಸಂಭವಿಸಿದ್ದು, ಮನೆಯಲ್ಲಿ ಯಾರು ಇರದ ವೇಳೆ ದುರ್ಘಟನೆ ಸಂಭವಿಸಿದೆ.
ಬೆಂಕಿ ನಂದಿಸಿ, ವ್ಯಕ್ತಿಯನ್ನು ರಕ್ಷಿಸಲು ಸ್ಥಳೀಯರು ಪ್ರಯತ್ನಿಸಿದ್ದರಾದರೂ, ಬಟ್ಟೆಗಳಿಗೆ ಬೆಂಕಿ ಹೊತ್ತಿಕೊಂಡಿದ್ದ ಪರಿಣಾಮ ಉದಯಕುಮಾರ್ ಸುಟ್ಟ ಗಾಯಗಳೊಂದಿಗೆ ಸಾವನಪ್ಪಿದ್ದಾರೆ.
ವಿಷಯ ತಿಳಿದ ದೊಡ್ಡಬೆಳವಂಗಲ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ಪರಿಶೀಲನೆ ನಡೆಸಿದ್ದಾರೆ.
ಈ ಕುರಿತಂತೆ ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ಸಾಂದರ್ಭಿಕ ಚಿತ್ರ ಬಳಸಲಾಗಿದೆ)